ಕರ್ನಾಟಕ ಹೈಕೋರ್ಟ್ ಸಿಜೆಯಾಗಿ ಎ.ಎಸ್.ಓಕಾ ನೇಮಕಕ್ಕೆ ಶಿಫಾರಸು

ಬೆಂಗಳೂರು, ಏಪ್ರಿಲ್ 10 : ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ಎ.ಎಸ್.ಓಕಾ ಅವರನ್ನು ನೇಮಕ ಮಾಡುವಂತೆ ಸುಪ್ರೀಂಕೋರ್ಟ್ ಕೊಲಿಜಿಯಂ ಶಿಫಾರಸು ಮಾಡಿದೆ. ಪ್ರಸ್ತುತ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ಹುದ್ದೆ ಖಾಲಿ ಇದೆ.

ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ರಂಜನ್ ಗೋಗೋಯ್ ಅವರ ನೇತೃತ್ವದ ಕೊಲಿಜಿಯಂ ಬಾಂಬೆ ಹೈಕೋರ್ಟ್‌ನ ಹಿರಿಯ ನ್ಯಾಯಮೂರ್ತಿಗಳಾದ ಎ.ಎಸ್.ಓಕಾ ಅವರನ್ನು ನೇಮಕ ಮಾಡುವಂತೆ ಶಿಫಾರಸು ಮಾಡಿದೆ.

Justice AS Oka name recommended for Karnataka High Court CJ post

ಮೇಘಾಲಯ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿದ್ದ ದಿನೇಶ್ ಮಹೇಶ್ವರಿ ಅವರು ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳಾಗಿದ್ದರು. ಕೆಲವು ದಿನಗಳ ಹಿಂದೆ ಅವರನ್ನು ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳಾಗಿ ನೇಮಕ ಮಾಡಿದ ಮೇಲೆ ಹುದ್ದೆ ತೆರವಾಗಿದೆ.

ನ್ಯಾಯಮೂರ್ತಿ ಅಭಯ್ ಶ್ರೀನಿವಾಸ್ ಓಕಾ (ಎ.ಎಸ್.ಓಕಾ) ಅವರು ಮೇ 25, 1960ರಂದು ಜನಿಸಿದರು. ಬಾಂಬೆ ವಿಶ್ವವಿದ್ಯಾಲಯದಿಂದ ಬಿಎಸ್‌ಸಿ, ಎಲ್‌ಎಲ್‌ಎಮ್ ಪದವಿ ಪಡೆದಿದ್ದಾರೆ. 1983, ಜೂನ್ 28ರಂದು ವಕೀಲರಾಗಿ ನೋಂದಣಿ ಮಾಡಿಕೊಂಡರು.

ಲೋಕಸಭಾ ಚುನಾವಣೆ ವಿಶೇಷ ಪುಟ

ಸಾರ್ವಜನಿಕ ಹಿತಾಸ್ತಕಿ ಅರ್ಜಿಯ ಹಲವಾರು ಪ್ರಕರಣಗಳಲ್ಲಿ ಎ.ಎಸ್.ಓಕಾ ಅವರು ವಾದ ಮಂಡಣೆ ಮಾಡಿದ್ದಾರೆ. 2003ರ ಆಗಸ್ಟ್ 23ರಂದು ಅವರು ಬಾಂಬೆ ಹೈಕೋರ್ಟ್ ಹೆಚ್ಚುವರಿ ನ್ಯಾಯಮೂರ್ತಿಗಳಾಗಿ ನೇಮಕವಾದರು.

2005ರ ನವೆಂಬರ್‌ 12ರಿಂದ ಬಾಂಬೆ ಹೈಕೋರ್ಟ್ ನ್ಯಾಯಮೂರ್ತಿಗಳಾಗಿ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಪ್ರಸ್ತುತ ಬಾಂಬೆ ಹೈಕೋರ್ಟ್‌ ಹಿರಿಯ ನ್ಯಾಯಮೂರ್ತಿಗಳಲ್ಲಿ ಒಬ್ಬರಾಗಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+