ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಜಯಲಲಿತಾ ಖುಲಾಸೆಗೊಳಿಸಿದ್ದ ಜಡ್ಜ್ ಇಂದು ನಿವೃತ್ತಿ

|
Google Oneindia Kannada News

ಬೆಂಗಳೂರು, ಆಗಸ್ಟ್ 24 : ಅಕ್ರಮ ಆಸ್ತಿಗಳಿಕೆ ಪ್ರಕರಣದಲ್ಲಿ ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಅವರನ್ನು ಖುಲಾಸೆಗೊಳಿಸಿದ ಕರ್ನಾಟಕ ಹೈಕೋರ್ಟ್‌ನ ನ್ಯಾಯಮೂರ್ತಿ ಸಿ.ಆರ್.ಕುಮಾರಸ್ವಾಮಿ ಅವರು ಇಂದು ನಿವೃತ್ತರಾಗಲಿದ್ದಾರೆ.

ನ್ಯಾಯಮೂರ್ತಿ ಸಿ.ಆರ್.ಕುಮಾರಸ್ವಾಮಿ ಅವರ ಪೂರ್ಣ ಹೆಸರು ಚಿಕ್ಕರಾಚಯ್ಯ ಕುಮಾರಸ್ವಾಮಿ. 1983ರಲ್ಲಿ ವಕೀಲ ವೃತ್ತಿ ಆರಂಭಿಸಿದ ಸಿ.ಆರ್.ಕುಮಾರಸ್ವಾಮಿ ಅವರು ಆ.24ರ ಸೋಮವಾರ ಸೇವೆಯಿಂದ ನಿವೃತ್ತರಾಗುತ್ತಿದ್ದಾರೆ. [ಜಯಾ ಬಂಧ ಮುಕ್ತ ಮಾಡಿದ ನ್ಯಾಯಮೂರ್ತಿ ಯಾರು?]

high court

ಸಿ.ಆರ್.ಕುಮಾರಸ್ವಾಮಿ ಅವರು ಹೈಕೋರ್ಟ್‌ ನ್ಯಾಯಮೂರ್ತಿಗಳಾಗಿ ನೇಮಕವಾಗುವ ಮುನ್ನ 1993ರಿಂದ 2005ರ ಅವಧಿಯಲ್ಲಿ ಕೋಲಾರ, ಮೈಸೂರು, ಬಳ್ಳಾರಿ, ಚಿಕ್ಕಮಗಳೂರು ಹಾಸನ ಜಿಲ್ಲಾ ನ್ಯಾಯಾಲಯಗಳ ನ್ಯಾಯಾಧೀಶರಾಗಿ ಸೇವೆ ಸಲ್ಲಿಸಿದ್ದರು.[ಅಕ್ರಮ ಆಸ್ತಿ ಪ್ರಕರಣ: ಜಯಲಲಿತಾ ನಿರ್ದೋಷಿ]

ವಿಶೇಷ ಪೀಠದಲ್ಲಿ ವಿಚಾರಣೆ ನಡೆಸಿದ್ದರು : 2014ರ ಸೆ. 27ರಂದು ಅಕ್ರಮ ಆಸ್ತಿಗಳಿಕೆ ಪ್ರಕರಣದ ತೀರ್ಪು ನೀಡಿದ್ದ ಸಿಬಿಐ ವಿಶೇಷ ನ್ಯಾಯಾಲ­ಯದ ನ್ಯಾಯಾಧೀಶ ಡಿ.ಕುನ್ಹ ಅವರು, ಜಯಲಲಿತಾ, ವಿ.ಕೆ.ಶಶಿಕಲಾ, ಜೆ.ಇಳವರಸಿ ಮತ್ತು ವಿ.ಎನ್.ಸುಧಾಕರನ್ ತಪ್ಪಿತಸ್ಥರು ಎಂದು ಆದೇಶ ನೀಡಿದ್ದರು. [ಜಯಲಲಿತಾ ಪ್ರಕರಣ Timeline]

ಜಯಲಲಿತಾ ಅವರಿಗೆ 100 ಕೋಟಿ ಹಾಗೂ ಇತರರಿಗೆ ತಲಾ 10 ಕೋಟಿ ದಂಡ ಮತ್ತು ನಾಲ್ಕು ವರ್ಷದ ಜೈಲು ಶಿಕ್ಷೆ ವಿಧಿಸಲಾಗಿತ್ತು. ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದ ಜಯಲಲಿತಾ ಮತ್ತು ಇತರ ಮೂವರು ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿ ಈ ತೀರ್ಪನ್ನು ಪ್ರಶ್ನಿಸಿದ್ದರು, ಜಾಮೀನಿಗೆ ಮನವಿ ಮಾಡಿದ್ದರು.

ಸುಪ್ರೀಂಕೋರ್ಟ್ ಎಲ್ಲರಿಗೂ ಜಾಮೀನು ನೀಡಿತ್ತು ಮತ್ತು ಪ್ರಕರಣದ ಮೇಲ್ಮನವಿ ಅರ್ಜಿಯ ವಿಚಾರಣೆಯನ್ನು ನಡೆಸಲು ವಿಶೇಷ ಪೀಠವನ್ನು ರಚನೆ ಮಾಡುವಂತೆ ಕರ್ನಾಟಕ ಹೈಕೋರ್ಟ್‌ಗೆ ಸೂಚಿಸಿತ್ತು. ಆದರಂತೆ ನ್ಯಾಯಮೂರ್ತಿ ಸಿ.ಆರ್.ಕುಮಾರಸ್ವಾಮಿ ಅವರ ಏಕ ಸದಸ್ಯ ಪೀಠ ರಚನೆಯಾಗಿತ್ತು.

ಜನವರಿಯಲ್ಲಿ ಮೇಲ್ಮನವಿ ಅರ್ಜಿಯ ವಿಚಾರಣೆ ಆರಂಭಿಸಿದ ಸಿ.ಆರ್.ಕುಮಾರಸ್ವಾಮಿ ಅವರು ಮೇ 11ರಂದು ಪ್ರಕರಣದ ಕುರಿತ ತೀರ್ಪು ನೀಡಿದ್ದರು. ಜಯಲಲಿತಾ ಮತ್ತು ಇತರ ಮೂವರನ್ನು ಖುಲಾಸೆಗೊಳಿಸಿ ಆದೇಶ ಹೊರಡಿಸಿದ್ದರು. ಈ ವಿಶೇಷ ಪೀಠದ ಆದೇಶದ ಬಗ್ಗೆ ಸುಪ್ರೀಂಕೋರ್ಟ್‌ನಲ್ಲಿ ಕರ್ನಾಟಕ ಸರ್ಕಾರ ಕಾನೂನು ಹೋರಾಟ ನಡೆಸುತ್ತಿದೆ.

English summary
Karnataka High Court judge C.R.Kumaraswamy will retire on Monday. C.R.Kumaraswamy who delivered the verdict of acquitting of Tamil Nadu chief minister J.Jayalalitha in disproportionate assets case.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X