ಸದ್ಯಕ್ಕಿಲ್ಲ ಎಪಿಎಲ್ ಬಿಪಿಎಲ್ ಕಾರ್ಡ್ ಗೆ ಅರ್ಜಿ ಸಲ್ಲಿಕೆಗೆ ಅನುಮತಿ; ಕಾರಣವೇನು? ಕೆ ಎಚ್ ಮುನಿಯಪ್ಪ ಹೇಳಿದಿಷ್ಟು!
ಬೆಂಗಳೂರು, ಆಗಸ್ಟ್ 18: ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾಗಿರುವ ಅನ್ನಭಾಗ್ಯ ಯೋಜನೆ ಜಾರಿಯಾಗಿದ್ರೂ 10 ಕೆ ಜಿ ಅಕ್ಕಿ ಮುಂದಿನ ತಿಂಗಳು ಹತ್ತು ಕೆಜಿ ಪಡಿತರ ಸಿಗೋದು ಡೌಟ್, ಎಪಿಎಲ್ ಬಿಪಿಎಲ್ ಕಾರ್ಡ್ ಗೆ ಅರ್ಜಿ ಸಲ್ಲಿಕೆಗೆ ಸದ್ಯಕ್ಕೆ ಅನುಮತಿ ಎಂದು ಆಹಾರ ಸಚಿವ ಕೆ ಎಚ್ ಮುನಿಯಪ್ಪ ಹೇಳಿದ್ದಾರೆ.
ಈ ಕುರಿತು ಶುಕ್ರವಾರ ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಎಪಿಎಲ್ ಬಿಪಿಎಲ್ ಕಾರ್ಡ್ ಅರ್ಜಿ ಸಲ್ಲಿಕೆ ಗೆ ನಾವೇ ಓಪನ್ ಮಾಡಿಲ್ಲ. ಏನು ಕಾರಣ ಅಂತ ಸದ್ಯದಲ್ಲೇ ಹೇಳ್ತೇವೆ, ಇನ್ನೂ ಒಂದಿಷ್ಟು ದಿನ ಎಪಿಎಲ್ ಬಿಪಿಎಲ್ ಅರ್ಜಿ ಸಲ್ಲಿಕೆ ಗೆ ಅವಕಾಶ ಇಲ್ಲ ಎಂದು ತಿಳಿಸಿದ್ದಾರೆ.

ಈಗಾಗಲೇ ಅಕ್ಕಿ ಕೊಡಲು ತೆಲಂಗಾಣ ಮತ್ತು ಆಂದ್ರಪ್ರದೇಶ ಮುಂದೆ ಬಂದಿದೆ. ಅಕ್ಕಿ ದರದ ಬಗ್ಗೆ ಮಾತುಕತೆ ನಡೆಯುತ್ತಿದೆ, ವಾರದ ಹತ್ತು ದಿನಗಳ ಒಳಗೆ ಎಲ್ಲವೂ ಫೈನಲ್ ಆಗುತ್ತದೆ. ಮುಂದಿನ ತಿಂಗಳು ಪಡಿತರದಲ್ಲಿ ಹತ್ತು ಕೆಜಿ ಅಕ್ಕಿ ಸಿಗುತ್ತೆ ಅಂತ ಡೆಡ್ ಲೈನ್ ಕೊಡಕ್ಕೆ ಆಗಲ್ಲ. ಈ ಬಗ್ಗೆ ಅಧಿಕಾರಿಗಳ ಜತೆ ಚರ್ಚೆ ಆಗುತ್ತಿದೆ, ಈ ಬಗ್ಗೆ ಮಾಹಿತಿ ಪಡೆದಿದ್ದೇನೆ. ಮುಂದಿನ ತಿಂಗಳು ಹತ್ತು ಕೆಜಿ ಪಡಿತರ ಸಿಗೋದು ಡೌಟ್ ಎಂದು ಮುನಿಯಪ್ಪ ಹೇಳಿದ್ದಾರೆ.
ಇಂದು ಜಿಲ್ಲಾ ಮಟ್ಟದ ಆಹಾರ ಇಲಾಖೆಯ ಅಧಿಕಾರಿಗಳ ಸಭೆ ನಡೆಸಿದ್ದೇವೆ. ಬಿಬಿಟಿ ವಿಷಯದಲ್ಲಿ ಕಳೆದ ತಿಂಗಳು ತಡವಾಯಿತು, ಈ ತಿಂಗಳ 25,26 ಒಳಗೆ ಫಲಾನುಭವಿಗಳ ಅಕೌಂಟ್ ಗೆ ಹಣ ಸಂದಾಯವಾಗುತ್ತದೆ. ಜೋಳ,ರಾಗಿ,ಅಕ್ಕಿ ಎಷ್ಟು ಪ್ರಮಾಣದಲ್ಲಿ ಬಳಕೆ ಮಾಡ್ತಾರೆ ಅನ್ನೋದರ ಬಗ್ಗೆ ಮಾಹಿತಿ ನಡೆಯುತ್ತಿದ್ದೇವೆ ಎಂದು ಹೇಳಿದರು.
ತೆರವಾಗಿರುವ ವಿಧಾನ ಪರಿಷತ್ತಿನ ಮೂರು ಸ್ಥಾನಗಳ ಆಯ್ಕೆ ಕುರಿತು ಹೈಕಮಾಂಡ್ ನಾಯಕರಿಗೆ ಪತ್ರ ಬರೆದಿರುವುದು ನಿಜ. ಸುಧಾಮ್ ದಾಸ್ ಮೂರು ತಿಂಗಳ ಹಿಂದಿನ ತನಕ ಸರ್ಕಾರಿ ಅಧಿಕಾರಿ ಆಗಿದ್ರು, ಅವರು ಪಕ್ಷಕ್ಕೆ ಈಗಷ್ಟೇ ಬಂದಿದ್ದಾರೆ. ಇನ್ನೊಂದಿಷ್ಟು ದಿನಗಳ ಕಾಲ ಸುಧಾಮ್ ದಾಸ್ ಪಕ್ಷಕ್ಕೆ ಕೆಲಸ ಮಾಡಲಿ. 30 ವರ್ಷಗಳ ಕಾಲದಿಂದ ಕೆಲಸ ಮಾಡಿದ ದಲಿತ ನಾಯಕರಿಗೆ ಅವಕಾಶ ನೀಡಲಿ ಎಂಬುದಷ್ಟೇ ನಮ್ಮ ಸಲಹೆ. ಪ್ರಜಾಪ್ರಭುತ್ವ ವ್ಯವಸ್ಥೆಯ ಅಡಿಯಲ್ಲಿ ಪತ್ರ ಬರೆದಿರುವುದು ಸತ್ಯ, ಹೈಕಮಾಂಡ್ ನಾಯಕರು ನಿರ್ಧಾರ ಮಾಡುತ್ತಾರೆ, ಹೈಕಮಾಂಡ್ ನಾಯಕರ ನಿರ್ಧಾರ ಮುಖ್ಯ ಎಂದು ಹೇಳಿದರು.












Click it and Unblock the Notifications