ಅರ್ಕಾವತಿ ತನಿಖೆ, ಆಯೋಗದ ಅವಧಿ ವಿಸ್ತರಣೆ
ಬೆಂಗಳೂರು, ಮಾ.2 : ರಾಜ್ಯದಲ್ಲಿ ಚರ್ಚೆಗೆ ಕಾರಣವಾಗಿರುವ ಅರ್ಕಾವತಿ ಬಡಾವಣೆ ಡಿನೋಟಿಫಿಕೇಷನ್ ಹಗರಣದ ತನಿಖೆ ನಡೆಸುತ್ತಿರುವ ನ್ಯಾಯಮೂರ್ತಿ ಎಚ್.ಎಸ್. ಕೆಂಪಣ್ಣ ಆಯೋಗದ ಅವಧಿಯನ್ನು 6 ತಿಂಗಳ ಕಾಲ ವಿಸ್ತರಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
ನ್ಯಾಯಮೂರ್ತಿ ಎಚ್.ಎಸ್. ಕೆಂಪಣ್ಣ ಆಯೋಗ ಮಾಡಿದ ಮನವಿಯ ಅನ್ವಯ, ಮಾ.1 ರಿಂದ ಅನ್ವಯವಾಗುವಂತೆ ಮುಂದಿನ ಆರು ತಿಂಗಳಿಗೆ, ಆಯೋಗದ ಅವಧಿಯನ್ನು ವಿಸ್ತರಣೆ ಮಾಡಿ ಆದೇಶ ಹೊರಡಿಸಲಾಗಿದೆ. ಆಯೋಗದ ಅವಧಿ ಫೆ.28ಕ್ಕೆ ಕೊನೆಗೊಂಡಿತ್ತು. [ಅರ್ಕಾವತಿ ಬಡಾವಣೆ ವಿವಾದ ಏಕೆ? ಏನು?]

ಅರ್ಕಾವತಿ ಡಿನೋಟಿಫಿಕೇಷನ್ ಆರೋಪ ಕೇಳಿ ಬಂದ ನಂತರ ಸರ್ಕಾರ ಪ್ರಕರಣದ ತನಿಖೆಗೆ 2014ರ ಆಗಸ್ಟ್‌ನಲ್ಲಿ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಎಚ್.ಎಸ್. ಕೆಂಪಣ್ಣ ನೇತೃತ್ವದ ತನಿಖಾ ಆಯೋಗ ನೇಮಕ ಮಾಡಲಾಗಿತ್ತು. [ಅರ್ಕಾವತಿ ಹಗರಣದ ಬಗ್ಗೆ ಎಚ್ಡಿಕೆ ಪುಸ್ತಕ]
ಆರು ತಿಂಗಳಿನಲ್ಲಿ ಆಯೋಗ ಕೇವಲ ದೂರಗಳನ್ನು ಮಾತ್ರ ಸ್ವೀಕರಿಸಿದೆ. ಅಧಿಕೃತವಾದ ತನಿಖೆ ಆರಂಭಗೊಂಡಿಲ್ಲ. ಆದ್ದರಿಂದ ಆಯೋಗದ ಅವಧಿಯನ್ನು ವಿಸ್ತರಣೆ ಮಾಡುವಂತೆ ಕೋರಿ ಸರ್ಕಾರಕ್ಕೆ ಪತ್ರ ಬರೆಯಲಾಗಿತ್ತು. ಇದರ ಅನ್ವಯ ಸರ್ಕಾರ ವಿಸ್ತರಣೆ ಮಾಡಿ ಆದೇಶ ಹೊರಡಿಸಿದೆ.
ಇಂದು ಬಿಜೆಪಿ ದೂರು : ಬಿಜೆಪಿ ಮತ್ತೊಮ್ಮೆ ಅರ್ಕಾವತಿ ಬಡಾವಣೆ ಡಿನೋಟಿಫಿಕೇಶನ್ ಹೋರಾಟ ಆರಂಭಿಸಿದ್ದು, ಸೋಮವಾರ ಬಿಜೆಪಿ ಬೆಂಬಲಿತ ವಕೀಲರಾದ ಎಸ್.ನಟರಾಜ್ ಶರ್ಮ ಮತ್ತು ದೊರೆರಾಜು ಅವರು ನ್ಯಾಯಮೂರ್ತಿ ಕೆಂಪಣ್ಣ ಆಯೋಗಕ್ಕೆ ದೂರು ನೀಡಲಿದ್ದಾರೆ.
ಬೆಂಗಳೂರಿನ ಕಾವೇರಿ ಭವನದ 6ನೇ ಮಹಡಿಯಲ್ಲಿರುವ ಕೆಂಪಣ್ಣ ಆಯೋಗದ ಕಚೇರಿಗೆ ತೆರಳಿ ದೂರು ಸಲ್ಲಿಸಲಿದ್ದು, ಇದರ ಜೊತೆಗೆ ಸುಮಾರು 800 ಪುಟಗಳ ದಾಖಲೆಗಳನ್ನು ಸಲ್ಲಿಸಲಿದ್ದಾರೆ.
-
ಪಾಪರ್ ಸರ್ಕಾರದ ಸಾಹುಕಾರ ಸಿದ್ದರಾಮಯ್ಯ: ಬಾಗಲಕೋಟೆ ಮೆಡಿಕಲ್ ಕಾಲೇಜ್ ಬಗ್ಗೆ ಬೊಮ್ಮಾಯಿ ಪ್ರಶ್ನೆ -
Baglkot By Poll:9 ವರ್ಷ ಅಧಿಕಾರದಲ್ಲಿದ್ದ ಬಿಜೆಪಿ ಸಾಧನೆ ಶೂನ್ಯ: ಗ್ಯಾರಂಟಿ ಯೋಜನೆಗಳ ಲೆಕ್ಕ ಕೊಟ್ಟ ಸಿದ್ದರಾಮಯ್ಯ -
ಖೇಲೋ ಇಂಡಿಯಾ ಬುಡಕಟ್ಟು ಕ್ರೀಡಾಕೂಟ: 23 ಚಿನ್ನದ ಪದಕ ಗೆದ್ದು ಸಮಗ್ರ ಚಾಂಪಿಯನ್ ಪಟ್ಟ ಅಲಂಕರಿಸಿದ ಕರ್ನಾಟಕ -
ಏಪ್ರಿಲ್ 5ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
RCB vs CSK: ಆರ್ಸಿಬಿ ಕಡೆಯಿಂದ ಅಭಿಮಾನಿಗಳಿಗೆ ವಿಶೇಷ ಸಂದೇಶ: ಇಂದಿನ ಪಂದ್ಯಕ್ಕೂ ಮುನ್ನ ಇದು ಗಮನದಲ್ಲಿರಲಿ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ












Click it and Unblock the Notifications