Bengaluru Stampede: ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣ; ಸಿದ್ದರಾಮಯ್ಯ ಕೈ ಸೇರಿದ ಅಚ್ಚರಿ ನ್ಯಾ.ಡಿ.ಕುನ್ಹಾ ವರದಿ
ಬೆಂಗಳೂರು, ಜುಲೈ 12: ಆರ್.ಸಿ.ಬಿ ತಂಡದ ವಿಜಯೋತ್ಸವದ ಸಂದರ್ಭದಲ್ಲಿ ಕಾಲ್ತುಳಿತಕ್ಕೆ ಸಿಲುಕಿ ಹನ್ನೊಂದು ಜನ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿ ನಿವೃತ್ತ ನ್ಯಾಯಮೂರ್ತಿ ಜಸ್ಟೀಸ್ ಕುನ್ಹಾ ಅವರ ಅಧ್ಯಕ್ಷತೆಯಲ್ಲಿ ಸರ್ಕಾರ ರಚಿಸಿದ್ದ ಏಕ ವ್ಯಕ್ತಿ ಆಯೋಗವು ಎರಡು ಸಂಪುಟಗಳಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ವರದಿ ಸಲ್ಲಿಸಿದೆ
ಈ ಕುರಿತು ಮಾಧ್ಯಮಗಳ ಜೊತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾತನಾಡಿ, ಜುಲೈ 17 ರಂದು ನಡೆಯಲಿರುವ ಸಚಿವ ಸಂಪುಟದಲ್ಲಿ ನ್ಯಾಯಮೂರ್ತಿ ಕುನ್ಹಾ ಅವರ ವರದಿಯನ್ನು ಮಂಡಿಸಿ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಆರ್.ಸಿ.ಬಿ ತಂಡದ ವಿಜಯೋತ್ಸವದ ಸಂದರ್ಭದಲ್ಲಿ ಕಾಲ್ತುಳಿತಕ್ಕೆ ಸಿಕ್ಕು ಹನ್ನೊಂದು ಜನ ಮೃತ ಪಟ್ಟಿದ್ದ ಹಿನ್ನೆಲೆಯಲ್ಲಿ ನಿವೃತ್ತ ನ್ಯಾಯಮೂರ್ತಿ ಜಸ್ಟೀಸ್ ಕುನ್ಹಾ ಅವರ ಅಧ್ಯಕ್ಷತೆಯಲ್ಲಿ ಸರ್ಕಾರ ರಚಿಸಿದ್ದ ಏಕ ವ್ಯಕ್ತಿ ಆಯೋಗವು ಎರಡು ಸಂಪುಟಗಳಲ್ಲಿ ವರದಿಯಲ್ಲಿ ಸಲ್ಲಿಸಿದೆ ಎಂದರು.

ವರದಿಯಲ್ಲಿ ಮಾಡಿರುವ ಶಿಫಾರಸುಗಳ ಬಗ್ಗೆ ಚರ್ಚಿಸಿದ ನಂತರ ಸಂಪುಟ ನಿರ್ಧಾರ ಮಾಡಲಿದೆ. ನಾನು ನ್ಯಾಯಮೂರ್ತಿ ಜಸ್ಟೀಸ್ ಕುನ್ಹಾ ಅವರ ವರದಿಯನ್ನು ಪೂರ್ಣವಾಗಿ ಓದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು. ಕಾಲ್ತುಳಿತ ಘಟನೆಗೆ ಸಂಬಂಧಪಟ್ಟಂತೆ ಪೊಲೀಸರ ಅಮಾನತ್ತನ್ನು ಸಿಎಟಿಯವರು ವಿರೋಧಿಸಿ ಆದೇಶಿಸಿರುವ ಬಗ್ಗೆ ಆಯೋಗದ ವರದಿಯಲ್ಲಿ ಪ್ರಸ್ತಾಪಿಸಲಾಗಿರುವ ಕುರಿತು ಮಾತನಾಡಿದ ಸಿದ್ದರಾಮಯ್ಯ ಅವರು, ವರದಿಯನ್ನು ಸಚಿವ ಸಂಪುಟದಲ್ಲಿ ಚರ್ಚಿಸಿ, ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದರು.
KSCA, RCB, DNA ಹಾಗೂ ಪೊಲೀಸರೇ ನೇರ ಹೊಣೆ ಎಂದ ವರದಿ?
ಕಳೆದ ಜೂನ್ 4 ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಐಪಿಎಲ್ ಟ್ರೋಫಿ ಗೆದ್ದ ಹಿನ್ನೆಲೆ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ಈ ಒಂದು ಕಾರ್ಯಕ್ರಮದಲ್ಲಿ 11 ಜನ ಆರ್‌ಸಿಬಿ ಅಭಿಮಾನಿಗಳು ಕಾಲ್ತುಳಿತದಲ್ಲಿ ಸಾವನ್ನಪ್ಪಿದ್ದರು. ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ನ್ಯಾ.ಮೈಕಲ್ ಡಿ.ಕುನ್ಹಾ ಅವರ ವರದಿಯಲ್ಲಿ ಹಲವು ಅಂಶಗಳು ಉಲ್ಲೇಖವಾಗಿವೆ. ಕುನ್ಹಾ ವರದಿಯಲ್ಲಿ ಕಲ್ತುಳಿತ ಪ್ರಕರಣಕ್ಕೆ KSCA, RCB, DNA ಮತ್ತು ಪೊಲೀಸರೇ ನೇರ ಹೊಣೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.
ಈ ವರದಿಯಲ್ಲಿ ಬಂದೋಬಸ್ತ್ ವ್ಯವಸ್ಥೆ ಸಮರ್ಪಕವಾಗಿರಲಿಲ್ಲ ಎಂದು ಉಲ್ಲೇಖಿಸಲಾಗಿದೆ. ಚಿನ್ನಸ್ವಾಮಿ ಕ್ರೀಡಾಂಗಣದ ಒಳಗೆ ಇದ್ದಿದ್ದು 79 ಪೋಲೀಸರು ಮಾತ್ರ. ಹೊರಗೆ ಪೊಲೀಸರು ಇರಲಿಲ್ಲ ಆಂಬುಲೆನ್ಸ್ ವ್ಯವಸ್ಥೆ ಸಹ ಇರಲಿಲ್ಲ ಮಧ್ಯಾಹ್ನ 3:25ಕ್ಕೆ ಕಾಲ್ತುಳಿತ ಸಂಭವಿಸಿದ್ದರು ಮಾಹಿತಿ ಇರಲಿಲ್ಲ. ಸಂಜೆ 5:30 ವರೆಗೆ ಪೊಲೀಸ್ ಕಮಿಷನರ್ ಗೆ ಮಾಹಿತಿ ಇಲ್ಲ. ಜಂಟಿ ಪೊಲೀಸ್ ಆಯುಕ್ತರು ಕ್ರೀಡಾಂಗಣಕ್ಕೆ ಬಂದಿದ್ದು 4 ಗಂಟೆಗೆ ಎಂದು ಕುನ್ಹಾ ವರದಿಯಲ್ಲಿ ಉಲ್ಲೇಖಿಸಲಾಗಿದೆ ಎಂದು ತಿಳಿದು ಬಂದಿದೆ.












Click it and Unblock the Notifications