ಜಿಲ್ಲಾ ಕಾಂಗ್ರೆಸ್ ಘಟಕಗಳ ಬಿಕ್ಕಟ್ಟು ಶಮನಕ್ಕೆ ವೇಣುಗೋಪಾಲ್ ಪ್ರವಾಸ
ಬೆಂಗಳೂರು, ಜೂನ್ 26 : ಜಿಲ್ಲಾ ಕಾಂಗ್ರೆಸ್ ಘಟಕಗಳಲ್ಲಿರುವ ಗೊಂದಲ, ಸಂಘಟನಾತ್ಮಕ ಬಿಕ್ಕಟ್ಟು ಪರಿಹಾರಕ್ಕೆ ಮುಂದಾಗಿರುವ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ. ವೇಣುಗೋಪಾಲ್ ಅವರು ಇದೇ 27ರಿಂದ 30ರವರೆಗೆ ವಿವಿಧ ಜಿಲ್ಲೆಗಳಿಗೆ ಭೇಟಿ ನೀಡಲಿದ್ದಾರೆ.
ಕರ್ನಾಟಕ ಕಾಂಗ್ರೆಸ್ ಉಸ್ತುವಾರಿಯಾಗಿ ಅಧಿಕಾರ ವಹಿಸಿಕೊಂಡ ಬಳಿಕ ಪಕ್ಷದ ಸಂಘಟನೆಗೆ ಚುರುಕು ಮುಟ್ಟಿಸಲು ಮುಂದಾಗಿದ್ದ ಅವರು, ಕೆಪಿಸಿಸಿ ಕಚೇರಿಯಲ್ಲಿ ಜಿಲ್ಲಾವಾರು ಪ್ರಮುಖರ ಸಭೆ ನಡೆಸಿದ್ದರು.

ಹಾಸನ, ಬೆಳಗಾವಿ, ಮಂಗಳೂರು, ಮೈಸೂರು, ಧಾರವಾಡ, ಮಂಡ್ಯ, ಬಳ್ಳಾರಿ ಜಿಲ್ಲಾ ಘಟಕಗಳಲ್ಲಿ ಗೊಂದಲ ಇರುವುದು ಅವರ ಗಮನಕ್ಕೆ ಬಂದಿತ್ತು. ಜಿಲ್ಲಾ ಕೇಂದ್ರಕ್ಕೆ ಭೇಟಿ ಕೊಟ್ಟು ತಳಮಟ್ಟದ ಕಾರ್ಯಕರ್ತರ ಅಹವಾಲು ಆಲಿಸುವುದಾಗಿ ಅವರು ಭರವಸೆ ನೀಡಿದ್ದರು.
ಇದೇ 29ರಂದು ಕೂಡಲ ಸಂಗಮದಲ್ಲಿ ನಡೆಯಲಿರುವ ಕೆಪಿಸಿಸಿ ಕಾರ್ಯಾಧ್ಯಕ್ಷ ಎಸ್.ಆರ್. ಪಾಟೀಲ ಅವರ ಅಧಿಕಾರ ಸ್ವೀಕಾರ ಸಮಾರಂಭದಲ್ಲಿ ಅವರು ಪಾಲ್ಗೊಳ್ಳಲಿದ್ದಾರೆ.












Click it and Unblock the Notifications