ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರಾಜ್ಯ ಮಲೆನಾಡು, ಕರಾವಳಿ ಭಾಗದಲ್ಲಿ ಭಾರಿ ಮಳೆ ಎಚ್ಚರಿಕೆ

|
Google Oneindia Kannada News

ಬೆಂಗಳೂರು, ಜುಲೈ.17: ರಾಜ್ಯದ ಹಲವೆಡೆ ಈಗಾಗಲೇ ಮಳೆಯ ಅಬ್ಬರ ಜೋರಾಗಿದ್ದು, ಶುಕ್ರವಾರ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ರಾಜ್ಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

Recommended Video

ಗೋವಾ ಹೋಗೋ ಪ್ಲಾನ್ ಇದ್ರೆ ಮೊದಲು ಕ್ಯಾನ್ಸಲ್ ಮಾಡಿ. |Oneindia kannada

ಕಲಬುರಗಿ ಜಿಲ್ಲೆಯಲ್ಲಿ ಸತತವಾಗಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಭೀಮಾ ನದಿ ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಜಲಾಶಯಗಳ ಒಳ ಹರಿವು ಸಹ ಹೆಚ್ಚಳವಾಗಿದ್ದು, ಯಾರು ನದಿಯ ದಂಡೆಯ ಕಡೆಗೆ ಹೊಗದಂತೆ ಜಿಲ್ಲಾಧಿಕಾರಿ ಬಿ. ಶರತ್ ಆದೇಶಿಸಿದ್ದಾರೆ.

ಉಡುಪಿಯಲ್ಲಿ ಮುಂದಿನ ಆರು ದಿನ ಭಾರೀ ಮಳೆ; ಯಲ್ಲೋ ಅಲರ್ಟ್ ಘೋಷಣೆಉಡುಪಿಯಲ್ಲಿ ಮುಂದಿನ ಆರು ದಿನ ಭಾರೀ ಮಳೆ; ಯಲ್ಲೋ ಅಲರ್ಟ್ ಘೋಷಣೆ

ಮಲೆನಾಡಿನಲ್ಲಿ ಮಳೆಯ ಅಬ್ಬರ ಮುಂದುವರೆದಿದ್ದು, ಮೂಡಿಗೆರೆ, ಶೃಂಗೇರಿ, ಎನ್.ಆರ್.ಪುರ, ಕೊಪ್ಪದಲ್ಲಿ ಧಾರಾಕಾರ ಮಳೆಯಾಗಿದೆ. ಕೊಟ್ಟಿಗೆಹಾರ, ಚಾರ್ಮಾಡಿ ಘಾಟಿಯಲ್ಲಿ ಭಾರೀ ಮಳೆಯಾಗುತ್ತಿದ್ದು, ರಾತ್ರಿ ಸುರಿದ ಮಳೆಯಿಂದ ಜನಜೀವನ ಅಸ್ತವ್ಯಸ್ತಗೊಂಡಿದೆ. ಕಳೆದ ಎರಡು ದಿನಗಳಿಂದ ರಾತ್ರಿ ವೇಳೆ ಸುರಿಯುತ್ತಿರುವ ಮಳೆಯಿಂದ ತುಂಗಾ, ಭದ್ರಾ, ಹೇಮಾವತಿ ನದಿಗಳ ಹರಿವಿನ ಮಟ್ಟ ಹೆಚ್ಚಳವಾಗಿದೆ.

July.17th Karnataka Weather Report: Light And Moderate Rainfall In Many Areas

ರಾಜ್ಯದ ಹಲವೆಡೆ ಸಾಧಾರಣ ಮಳೆ:

ಕರ್ನಾಟಕದ ಹಲವೆಡೆ ಶುಕ್ರವಾರ ಸಾಧಾರಣ ಮತ್ತು ಅಲ್ಪಸ್ವಲ್ಪ ಮಳೆಯಾಗುವ ಸಾಧ್ಯತೆಯಿದ್ದು, ಮೋಡ ಮುಸುಗಿದ ವಾತಾವರಣ ನಿರ್ಮಾಣವಾಗಿದೆ. ಕಲಬುರಗಿ, ವಿಜಯಪುರ ಜಿಲ್ಲೆಯ ಇಂಡಿ, ಕೊಪ್ಪಳ, ಬಳ್ಳಾರಿ ಜಿಲ್ಲೆಯ ಹರಪನಹಳ್ಳಿ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಚಿಕ್ಕಬಳ್ಳಾಪುರ, ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಗಳಲ ಹಲವು ಪ್ರದೇಶಗಳಲ್ಲಿ ಅಲ್ಪಸ್ವಲ್ಪ ಮಳೆಯಾಗಿಲಿದೆ.

ಉತ್ತರ ಕರ್ನಾಟಕದ ಬಾಗಲಕೋಟೆ, ಬೆಳಗಾವಿ, ಧಾರವಾಡ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ರಾಜ್ಯದ ಮಲೆನಾಡು ಭಾಗ ಉತ್ತರ ಕನ್ನಡ, ಹಾವೇರಿ, ಶಿವಮೊಗ್ಗ, ಚಿಕ್ಕಮಗಳೂರಿನಲ್ಲೂ ವರುಣ ಅಟ್ಟಹಾಸ ಮೆರೆಯಲಿದ್ದಾನೆ. ದಕ್ಷಿಣ ಕರಾವಳಿ ಭಾಗವಾಗಿರುವ ದಕ್ಷಣ ಕನ್ನಡ, ಉಡುಪಿ ಮತ್ತು ಕೊಡಗು ಜಿಲ್ಲೆಯಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

English summary
July.17th Karnataka Weather Report: Light And Moderate Rainfall In Many Areas.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X