ಮೀಸಲಾತಿ ಕುರಿತು ನೇರ ಅಹವಾಲು ಸ್ವೀಕಾರ
ಬೆಂಗಳೂರು, ಫೆ. 18: ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿಯನ್ನು ಹೆಚ್ಚಿಸುವ ಕುರಿತು ವರದಿ ನೀಡಲು ಸರ್ಕಾರ ರಚಿಸಿರುವ ನ್ಯಾ. ಎಚ್.ಎನ್. ನಾಗಮೋಹನ ದಾಸ್ ಆಯೋಗದ ವತಿಯಿಂದ ಇದೇ ಫೆಬ್ರವರಿ 25 ರಂದು ಬೆಂಗಳೂರಿನಲ್ಲಿ ಬೆಂಗಳೂರು ವಿಭಾಗ ಮಟ್ಟದ ಜಿಲ್ಲೆಗಳ ಅಹವಾಲು ಸ್ವೀಕಾರ ಹಾಗೂ ಸಮಾಲೋಚನೆ ಸಭೆ ನಡೆಯಲಿದೆ.
ಆಯೋಗದ ಅಧ್ಯಕ್ಷ ನ್ಯಾ. ಎಚ್.ಎನ್ ನಾಗಮೋಹನ ದಾಸ್ ಅವರೇ ನೇರವಾಗಿ ಅಹವಾಲು ಹಾಗೂ ಅಭಿಪ್ರಾಯಗಳನ್ನು ಆಲಿಸಲಿದ್ದಾರೆ. ಬೆಂಗಳೂರಿನ ವಸಂತನಗರದಲ್ಲಿರುವ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಬೆಳಿಗ್ಗೆ 10.30 ಗಂಟೆಯಿಂದ ಬೆಂಗಳೂರು ವಿಭಾಗದ ಎಲ್ಲಾ ಜಿಲ್ಲೆಗಳ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ಮುಖಂಡರು ಮತ್ತು ಸಂಘಟನೆಗಳಿಂದ ಅಹವಾಲು ಸ್ವೀಕಾರ ಮತ್ತು ಸಮಾಲೋಚನೆ ಮಾಡಲಾಗುವುದು.
ಬೆಂಗಳೂರು ನಗರ ಜಿಲ್ಲೆಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ಮುಖಂಡರು, ಸಂಘಟನೆಗಳು ತಮ್ಮ ಅಹವಾಲುಗಳನ್ನು ಲಿಖಿತ ರೂಪದಲ್ಲಿ ನೀಡಬಹುದಾಗಿದೆ. ಮೌಖಿಕವಾಗಿ ಅಭಿಪ್ರಾಯಗಳನ್ನು ತಿಳಿಸಬಯಸುವವರು, ಸಭೆ ಆರಂಭವಾಗುವ ಒಂದು ಗಂಟೆ ಮೊದಲು ಆಡಿಟೋರಿಯಂ ಹೊರಗಡೆ ಕೌಂಟರ್‌ಗಳಲ್ಲಿ ಹೆಸರು ನೋಂದಾಯಿಸಿಕೊಂಡು ತಮ್ಮ ಅಭಿಪ್ರಾಯವನ್ನು ಮೌಖಿಕವಾಗಿ ಹೇಳಬಹುದು. ಹೆಸರು ನೋಂದಾಯಿಸಿಕೊಂಡವರಿಗೆ ಮಾತ್ರ ಅಭಿಪ್ರಾಯ ಹೇಳಲು ಅವಕಾಶವಿರುತ್ತದೆ.

ಹೆಚ್ಚಿನ ವಿವರಗಳಿಗಾಗಿ ಜಂಟಿ ನಿರ್ದೇಶಕರ ಕಚೇರಿ ಸಮಾಜ ಕಲ್ಯಾಣ ಇಲಾಖೆ ಬೆಂಗಳೂರು ನಗರ ಜಿಲ್ಲೆ, 4ನೇ ಮೈನ್‍ರೋಡ್ 16 ನೇ ಅಡ್ಡರಸ್ತೆ ಸಂಪಂಗಿರಾಮನಗರ, ಬೆಂಗಳೂರು - 560 027 ಇವರ ಕಚೇರಿ 08022240449 ಸಿ.ಯು.ಜಿ. ನಂ. 94808 43019.
ಸಹಾಯಕ ನಿರ್ದೇಶಕರ ಕಚೇರಿ ಬೆಂಗಳೂರು ಉತ್ತರ ತಾಲ್ಲೂಕು ಯಲಹಂಕ ಕಚೇರಿ 0803846135, ಸಿ.ಯು.ಜಿ. 94808 43051 ಸಹಾಯಕ ನಿರ್ದೇಶಕರ ಕಚೇರಿ, ಬೆಂಗಳೂರು ದಕ್ಷಿಣ ತಾಲ್ಲೂಕು, ಬನಶಂಕರಿ ಕಚೇರಿ 08026711096 ಸಿ.ಯು.ಜಿ/ 94808 43050 ಸಹಾಯಕ ನಿರ್ದೇಶಕರ ಕಚೇರಿ, ಪೂರ್ವ ತಾಲ್ಲೂಕು, ಕೆ.ಆರ್. ಪುರಂ ಕಚೇರಿ 08029535045 ಸಿ.ಯು.ಜಿ 9480843049 ಹಾಗೂ ಸಹಾಯಕ ನಿರ್ದೇಶಕರ ಕಚೇರಿ, ಆನೇಕಲ್ ತಾಲ್ಲೂಕು, ಆನೇಕಲ್ ಕಚೇರಿ 08027859557, ಸಿ.ಯು.ಜಿ. 94808 43052 ದೂರವಾಣಿ ಸಂಖ್ಯೆಗಳನ್ನು ಸಂಪರ್ಕಿಸಿ ಹೆಚ್ಚಿನ ಮಾಹಿತಿಯನ್ನು ಪಡೆಯಬಹುದು.
-
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger












Click it and Unblock the Notifications