Breaking; ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿಯಾಗಿ ಪಿ. ಬಿ. ವರಳೆ ನೇಮಕ

ಬೆಂಗಳೂರು, ಅಕ್ಟೋಬರ್ 11; ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ಪಿ. ಬಿ. ವರಳೆ ನೇಮಕ ಮಾಡಲಾಗಿದೆ. ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿದ್ದ ಋತುರಾಜ್ ಅವಸ್ಥಿ ನಿವೃತ್ತಿ ನಂತರ ಹುದ್ದೆ ಖಾಲಿ ಇತ್ತು.

ಮಂಗಳವಾರ ಕೇಂದ್ರ ಕಾನೂನು ಸಚಿವ ಕಿರಣ್ ರಿಜುಜು ಈ ಕುರಿತು ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ. ಪಿ. ಬಿ. ವರಳೆ (ಪ್ರಸನ್ನ ಬಿ. ವರಳೆ) ಬಾಂಬೆ ಹೈಕೋರ್ಟ್‌ ನ್ಯಾಯಮೂರ್ತಿಯಾಗಿ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ.

Justice PB Varale Appointed As Chief Justice Of Karnataka High Court

ಸೆಪ್ಟೆಂಬರ್‌ 30ರಂದು ಸುಪ್ರೀಂಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಯು. ಯು. ಲಲಿತ್ ನೇತೃತ್ವದ ಕೊಲಿಜಿಯಂ ಸಭೆಯಲ್ಲಿ ನ್ಯಾಯಮೂರ್ತಿ ಪಿ. ಬಿ. ವರಳೆ ಹೆಸರನ್ನು ಮುಖ್ಯ ನ್ಯಾಯಮೂರ್ತಿ ಹುದ್ದೆಗೆ ಶಿಫಾರಸು ಮಾಡಲಾಗಿತ್ತು.

ನ್ಯಾಯಮೂರ್ತಿ ಪಿ. ಬಿ. ವರಳೆ 1962ರ ಜೂನ್ 23ರಂದು ನಿಪ್ಪಾಣಿಯಲ್ಲಿ ಜನಿಸಿದರು. ಕಲಾ ಮತ್ತು ಕಾನೂನು ಪದವಿಯನ್ನು ಡಾ. ಬಾಬಾಸಾಹೇಬ್ ಅಂಬೇಡ್ಕರ್ ಮರಾಠವಾಡ ವಿಶ್ವವಿದ್ಯಾಲಯದಿಂದ ಪಡೆದರು.

1985ರ ಆಗಸ್ಟ್ 12ರಂದು ವಕೀಲರಾಗಿ ನೋಂದಣಿ ಮಾಡಿಕೊಂಡರು. ಎಸ್‌. ಎನ್. ಲೋಯಾ ಅವರ ಮಾರ್ಗದರ್ಶನದಲ್ಲಿ ಸಿವಿಲ್ ಮತ್ತು ಕ್ರಿಮಿನಲ್ ಪ್ರಕರಣಗಳ ಅಭ್ಯಾಸ ಮಾಡಿದರು. ಔರಂಗಾಬಾದ್‌ನ ಅಂಬೇಡ್ಕರ್ ಕಾನೂನು ಕಾಲೇಜಿನಲ್ಲಿ 1990 ರಿಂದ 1992ರ ತನಕ ಉಪನ್ಯಾಸಕರಾಗಿಯೂ ಸೇವೆ ಸಲ್ಲಿಸಿದರು.

ಔರಂಗಾಬಾದ್‌ ಹೈಕೋರ್ಟ್‌ನಲ್ಲಿ ಹೆಚ್ಚುವರಿ ಪಬ್ಲಿಕ್ ಪ್ರಾಸಿಕ್ಯೂಟರ್ ಆಗಿದೆ, ಭಾರತ ಸರ್ಕಾರದ ಅಡಿಷನಲ್ ಸ್ಟಾಡಿಂಗ್ ಕಾನ್ಸೋಲ್‌ ಆಗಿಯೂ ನ್ಯಾಯಮೂರ್ತಿ ಪಿ. ಬಿ. ವರಳೆ ಕಾರ್ಯ ನಿರ್ವಹಣೆ ಮಾಡಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+