ಲೋಕಾಯುಕ್ತ ಹುದ್ದೆಗೆ ಎಸ್.ಆರ್.ನಾಯಕ್ ಹೆಸರು?

ಬೆಂಗಳೂರು, ಡಿಸೆಂಬರ್ 17 : ನ್ಯಾಯಮೂರ್ತಿ ವೈ.ಭಾಸ್ಕರರಾವ್ ರಾಜೀನಾಮೆ ನಂತರ ಕರ್ನಾಟಕದ ಮುಂದಿನ ಲೋಕಾಯುಕ್ತರು ಯಾರು? ಎಂಬ ಪ್ರಶ್ನೆ ಹುಟ್ಟಿಕೊಂಡಿದೆ. ಕರ್ನಾಟಕ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಎಸ್.ಆರ್.ನಾಯಕ್ ಅವರ ಹೆಸರು ಲೋಕಾಯುಕ್ತರ ಹುದ್ದೆಗೆ ಕೇಳಿಬರುತ್ತಿದೆ.

ಲೋಕಾಯುಕ್ತದಲ್ಲಿ ನಡೆದ ಹಗರಣ ಬೆಳಕಿಗೆ ಬಂದ ನಂತರ ಕರ್ನಾಟಕ ಲೋಕಾಯುಕ್ತರಾಗಿದ್ದ ವೈ.ಭಾಸ್ಕರರಾವ್ ಅವರು ಸರಣಿ ರಜೆಗಳನ್ನು ಪಡೆದಿದ್ದರು. ಹಗರಣಕ್ಕೆ ಸಂಬಂಧಿಸಿದಂತೆ ಪುತ್ರ ಅಶ್ವಿನ್ ರಾವ್ ಬಂಧನವಾದ ಬಳಿಕ ಭಾಸ್ಕರರಾವ್ ರಾಜೀನಾಮೆ ನೀಡಬೇಕು ಎಂಬ ಒತ್ತಾಯ ಕೇಳಿಬಂದಿತ್ತು. ['ಭಾಸ್ಕರರಾವ್ ರಾಜೀನಾಮೆ ಅಂಗೀಕರಿಸಬಾರದಿತ್ತು']

sr nayak

ವಿವಿಧ ಸಂಘಟನೆಗಳು ಮತ್ತು ಪ್ರತಿಪಕ್ಷಗಳ ಒತ್ತಾಯಕ್ಕೆ ಮಣಿದ ಭಾಸ್ಕರರಾವ್ ಅವರು ಡಿಸೆಂಬರ್ 7ರಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಡಿಸೆಂಬರ್ 8ರಂದು ರಾಜ್ಯಪಾಲ ವಜುಭಾಯಿ ವಾಲಾ ಅವರು ರಾಜೀನಾಮೆಯನ್ನು ಅಂಗೀಕರಿಸಿದ್ದರು. [ಕರ್ನಾಟಕ ಲೋಕಾಯುಕ್ತ ಹಗರಣದ Timeline]

ಮುಂದಿನ ಲೋಕಾಯುಕ್ತರು ಯಾರು? : ಲೋಕಾಯುಕ್ತ ಸಂಸ್ಥೆ ಬಾಗಿಲು ಮುಚ್ಚಲು ಬಿಡುವುದಿಲ್ಲ. ಶೀಘ್ರದಲ್ಲೇ ಹೊಸ ಲೋಕಾಯುಕ್ತರನ್ನು ನೇಮಕ ಮಾಡುವುದಾಗಿ ಕರ್ನಾಟಕ ಸರ್ಕಾರ ಹೇಳಿತ್ತು. ಸದ್ಯ, ಕಾನೂನು ಇಲಾಖೆಯ ಅಧಿಕಾರಿಗಳು ನೀಡಿದ ಮಾಹಿತಿ ಪ್ರಕಾರ ನ್ಯಾ.ಎಸ್‌.ಆರ್.ನಾಯಕ್ ಅವರ ಹೆಸರು ಲೋಕಾಯುಕ್ತ ಹುದ್ದೆಗೆ ಕೇಳಿಬರುತ್ತಿದೆ. [ಲೋಕಾಯುಕ್ತ ಹುದ್ದೆಗೆ ಕೇಳಿಬರಲಿವೆ ಕನಿಷ್ಠ 5 ಹೆಸರು]

ಮೊದಲು ಲೋಕಾಯುಕ್ತ ಹುದ್ದೆಗೆ ಸುಪ್ರೀಂಕೋರ್ಟ್ ನಿವೃತ್ತ ಮುಖ್ಯ ನ್ಯಾಯಮೂರ್ತಿಗಳನ್ನು ಅಥವ ಮತ್ತು ಸುಪ್ರೀಂಕೋರ್ಟ್‌ನಲ್ಲಿ ನ್ಯಾಯಮೂರ್ತಿಗಳಾಗಿ ಸೇವೆ ಸಲ್ಲಿಸಿದವರನ್ನು ನೇಮಿಸಬೇಕಾಗಿತ್ತು. ಆದರೆ, ಈಗ ನೇಮಕಾತಿ ಪ್ರಕ್ರಿಯೆಯಲ್ಲಿ ಬದಲಾವಣೆ ತಂದಿದ್ದು ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿಗಳ ಹೆಸರನ್ನು ಸಹ ಪರಿಗಣಿಸಬಹುದಾಗಿದೆ.

ಎಸ್.ಆರ್.ನಾಯಕ್ ಅವರು ಕರ್ನಾಟಕ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿಗಳಾಗಿದ್ದು, ಕರ್ನಾಟಕ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರಾಗಿಯೂ ಕಾರ್ಯನಿರ್ವಹಿಸಿದ್ದಾರೆ. ಆದ್ದರಿಂದ, ಕಾನೂನು ಇಲಾಖೆ ಎಸ್.ಆರ್.ನಾಯಕ್ ಅವರ ಹೆಸರನ್ನು ಪರಿಗಣಿಸುವ ಸಾಧ್ಯತೆ ಇದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+