ಶ್ರೀಗಳ ಕೇಸ್, ವಿಚಾರಣೆಯಿಂದ ಹಿಂದೆ ಸರಿದ ಜಡ್ಜ್

ಬೆಂಗಳೂರು, ಜ. 7 : ರಾಮಚಂದ್ರಾಪುರ ಮಠದ ರಾಘವೇಶ್ವರ ಶ್ರೀಗಳ ವಿರುದ್ಧದ ಅತ್ಯಾಚಾರ ಪ್ರಕರಣದ ವಿಚಾರಣೆ ನಡೆಸುತ್ತಿದ್ದ ಮತ್ತೊಬ್ಬರು ನ್ಯಾಯಮೂರ್ತಿಗಳು ವಿಚಾರಣೆಯಿಂದ ಹಿಂದೆ ಸರಿದಿದ್ದಾರೆ. ಈ ಹಿಂದೆ ನ್ಯಾಯಮೂರ್ತಿ ಕೆ.ಎನ್.ಫಣೀಂದ್ರ ಅವರು ವಿಚಾರಣೆಯಿಂದ ಹಿಂದೆ ಸರಿದಿದ್ದರು.

ರಾಘವೇಶ್ವರ ಶ್ರೀಗಳು ತಮ್ಮ ವಿರುದ್ಧ ದಾಖಲಾಗಿರುವ ಅತ್ಯಾಚಾರ ಪ್ರಕರಣವನ್ನು ರದ್ದು ಮಾಡು­ವಂತೆ ಕೋರಿ ಸಲ್ಲಿಸಿದ್ದ ಅರ್ಜಿಯ ಮೇಲ್ಮನವಿಯ ವಿಚಾರಣೆ ಮಂಗಳವಾರ ಮುಖ್ಯ ನ್ಯಾಯಮೂರ್ತಿ ಡಿ.ಎಚ್.ವಘೇಲಾ, ನ್ಯಾಯಮೂರ್ತಿ ರಾಮ­ಮೋಹನ ರೆಡ್ಡಿ ಅವರಿದ್ದ ವಿಭಾ­ಗೀಯ ಪೀಠದಲ್ಲಿ ನಡೆಯಿತು. [ಶ್ರೀಗಳ ಪ್ರಕರಣ, ವಿಚಾರಣೆಯಿಂದ ಹಿಂದೆ ಸರಿದ ಜಡ್ಜ್]

ಬೆಳಗ್ಗೆ ಶ್ರೀಗಳ ಪರ ವಾದ ಮಂಡಿಸಿದ ಹಿರಿಯ ವಕೀಲ ಬಿ.ವಿ. ಆಚಾರ್ಯ ಅವರು, ನನ್ನ ಕಕ್ಷಿ­ದಾರರು ಅತ್ಯಾಚಾರ ಎಸಗಿಲ್ಲ. ಇದೆಲ್ಲಾ ಸುಳ್ಳು ಆರೋಪ ಎಂದು ಪ್ರತಿಪಾದಿಸಿದರು. ಶ್ರೀಗಳ ವಿರುದ್ಧದ ಪ್ರಕರಣವನ್ನು ರದ್ದುಗೊಳಿಸಬೇಕು ಎಂದು ಕೋರ್ಟ್‌ಗೆ ಮನವಿ ಮಾಡಿದರು. [ರಾಘವೇಶ್ವರ ಶ್ರೀಗಳಿಗೆ ನಿಷ್ಠ : ಹವ್ಯಕ ಮಹಾಮಂಡಲ]

Ramachandrapura Math

ಅರ್ಜಿಯ ವಿಚಾರಣೆ ವೇಳೆ ಮುಖ್ಯ ನ್ಯಾಯಮೂರ್ತಿಗಳು ಪ್ರಕರಣದ ಸಿಐಡಿ ತನಿಖೆ ನಡೆಯುತ್ತಿದೆ. ಇದು ಯಾವ ಹಂತದಲ್ಲಿದೆ? ಚಾರ್ಜ್‌ಶೀಟ್‌ ಸಲ್ಲಿಸ­ಲಾ­ಗಿ­ದೆಯೇ? ಮುಂತಾದ ಪ್ರಶ್ನೆಗಳನ್ನು ಕೇಳಿದರು. ಅಡ್ವೊಕೇಟ್‌ ಜನ­ರಲ್‌ ಪ್ರೊ.ರವಿವರ್ಮ ಕುಮಾರ್ ಅವರು ಬಾಕಿ ಉಳಿದಿರುವ ವೈದ್ಯಕೀಯ ಪರೀಕ್ಷೆಗೆ ತನಿಖಾಧಿಕಾರಿಗಳ ಜೊತೆ ಸ್ವಾಮೀಜಿ ಸಹಕರಿಸುತ್ತಿಲ್ಲ ಎಂದು ಕೋರ್ಟ್‌ಗೆ ಮಾಹಿತಿ ನೀಡಿದರು. [ರಾಘವೇಶ್ವರ ಶ್ರೀಗಳಿಗೆ 13 ಪರೀಕ್ಷೆ ಮಾಡಲಾಗಿದೆ]

ಈ ಕಾರಣಕ್ಕಾಗಿಯೇ ಸ್ವಾಮೀಜಿಯ­ವರ ನಿರೀಕ್ಷಣಾ ಜಾಮೀನು ರದ್ದು­ಗೊಳಿಸುವಂತೆ ಕೋರಿ ಮನವಿ ಸಲ್ಲಿಸಲಾ­ಗುತ್ತದೆ ಎಂದು ನ್ಯಾಯಾಲಯಕ್ಕೆ ತಿಳಿಸಿದರು. ತನಿಖೆಯ ಎಲ್ಲ ವಿವರಗಳನ್ನು ಒಪ್ಪಿಸಿ ಎಂದು ಸೂಚಿಸಿದ ಕೋರ್ಟ್ ಕಲಾಪವನ್ನು ಮುಂದೂಡಿತು.

ಆದರೆ, ಮಧ್ಯಾಹ್ನ ಕಲಾಪ ಆರಂಭವಾಗಿ ಪ್ರಕರಣ ವಿಚಾರಣೆಗೆ ಬರು­ತ್ತಿದ್ದಂತೆಯೇ ನ್ಯಾಯಮೂರ್ತಿ ರಾಮ­ಮೋಹನ ರೆಡ್ಡಿ ಅವರು ವಿಚಾರಣೆ­ಯಿಂದ ಹಿಂದೆ ಸರಿಯುತ್ತಿರುವುದಾಗಿ ಪ್ರಕಟಿಸಿದರು. ಹಿಂದೆ ಈ ಪ್ರಕರಣದ ಸಂಬಂಧ ಏಕ­ಸದಸ್ಯ ಪೀಠದ ನ್ಯಾಯಮೂರ್ತಿ ಕೆ.ಎನ್.ಫಣೀಂದ್ರ ಅವರೂ ವಿಚಾರಣೆಯಿಂದ ಹಿಂದೆ ಸರಿದಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+