ಉಪ ಲೋಕಾಯುಕ್ತರಾಗಿ ನಿವೃತ್ತ ನ್ಯಾಯಮೂರ್ತಿ ಬಿ. ವೀರಪ್ಪ ನೇಮಕ
ಕೊನೆಗೂ ಕರ್ನಾಟಕ ಸರ್ಕಾರ ಎರಡನೇ ಉಪ ಲೋಕಾಯುಕ್ತರನ್ನು ನೇಮಕ ಮಾಡಿದೆ. ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಬಿ. ವೀರಪ್ಪ ಅವರನ್ನು ಉಪಲೋಕಾಯುಕ್ತರನ್ನಾಗಿ ನೇಮಕ ಮಾಡಿ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅವರು ಆದೇಶ ಹೊರಡಿಸಿದ್ದಾರೆ.
ರಾಜ್ಯದಲ್ಲಿ ಉಪ ಲೋಕಾಯುಕ್ತರ ಎರಡು ಹುದ್ದೆಗಳಿವೆ. 2022ರ ಜೂನ್ 14ರಂದು ಉಪ ಲೋಕಾಯುಕ್ತರಾಗಿದ್ದ ನಿವೃತ್ತ ನ್ಯಾಯಮೂರ್ತಿ ಬಿ.ಎಸ್. ಪಾಟೀಲ್ ಅವರನ್ನು ಲೋಕಾಯುಕ್ತ ಹುದ್ದೆಗೆ ಬಡ್ತಿ ನೀಡಿ, ಅಂದಿನ ಬಿಜೆಪಿ ಸರ್ಕಾರ ಆದೇಶ ಹೊರಡಿಸಿತ್ತು. ಅಂದಿನಿಂದಲೂ ಉಪ ಲೋಕಾಯುಕ್ತ ಹುದ್ದೆ ಖಾಲಿಯಾಗಿತ್ತು.

ಎರಡನೇ ಉಪ ಲೋಕಾಯುಕ್ತರ ಹುದ್ದೆ ಖಾಲಿಯಿದ್ದ ಕಾರಣ, ಲೋಕಾಯುಕ್ತ ಮತ್ತು ಉಪಲೋಕಾಯುಕ್ತರ ಮೇಲೆ ಕೆಲಸದ ಒತ್ತಡ ಹೆಚ್ಚಾಗಿತ್ತು. ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಕೊನೆಗೂ ಉಪಲೋಕಾಯುಕ್ತರನ್ನು ನೇಮಿಸಿದೆ.












Click it and Unblock the Notifications