Gruhalakshmi Scheme: ಈ ದಿನ 4000 ರೂ ಗೃಹಲಕ್ಷ್ಮೀ ಹಣ ರಿಲೀಸ್‌: ಲಕ್ಷ್ಮೀ ಹೆಬ್ಬಾಳ್ಕರ್‌

ಮೈಸೂರು, ಸೆಪ್ಟೆಂಬರ್‌ 23: ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಮಹಿಳಾ ದಸರಾ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಈ ಒಂದು ಕಾರ್ಯಕ್ರಮವನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಉದ್ಘಾಟನೆ ಮಾಡಿದ್ದಾರೆ. ಆ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಗೃಹಲಕ್ಷ್ಮೀ 23 ಕಂತಿನ ಬಗ್ಗೆ ಒಂದಷ್ಟು ಮಾಹಿತಿಯನ್ನು ಹಂಚಿಕೊಂಡಿದ್ದಾರೆ.

ರಾಜ್ಯ ಸರ್ಕಾರ ತಂದ ಗ್ಯಾರಂಟಿ ಯೋಜನೆಯಿಂದ ರಾಜ್ಯದ ಮಹಿಳೆಯರಿಗೆ ಸಾಕಷ್ಟು ಅನುಕೂಲವಾಗಿದೆ. ಒಂದು ಕೋಟಿ ಇಪ್ಪತ್ತನಾಲ್ಕು ಲಕ್ಷ ಜನರಿಗೆ 22 ಕಂತಿನ ಹಣವನ್ನು ಈಗಾಗಲೇ ಬಿಡುಗಡೆ ಮಾಡಿದ್ದೇವೆ. ಈಗ ಜುಲೈ ತಿಂಗಳ 23 ಕಂತನ್ನು ಬಿಡುಗಡೆ ಮಾಡಿದ್ದಾವೆ. ದಸರಾ ಹಬ್ಬಕ್ಕೆ ಅನುಕೂಲವಾಗಲಿ ಅಂತ ಫಲಾನುಭವಿಗಳ ಬ್ಯಾಂಕ್‌ ಖಾತೆಗೆ ಗೃಹಲಕ್ಷ್ಮೀ ಹಣ ಜಮಾ ಮಾಡಲಾಗಿದೆ. 3 ದಿನದ ಹಿಂದೆ ಜುಲೈ ಕಂತು ಬಿಡುಗಡೆಯಾಗಿದೆ ಎಂದು ಹೇಳಿದ್ದಾರೆ.

July installment Grihalakshmi scheme money released Minister Lakshmi Hebbalkar

ಸಾಧಕರ ಸಾಧನೆಯನ್ನು ಗುರುತಿಸಿ ಅವರನ್ನು ಸನ್ಮಾನಿಸುವುದೇ ನಿಜವಾದ ದೊಡ್ಡ ಸಾಧನೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಸಮಾಜದಲ್ಲಿ ಸಾಧಕರನ್ನು ಗುರುತಿಸುವ ಕೆಲಸ ಆಗಬೇಕಿದೆ ಎಂದರು. ಇವತ್ತಿನ ದಿನಗಳಲ್ಲಿ ಹೋಟೆಲ್ ಉದ್ಯಮ ಎಂಬುದು ತಮಾಷೆ ಅಲ್ಲ. ಎಲ್ಲಾ ವರ್ಗದವರನ್ನು ಅತಿಥಿ ದೇವೋಭವ ಅಂತ ಸೇವೆ ಮಾಡುವುದೇ ಹೋಟೆಲ್ ಉದ್ಯಮದ ಕೆಲಸ. ಮೈಸೂರಿನ ಹೋಟೆಲ್ ಉದ್ಯಮಿಗಳು, ಸಹಕಾರ ಬ್ಯಾಂಕ್ ಸ್ಥಾಪಿಸುವ ಮೂಲಕ ಎಲ್ಲರಿಗೂ ಆಶ್ರಯ ನೀಡುತ್ತಿದ್ದಾರೆ ಎಂದು ಹೇಳಿದರು.

ನಾನು ಕೂಡ ಬೆಳಗಾವಿಯಲ್ಲಿ ಹೋಟೆಲ್‌ ಹೊಂದಿರುವೆ, ಎರಡು ಸಕ್ಕರೆ ಕಾರ್ಖಾನೆಯನ್ನು ಹೊಂದಿರುವೆ, ಹೀಗಾಗಿ ಹೋಟೆಲ್ ಉದ್ಯಮದ ಬಗ್ಗೆ ಅಲ್ಪ ಸ್ವಲ್ಪ ತಿಳಿದುಕೊಂಡಿರುವೆ ಎಂದರು. ಸಂಘಟನೆ, ಸಂಘ- ಸಂಸ್ಥೆಗಳನ್ನು ಕಟ್ಟುವುದು ತಮಾಷೆಯ ಮಾತಲ್ಲ. ಹಸಿದವರಿಗೆ ಅನ್ನ ಹಾಕುವ ಮೂಲಕ ಸಾಮಾಜಿಕ ಕಾರ್ಯಕ್ರಮವನ್ನು ಹೋಟೆಲ್ ಉದ್ಯಮದವರು ಮಾಡುತ್ತಿದ್ದಾರೆ. 25 ವರ್ಷಗಳ ಹಿಂದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಂದು ಈ ಸೊಸೈಟಿಗೆ ಅಡಿಗಲ್ಲು ಹಾಕಿದ್ದರು. ಅವರೇ ಬೆಳ್ಳಿ ಹಬ್ಬದ ಸಮಾರಂಭವನ್ನು ಉದ್ಘಾಟನೆ ಮಾಡಿದ್ದಾರೆ. ಇದು ನಿಜಕ್ಕೂ ಸೊಸೈಟಿಯ ದೊಡ್ಡ ಸಾಧನೆ. ಈ ಹೋಟೆಲ್ ಸೊಸೈಟಿ ಇನ್ನೂ ಎತ್ತರಕ್ಕೆ ಬೆಳೆಯಲಿ ಎಂದು ಹಾರೈಸಿದರು.

ಇವತ್ತು ಕರಾವಳಿ ಭಾಗದ ಉದ್ಯಮಿಗಳು ಅದರಲ್ಲೂ ಹೋಟೆಲ್ ಉದ್ಯಮಿಗಳು ದೇವಸ್ಥಾನದ ಜೀರ್ಣೋದ್ಧಾರಕ್ಕೆ ಒಂದೊಂದು ಕೋಟಿ ರೂ. ದೇಣಿಗೆ ನೀಡುತ್ತಾರೆ. ಇದು ಅವರ ಧನ್ಯತೆಯನ್ನು ತೋರುತ್ತದೆ‌ ಎಂದರು. ವಿವಿಧ ಸ್ತರದ ಮಹಿಳೆಯರನ್ನು ಗುರುತಿಸಿ ಸನ್ಮಾನಿಸಿರುವುದು ನಿಜಕ್ಕೂ ಹೆಮ್ಮೆಯ ವಿಷಯ. ಅದರಲ್ಲೂ ನರ್ಸ್ ಗಳ ಸೇವೆ ನಿಜಕ್ಕೂ ಶ್ಲಾಘನೀಯ, ನಾನು ಅಪಘಾತದಿಂದ ಆಸ್ಪತ್ರೆಯಲ್ಲಿದ್ದಾಗ ನರ್ಸ್ ಗಳೇ ನನಗೆ ಧೈರ್ಯ ತುಂಬಿದರು ಎಂದು ಹೇಳಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+