ಲೋಕಾಯುಕ್ತದಲ್ಲಿ ಭ್ರಷ್ಟಾಚಾರ: ಸಿಸಿಬಿ ಬದಲಿಗೆ ಸಿಬಿಐ ಸೂಕ್ತ: ನ್ಯಾ. ಹೆಗ್ಡೆ
ಮಂಡ್ಯ, ಜೂ.28: ಲೋಕಾಯುಕ್ತ ಸಂಸ್ಥೆಯಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರ, ಲಂಚ ಪ್ರಕರಣವನ್ನು ಸಿಸಿಬಿ ಬದಲಿಗೆ ಸಿಬಿಐಗೆ ವಹಿಸುವುದೇ ಸೂಕ್ತ. ಸಿಸಿಬಿ ಮುಖ್ಯಸ್ಥರ ಮೇಲೆ ಲೋಕಾಯುಕ್ತ ದಾಳಿ ನಡೆದಿತ್ತು ಎಂಬುದನ್ನು ಮರೆಯುವಂತಿಲ್ಲ ಎಂದು ಜಸ್ಟೀಸ್ ಎನ್ . ಸಂತೋಷ್ ಹೆಗ್ಡೆ ಹೇಳಿದ್ದಾರೆ.
ಲೋಕಾಯುಕ್ತರ ಮೇಲೆ ಜನರಿಗೆ ನಂಬಿಕೆ ಕಡಿಮೆಯಾಗುವಂಥ ಪ್ರಕರಣಗಳು ಬೆಳಕಿಗೆ ಬಂದಿರುವುದು ಬೇಸರದ ಸಂಗತಿ. ಅದರೆ, ಲೋಕಾಯುಕ್ತ ಸಂಸ್ಥೆ ಮೇಲೆಯೇ ಆರೋಪ ಕೇಳಿ ಬಂದಿರುವಾಗ ಉನ್ನತ ಮಟ್ಟದ ತನಿಖಾ ಸಂಸ್ಥೆಯಿಂದ ತನಿಖೆ ನಡೆಸುವುದು ಸೂಕ್ತ. ಪ್ರಕರಣವನ್ನು ಸರ್ಕಾರಕ್ಕೆ ಹಸ್ತಾಂತರಿಸಿ ಸಿಬಿಐಗೆ ವಹಿಸಿದರೆ ಒಳ್ಳೆಯದು ಎಂದು ಸಂತೋಷ್ ಹೆಗ್ಡೆ ಅವರು ಅಭಿಪ್ರಾಯಪಟ್ಟಿದ್ದಾರೆ. [ಲೋಕಾಯುಕ್ತದಲ್ಲಿ ಕೋಟಿ ಡೀಲ್, ಸಿಸಿಬಿ ತನಿಖೆ]

ಲೋಕಾಯುಕ್ತ ಭಾಸ್ಕರರಾವ್ ಪುತ್ರ ಅಶ್ವಿನ್ ಹೆಸರು ಕೇಳಿ ಬಂದಿರುವುದು ಬೇಸರ ತಂದಿದೆ. ತನಿಖೆ ವಹಿಸಿರುವ ಸಿಸಿಬಿಯ ಜಂಟಿ ಆಯುಕ್ತ ಚಂದ್ರಶೇಖರ್ ಮೇಲೂ ಆರೋಪಗಳಿವೆ, ಹಿಂದೊಮ್ಮೆ ಲೋಕಾಯುಕ್ತ ದಾಳಿಯೂ ನಡೆದಿತ್ತು. ನೈತಿಕ ಹೊಣೆ ಹೊತ್ತು ಈ ತನಿಖಾ ತಂಡದಿಂದ ಅವರು ಹೊರ ಬಂದರೆ ಒಳ್ಳೆಯದು ಎಂದಿದ್ದಾರೆ.
ಲೋಕಾಯುಕ್ತ ಸಂಸ್ಥೆಗೆ ಹೊಸ ಕಾನೂನಿನ ಅಗತ್ಯವಿಲ್ಲ. ಸಂಸ್ಥೆಗೆ ಇನ್ನಷ್ಟು ಬಲ ತುಂಬಿದರೆ ಸಾಕು. ಜನರು ಇಟ್ಟಿರುವ ನಂಬಿಕೆ ಮತ್ತಷ್ಟು ಗಟ್ಟಿಯಾಗುತ್ತದೆ ಎಂದು ನ್ಯಾ. ಸಂತೋಷ್ ಹೆಗ್ಡೆ ಹೇಳಿದರು. [ಲೋಕಾಯುಕ್ತದಲ್ಲೇ ಭ್ರಷ್ಟಾಚಾರ, ಮುಂದೇನು?]
'ಲೋಕಾಯುಕ್ತ ಕಚೇರಿಯಲ್ಲಿಯೇ ಸರ್ಕಾರಿ ಅಧಿಕಾರಿಯೊಬ್ಬರ ಬಳಿ 1 ಕೋಟಿ ರೂ.ಗೆ ಬೇಡಿಕೆಯಿಟ್ಟ ಪ್ರಕರಣದ ಬಗ್ಗೆ ಸಿಸಿಬಿ ತನಿಖೆ ನಡೆಸಲಾಗುತ್ತದೆ. ತಮ್ಮ ಮೇಲಿನ ಆರೋಪ ಸಾಬೀತಾದರೆ ರಾಜೀನಾಮೆ ನೀಡುತ್ತೇನೆ' ಎಂದು ಲೋಕಾಯುಕ್ತ ಭಾಸ್ಕರ್ ರಾವ್ ಅವರು ಶುಕ್ರವಾರ ಘೋಷಿಸಿದ್ದನ್ನು ಇಲ್ಲಿ ಸ್ಮರಿಸಬಹುದು.
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications