ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕರ್ನಾಟಕ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿಯಾಗಿ ಸತೀಶ್‌ ಚಂದ್ರ ಶರ್ಮಾ

|
Google Oneindia Kannada News

ಬೆಂಗಳೂರು, ಆಗಸ್ಟ್ 27: ಸುಪ್ರೀಂಕೋರ್ಟ್‌ ನ್ಯಾಯಮೂರ್ತಿಯನ್ನಾಗಿಸುವ ಕೊಲಿಜಿಯಂ 9 ಮಂದಿ ನ್ಯಾಯಾಧೀಶರ ನೇಮಕಾತಿ ಕುರಿತಂತೆ ನೀಡಿದ್ದ ಶಿಫಾರಸ್ಸಿಗೆ ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದೆ. ಈ ನೇಮಕಾತಿ ಆದೇಶಕ್ಕೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಸಹಿ ಹಾಕಿದ್ದಾರೆ. ಇದರ ಬೆನ್ನಲ್ಲೇ ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯ ನೇಮಕವಾಗಿದೆ. ಹಂಗಾಮಿ ಮುಖ್ಯ ನ್ಯಾಯಮೂರ್ತಿಯಾಗಿ ಹಿರಿಯ ನ್ಯಾಯಮೂರ್ತಿ ಸತೀಶ್‌ ಚಂದ್ರ ಶರ್ಮಾರನ್ನು ನೇಮಿಸಲಾಗಿದೆ.

ಸುಪ್ರೀಂಕೋರ್ಟ್‌ಗೆ ಮೂವರು ಮಹಿಳಾ ನ್ಯಾಯಮೂರ್ತಿಗಳನ್ನು ಒಂದೇ ಬಾರಿ ನೇಮಿಸುತ್ತಿರುವುದು ಪ್ರಥಮವೆನಿಸಿಕೊಂಡಿದೆ. 9 ಮಂದಿ ನ್ಯಾಯಾಧೀಶರ ಪೈಕಿ ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಅಭಯ್ ಶ್ರೀನಿವಾಸ ಓಕಾ ಹಾಗೂ ನ್ಯಾಯಮೂರ್ತಿ ಬಿ.ವಿ. ನಾಗರತ್ನಾ ಕೂಡಾ ಸೇರಿದ್ದಾರೆ.

''ಕರ್ನಾಟಕ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿಯಾಗಿದ್ದ ಅಭಯ್‌ ಶ್ರೀನಿವಾಸ್‌ ಓಕಾ ಅವರು ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿಯಾಗಿ ಪದೋನ್ನತಿ ಪಡೆದಿದ್ದು, ಅವರು ಹುದ್ದೆ ತೆರವು ಮಾಡಿದ ಬಳಿಕ ಹಂಗಾಮಿ ಮುಖ್ಯ ನ್ಯಾಯಮೂರ್ತಿಯಾಗಿ ಕರ್ತವ್ಯ ನಿರ್ವಹಿಸಲು ಕರ್ನಾಟಕ ಹೈಕೋರ್ಟ್‌ನ ಅತ್ಯಂತ ಹಿರಿಯ ನ್ಯಾಯಮೂರ್ತಿಯಾದ ಸತೀಶ್‌ ಚಂದ್ರ ಶರ್ಮಾ ಅವರನ್ನು ಭಾರತ ಸಂವಿಧಾನದ 223 ವಿಧಿಯಡಿ ದೊರೆತಿರುವ ಅಧಿಕಾರ ಬಳಸಿ ರಾಷ್ಟ್ರಪತಿ ನೇಮಕ ಮಾಡಿದ್ದಾರೆ,'' ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

Justice Satish Chandra Sharma appointed as Acting Chief Justice of Karnataka High Court

ಕರ್ನಾಟಕ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿಯಾಗಿದ್ದ ಅಭಯ್‌ ಶ್ರೀನಿವಾಸ್‌ ಓಕಾ ಅವರು ಆಗಸ್ಟ್‌ 25ರಂದು ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿಯಾಗಿ ಪದೋನ್ನತಿ ಪಡೆದ ಹಿನ್ನೆಲೆಯಲ್ಲಿ ಅಧಿಸೂಚನೆ ಹೊರಡಿಸಲಾಗಿದೆ. ನ್ಯಾ. ಓಕಾ ಮಾತ್ರವಲ್ಲದೇ ನ್ಯಾ. ಬಿ ವಿ ನಾಗರತ್ನ ಅವರನ್ನೂ ಸುಪ್ರೀಂಕೋರ್ಟ್‌ ನ್ಯಾಯಮೂರ್ತಿಯನ್ನಾಗಿ ನೇಮಿಸಲಾಗಿದೆ.

ಸುಪ್ರೀಂಕೋರ್ಟ್ ನ್ಯಾಯಮೂರ್ತಿಯಾಗಿ ನ್ಯಾ.ಓಕಾ, ನಾಗರತ್ನ ನೇಮಕಸುಪ್ರೀಂಕೋರ್ಟ್ ನ್ಯಾಯಮೂರ್ತಿಯಾಗಿ ನ್ಯಾ.ಓಕಾ, ನಾಗರತ್ನ ನೇಮಕ

ಆಗಸ್ಟ್‌ 17ರಂದು ಸುಪ್ರೀಂ ಕೋರ್ಟ್‌ ಕೊಲಿಜಿಯಂ ನ್ಯಾಯಮೂರ್ತಿ, ಹಿರಿಯ ವಕೀಲ ಹಾಗೂ ಮಾಜಿ ಸಾಲಿಸಿಟರ್ ಜನರಲ್ ಹೆಸರುಗಳನ್ನು ಸುಪ್ರೀಂಕೋರ್ಟ್‌ ನ್ಯಾಯಮೂರ್ತಿ ಹುದ್ದೆಗೆ ಶಿಫಾರಸ್ಸು ಮಾಡಿತ್ತು.

ಕರ್ನಾಟಕ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಗಳಾದ ಅಭಯಶ್ರೀನಿವಾಸ ಓಕಾ, ಗುಜರಾತ್ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ವಿಕ್ರಂನಾಥ್, ಸಿಕ್ಕಿಂ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಜಿತೇಂದ್ರಕುಮಾರ್ ಮಹೇಶ್ವರಿ, ತೆಲಂಗಾಣ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಹಿಮಾ ಕೋಹ್ಲಿ, ಕೇರಳ ಹೈಕೋರ್ಟ್‌ನ ನ್ಯಾಯಮೂರ್ತಿ ಸಿ.ಟಿ. ರವಿಕುಮಾರ್, ಮದ್ರಾಸ್ ಹೈಕೋರ್ಟ್‌ನ ನ್ಯಾಯಮೂರ್ತಿ ಎಂ.ಎಂ. ಸುಂದರೇಶ್, ಗುಜರಾತ್ ಹೈಕೋರ್ಟ್‌ನ ಬೇಲಾ ಎಂ. ತ್ರಿವೇದಿ ಮತ್ತು ಹಿರಿಯ ವಕೀಲ ಹಾಗೂ ಮಾಜಿ ಸಾಲಿಸಿಟರ್ ಜನರಲ್ ಪಿ.ಎಸ್. ನರಸಿಂಹ ಇವರುಗಳು ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳಾಗಿ ನೇಮಕಗೊಂಡಿದ್ದಾರೆ.

English summary
President appoints Justice Satish Chandra Sharma, senior-most Judge of Karnataka High Court appointed as Acting Chief Justice of Karnataka High Court. Justice Abhay Shreenivas Oka appointment as Judge of the Supreme Court of India.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X