ಕು. ಸೌಜನ್ಯ ಗೌಡಗೆ ನ್ಯಾಯ: ಮಹತ್ವದ ಮಾಹಿತಿ ಹಂಚಿಕೊಂಡ ನಿಖಿಲ್ ಕುಮಾರಸ್ವಾಮಿ

ದಿ. ಸೌಜನ್ಯ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೆಡಿಎಸ್ ಪಕ್ಷದ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು ಮಹತ್ವ ಮಾಹಿತಿ ಹಂಚಿಕೊಂಡಿದ್ದಾರೆ. ಸೌಜನ್ಯ ಪ್ರಕರಣದ ಬಗ್ಗೆ ಕರ್ನಾಟಕದಲ್ಲಿ ಮತ್ತೆ ಭಾರೀ ಚರ್ಚೆ ಆಗುತ್ತಿರುವ ಸಂದರ್ಭದಲ್ಲಿಯೇ ಜೆಡಿಎಸ್ ಮಹತ್ವದ ಮಾಹಿತಿಯೊಂದನ್ನು ಹಂಚಿಕೊಂಡಿದೆ.

ಧರ್ಮಸ್ಥಳ ಸತ್ಯ ಯಾತ್ರೆಯ ನಂತರ ಕೆಲವರು ನನಗೆ ವೈಯಕ್ತಿಕವಾಗಿ ಹಾಗೂ ಸಾಮಾಜಿಕ ಜಾಲತಾಣಗಳ ಮುಖಾಂತರ ಸಂದೇಶಗಳನ್ನು ಕಳುಹಿಸಿದ್ದೀರಿ. ಕು. ಸೌಜನ್ಯ ಗೌಡಗೆ ನ್ಯಾಯ ಒದಗಿಸುವುದು ನಮ್ಮ ಕರ್ತವ್ಯವೂ ಹೌದು, ಜವಾಬ್ದಾರಿಯೂ ಹೌದು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾವುದೇ ರಾಜಕೀಯ ಪಕ್ಷದಿಂದಾಗಲಿ, ಸಿದ್ಧಾತದಿಂದಾಗಲಿ, ಬೀದಿ ಹೋರಾಟಗಳಿಂದಾಗಲಿ, ಯೂಟ್ಯೂಬ್ ವಿಡಿಯೋಗಳಿಂದಾಗಲಿ ಅಥವಾ ನ್ಯೂಸ್ ಚಾನಲ್‌ಗಳ ಡಿಬೆಟ್‌ಗಳಿಂದಾಗಲಿ ನ್ಯಾಯ ಸಿಗುವುದಿಲ್ಲ. ಈ ದೇಶದ ನ್ಯಾಯಾಂಗದಿಂದಲೇ ಅಪರಾಧಿಯನ್ನು ಶಿಕ್ಷಿಸಬೇಕು ಮತ್ತು ಆ ಕುಟುಂಬಕ್ಕೆ ನ್ಯಾಯ ಒದಗಿಸಬೇಕಾಗುತ್ತದೆ ಎಂದು ನಿಖಿಲ್ ಕುಮಾರಸ್ವಾಮಿ ಅವರು ಹೇಳಿದ್ದಾರೆ.

Justice for Sowjanya Gowda Nikhil Kumaraswamy s Key Statement

ಕು. ಸೌಜನ್ಯ ಗೌಡ ಅವರಿಗೆ ನ್ಯಾಯ ಸಿಗಬೇಕಾದರೆ, ಅವರ ತಾಯಿ ಅಥವಾ ಕುಟುಂಬದ ಸದಸ್ಯರು ಸುಪ್ರೀಂ ಕೋರ್ಟ್ ನಲ್ಲಿ ಮರು ತನಿಖೆಗಾಗಿ ಅರ್ಜಿ ಸಲ್ಲಿಸಬೇಕು. ಇತ್ತೀಚಿನ ದಿನಗಳಲ್ಲಿ ಕೆಲವರು ಸೌಜನ್ಯ ಗೌಡ ಸಾವಿಗೆ ಸಂಬಂಧಿಸಿದಂತೆ ಸಾಕ್ಷಿಗಳಿವೆ ಎಂದು ಹೇಳುತ್ತಿದ್ದಾರೆ. ಈ ಸಾಕ್ಷಿಗಳನ್ನು ಕೂಡ ಸುಪ್ರೀಂ ಕೋರ್ಟ್‌ಗೆ ಸಲ್ಲಿಸುವ ಅರ್ಜಿಯಲ್ಲಿ ಸಲ್ಲಿಸಿದರೇ ಸುಪ್ರೀಂ ಕೋರ್ಟ್‌ ಮರು ತನಿಖೆಗೆ ಆದೇಶಿಸಲು ಸಹಕಾರಿಯಾಗಲಿದೆ. ಸುಪ್ರೀಂ ಕೋರ್ಟ್ ಈ ತನಿಖೆಯನ್ನು ಯಾವುದಾದರೂ ತನಿಖಾ ಸಂಸ್ಥೆ ಅಥವಾ ನಿವೃತ್ತ ನ್ಯಾಯಾಧೀಶರ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಸಿದರೆ ಮಾತ್ರ ನ್ಯಾಯ ಸಿಗಲು ಸಾಧ್ಯ ಎಂದಿದ್ದಾರೆ.

ಸೌಜನ್ಯ ಗೌಡ ತಾಯಿ ಅಥವಾ ಅವರ ಕುಟುಂಬ ವರ್ಗದವರು ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸುವ ನಿರೀಕ್ಷೆಯಲ್ಲಿ ನೀವೆಲ್ಲರೂ ಇದ್ದಂತೆ ನಾನೂ ಕೂಡ ಇದ್ದೇನೆ ಎಂದೂ ಅವರು ಹೇಳಿದ್ದಾರೆ.

ಇನ್ನು ಇದೇ ವಿಚಾರವಾಗಿ ಸೋಷಿಯಲ್ ಎಕ್ಸ್‌ನಲ್ಲಿ ಟ್ವೀಟ್ ಮಾಡಿರುವ ಸಚಿವ ಪ್ರಿಯಾಂಕ್ ಖರ್ಗೆ ಅವರು, ಧರ್ಮಸ್ಥಳದ ಬಗ್ಗೆ ಅಪಪ್ರಚಾರ ನಡೆಯುತ್ತಿದೆ, ಷಡ್ಯಂತ್ರ ನಡೆಯುತ್ತಿದೆ ಎಂದು ಧರ್ಮಸ್ಥಳ ಚಲೋ ಮಾಡಿದ ಬಿಜೆಪಿ ನಾಯಕರು ಸೌಜನ್ಯ ತಾಯಿ ಕುಸುಮಾವತಿಯವರು ತಮ್ಮೆದುರು ಹೇಳಿದ ನೈಜ ಸಂಗತಿಯನ್ನು ಜಗತ್ತಿಗೆ ತಿಳಿಸುವ ಧೈರ್ಯವಿದೆಯೇ ಎಂದು ಪ್ರಶ್ನೆ ಮಾಡಿದ್ದಾರೆ.

"ಸೌಜನ್ಯ ಹೆಸರು ಹೇಳಿಕೊಂಡು ಹಣ ಮಾಡಿದ್ದಾರೆ, ಇಷ್ಟು ದೊಡ್ಡ ಮನೆ ಕಟ್ಟಿಸಿದ್ದಾರೆ ಎಂದು ನಿಮ್ಮದೇ ಪಕ್ಷದವರು ಹೇಳುತ್ತಿದ್ದಾರೆ" ಎಂಬ ಕುಸುಮಾವತಿಯವರ ಮಾತಿಗೆ ಬಿಜೆಪಿ ಕರ್ನಾಟಕದ ನಾಯಕರು ಉತ್ತರ ನೀಡದೆ ಮೌನವಹಿಸಿದ್ದೇಕೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರೇ, ಮೊದಲು ಸೌಜನ್ಯ ಕುಟುಂಬಕ್ಕೆ ನಿಮ್ಮ ಪಕ್ಷ ನೀಡಿದ ಕಿರುಕುಳಕ್ಕೆ ನ್ಯಾಯ ಸಿಗಬೇಕಲ್ಲವೇ ? ಆ ನೊಂದ ಕುಟುಂಬಕ್ಕೆ ಬಿಜೆಪಿ ನೀಡುತ್ತಿರುವ ಕಿರುಕುಳದ ಬಗ್ಗೆ ಉತ್ತರ ಸಿಗಲೇಬೇಕು. ಬಿಜೆಪಿ ಯಾರ ಪರವಾಗಿ ಧರ್ಮಸ್ಥಳಕ್ಕೆ ಹೋಗಿದ್ದರೋ ಅವರ ವಿರುದ್ಧವೇ ಕುಸುಮಾವತಿ ದೂರು ಹೇಳಿದ್ದಾರೆ.

ಬಿಜೆಪಿ ಕರ್ನಾಟಕ ನಾಯಕರು ಕುಸುಮಾವತಿಯವರ ಮಾತು ಕೇಳಿಸಿಕೊಂಡ ನಂತರವೂ ಕಾರ್ಯಕ್ರಮದ ವೇದಿಕೆ ಹತ್ತಿ ಕೂರುವುದಕ್ಕೆ ಹೇಗೆ ಮನಸಾಯಿತು?

ಬಿಜೆಪಿಯವರು ಸೌಜನ್ಯ ಪರವೋ, ವಿರುದ್ಧವೋ ಎನ್ನುವುದನ್ನು ಸ್ಪಷ್ಟಪಡಿಸುವ ಅಗತ್ಯವಿದೆ. ಸೌಜನ್ಯ ಸಾವಿಗೆ ನ್ಯಾಯ ಸಿಗಬೇಕು ಎಂದಿದ್ದ ಬಿಜೆಪಿಗೆ ಯಾರಿಂದ ನ್ಯಾಯ ಸಿಗಬೇಕು ಎನ್ನುವುದನ್ನು ಸೌಜನ್ಯ ತಾಯಿ ಸ್ಪಷ್ಟವಾಗಿ ಹೇಳಿದ್ದಾರೆ, ನ್ಯಾಯ ಕೊಡಿಸುವರೇ.

ಸೌಜನ್ಯ ತಾಯಿಯವರ ಕಾನೂನು ಹೋರಾಟಕ್ಕೆ ಬಿಜೆಪಿ ಪಕ್ಷವೇ ಹಣದ ನೆರವನ್ನು ನೀಡಲಿದೆ ಎಂದು ಘೋಷಿದ್ದಾರೆ. ಆ ಕಾನೂನು ಹೋರಾಟ ಯಾರ ವಿರುದ್ಧವಾಗಿರುತ್ತದೆ ಎಂಬ ಪ್ರಜ್ಞೆ ಬಿಜೆಪಿಗಿದೆಯೇ. ಸೌಜನ್ಯ ಸಾವಿಗೆ ನ್ಯಾಯ ಕೊಡಿಸುವುದರಲ್ಲಿ ಬಿಜೆಪಿಗೆ ನೈಜ ಬದ್ಧತೆ ಇದ್ದಿದ್ದೇ ಆಗಿದ್ದರೆ ಕುಸುಮಾವತಿಯವರ ಮಾತು ಕೇಳಿದ ನಂತರ ಧರ್ಮಸ್ಥಳ ಚಲೋ ಮಾಡುವ ಬದಲು "ಧರ್ಮಸ್ಥಳದಿಂದ ವಾಪಸ್ ಚಲೋ" ಕಾರ್ಯಕ್ರಮ ಮಾಡಬೇಕಿತ್ತು ಎಂದು ಹೇಳಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+