ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Breaking; ಹೈಕೋರ್ಟ್‌ ಸಿಜೆ ಹುದ್ದೆಗೆ ನ್ಯಾ. ಪಿ. ಬಿ. ವರಳೆ ಹೆಸರು ಶಿಫಾರಸು

|
Google Oneindia Kannada News

ಬೆಂಗಳೂರು, ಸೆಪ್ಟೆಂಬರ್ 30: ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಹುದ್ದೆಗೆ ನ್ಯಾಯಮೂರ್ತಿ ಪಿ. ಬಿ. ವರಳೆ ಹೆಸರು ಶಿಫಾರಸು ಮಾಡಲಾಗಿದೆ. ಮುಖ್ಯ ನ್ಯಾಯಮೂರ್ತಿಯಾಗಿದ್ದ ಋತುರಾಜ್ ಅವಸ್ಥಿ ನಿವೃತ್ತಿ ನಂತರ ಹುದ್ದೆ ಖಾಲಿ ಇದೆ.

ಸುಪ್ರೀಂಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಯು. ಯು. ಲಲಿತ್ ನೇತೃತ್ವದ ಕೊಲಿಜಿಯಂ ಸಭೆಯಲ್ಲಿ ನ್ಯಾಯಮೂರ್ತಿ ಪಿ. ಬಿ. ವರಳೆ ಹೆಸರನ್ನು ಶಿಫಾರಸು ಮಾಡಲಾಗಿದೆ. ಸದ್ಯ ನ್ಯಾಯಮೂರ್ತಿ ಅಲೋಕ್ ಆರಾಧೆ ಕರ್ನಾಟಕ ಹೈಕೋರ್ಟ್‌ನ ಹಂಗಾಮಿ ಮುಖ್ಯ ನ್ಯಾಯಮೂರ್ತಿಯಾಗಿ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ.

ಹೈಕೋರ್ಟ್ ಸಿಜೆ ರಿತುರಾಜ್ ಅವಸ್ಥಿ ನಿವೃತ್ತಿ, ಆತ್ಮೀಯ ಬೀಳ್ಕೊಡುಗೆಹೈಕೋರ್ಟ್ ಸಿಜೆ ರಿತುರಾಜ್ ಅವಸ್ಥಿ ನಿವೃತ್ತಿ, ಆತ್ಮೀಯ ಬೀಳ್ಕೊಡುಗೆ

ಪಿ. ಬಿ. ವರಳೆ ಬಾಂಬೆ ಹೈಕೋರ್ಟ್‌ನ ಹಿರಿಯ ನ್ಯಾಯಮೂರ್ತಿಗಳು. 1985 ಆಗಸ್ಟ್‌ನಲ್ಲಿ ವಕೀಲರಾಗಿ ನೇಮಕಗೊಂಡ ಅವರು ಪ್ರಾಥಮಿಕ ಹಂತದಲ್ಲಿ ವಕೀಲ ಎಸ್‌. ಎನ್‌. ಲೋಧ ಬಳಿಕ ಕಾರ್ಯ ನಿರ್ವಹಣೆ ಮಾಡಿದ್ದರು.

ಹೈಕೋರ್ಟ್‌ಗೆ ಐವರು ನ್ಯಾಯಮೂರ್ತಿಗಳ ನೇಮಕಕ್ಕೆ ಕೊಲಿಜಿಯಂ ಶಿಫಾರಸು ಹೈಕೋರ್ಟ್‌ಗೆ ಐವರು ನ್ಯಾಯಮೂರ್ತಿಗಳ ನೇಮಕಕ್ಕೆ ಕೊಲಿಜಿಯಂ ಶಿಫಾರಸು

Justice PB Varale Name Recommended For Karnataka High Court CJ Post

ಔರಂಗಬಾದ್‌ನಲ್ಲಿರುವ ಅಂಬೇಡ್ಕರ್ ಲಾ ಕಾಲೇಜಿನಲ್ಲಿ ಉಪನ್ಯಾಸಕರಾಗಿಯೂ ಪಿ. ಬಿ. ವರಳೆ 1992ರ ತನಕ ಕಾರ್ಯ ನಿರ್ವಹಿಸಿದ್ದಾರೆ. ಜುಲೈ 18, 2008ರಲ್ಲಿ ಅವರು ಬಾಂಬೆ ಹೈಕೋರ್ಟ್‌ ನ್ಯಾಯಮೂರ್ತಿಗಳಾಗಿ ನೇಮಕಗೊಂಡರು.

ಈ ಸಮಯದಲ್ಲಿ ಕೊಲಿಜಿಯಂ ಸಭೆ ಏಕೆ? ಸಿಜೆಐ ನಿರ್ಧಾರಕ್ಕೆ ನ್ಯಾಯಮೂರ್ತಿಗಳ ಆಕ್ಷೇಪಈ ಸಮಯದಲ್ಲಿ ಕೊಲಿಜಿಯಂ ಸಭೆ ಏಕೆ? ಸಿಜೆಐ ನಿರ್ಧಾರಕ್ಕೆ ನ್ಯಾಯಮೂರ್ತಿಗಳ ಆಕ್ಷೇಪ

ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳು 65ನೇ ವರ್ಷಕ್ಕೆ ಮತ್ತು ಹೈಕೋರ್ಟ್ ನ್ಯಾಯಮೂರ್ತಿಗಳು 62ನೇ ವಯಸ್ಸಿಗೆ ನಿವೃತ್ತರಾಗುತ್ತಾರೆ. ಸುಪ್ರೀಂಕೋರ್ಟ್‌ ಮುಖ್ಯ ನ್ಯಾಯಮೂರ್ತಿಗಳ ನೇತೃತ್ವದ ಕೊಲಿಜಿಯಂ ಹೊಸ ನ್ಯಾಯಮೂರ್ತಿಗಳ ನೇಮಕಕ್ಕೆ ಶಿಫಾರಸು ಮಾಡುತ್ತದೆ.

ಸೆಪ್ಟೆಂಬರ್ 28ರಂದು ನಡೆದ ಕೊಲಿಜಿಯಂ ಸಭೆ ಉತ್ತರಾಖಂಡ್ ಹೈಕೋರ್ಟ್‌ನ ನ್ಯಾಯಮೂರ್ತಿ ಸಂಜಯ್ ಕುಮಾರ್ ಮಿಶ್ರಾರನ್ನು ಜಾರ್ಖಂಡ್‌ಗೆ. ಕೇರಳದ ಹೈಕೋರ್ಟ್‌ನ ನ್ಯಾ. ಕೆ. ವಿನೋದ್ ಚಂದ್ರನ್‌ರನ್ನು ಬಾಂಬೆ ಹೈಕೋರ್ಟ್‌ಗೆ. ಜಾರ್ಖಂಡ್‌ ಹೈಕೋರ್ಟ್‌ನ ಅಪ್ರೇಶ್ ಕುಮಾರ್ ಸಿಂಗ್‌ರನ್ನು ತ್ರಿಪುರ ಹೈಕೋರ್ಟ್‌ಗೆ ವರ್ಗಾವಣೆ ಮಾಡಲು ಶಿಫಾರಸು ಮಾಡಿದೆ.

ಕೊಲಿಜಿಯಂ ಒಡಿಶಾ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಎಸ್. ಮುರಳೀಧರ್‌ರನ್ನು ಮದ್ರಾಸ್ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕ ಮಾಡಲು ಶಿಫಾರಸು ಮಾಡಿದೆ.

English summary
The Supreme Court collegium led by CJI U.U. Lalit has recommended to the Centre to appoint Justice P. B. Varale as Chief Justices of Karnataka High Court.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X