ರಾಜ್ಯದ ಜನತೆಗೆ ಗುಡ್ ನ್ಯೂಸ್; ಆಹಾರ ಧಾನ್ಯ ಹಂಚಿಕೆ ಬಗ್ಗೆ ಕೆ.ಹೆಚ್.ಮುನಿಯಪ್ಪ ಮಾಹಿತಿ
ಬೆಳಗಾವಿ, ಡಿಸೆಂಬರ್ 11: ಕರ್ನಾಟಕ ಅಗತ್ಯ ವಸ್ತುಗಳ ಸಾರ್ವಜನಿಕ ವಿತರಣಾ ಪದ್ಧತಿ ನಿಯಂತ್ರಣ 2016 ಕಲಂ(6)ರಲ್ಲಿ ಹೊಸ ನ್ಯಾಯಬೆಲೆ ಅಂಗಡಿ ಮಂಜೂರು ಮಾಡಲು ಅವಕಾಶ ಕಲ್ಪಿಸಲಾಗಿದ್ದು ಅದರಂತೆ ಅಗತ್ಯಾನುಸಾರ ಹೊಸ ನ್ಯಾಯಬೆಲೆ ಅಂಗಡಿ ಮಂಜೂರಾತಿಗೆ ಕ್ರಮ ವಹಿಸಲಾಗುತ್ತಿದೆ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಹಾಗೂ ಕಾನೂನು ಮಾಪನಾಶಾಸ್ತ್ರ ಸಚಿವÀ ಕೆ.ಹೆಚ್.ಮುನಿಯಪ್ಪ ಹೇಳಿದರು.
ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲದ ಅಧಿವೇಶನದ ವಿಧಾನಸಭೆಯ ಪ್ರಶ್ನೋತ್ತರ ಕಲಾಪದಲ್ಲಿ ಗುರುಮಿಠಕಲ್ ಕ್ಷೇತ್ರದ ಶಾಸಕ ಶರಣಗೌಡ ಕಂದಕೂರ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದ ಕೆ ಹೆಚ್ ಮುನಿಯಪ್ಪ ಅವರು, ಸಣ್ಣ ಸಣ್ಣ ಗ್ರಾಮದ ಪಡಿತರ ಚೀಟಿದಾರರಿಗೆ ತೊಂದರೆಯಾಗದಂತೆ ನ್ಯಾಯಬೆಲೆ ಅಂಗಡಿ ವರ್ತಕರಿಗೆ ಗ್ರಾಮಗಳಲ್ಲಿ ಉಪ ಕೇಂದ್ರಗಳನ್ನು ತೆರೆದು ಆಹಾರ ಧಾನ್ಯ ಹಂಚಿಕೆ ಮಾಡಲು ಕ್ರಮ ವಹಿಸಲಾಗುವುದು. ಪಡಿತರ ಚೀಟಿಗಳ ಸಂಖ್ಯಾನುಸಾರ ಅಗತ್ಯವಿದ್ದಲ್ಲಿ ಹೊಸ ನ್ಯಾಯಬೆಲೆ ಅಂಗಡಿ ತೆರೆಯಲು ಕ್ರಮ ವಹಿಸಲಾಗುವುದು ಎಂದು ಸಚಿವ ಕೆ.ಹೆಚ್.ಮುನಿಯಪ್ಪ ಹೇಳಿದರು.

ಅಗತ್ಯಾನುಸಾರ ಹೊಸ ನ್ಯಾಯಬೆಲೆ ಅಂಗಡಿ ಮಂಜೂರಾತಿಗೆ ಕ್ರಮ ವಹಿಸಲಾಗುತ್ತಿದೆ. ಪರಿಶಿಷ್ಟ ಜಾತಿ ಆಥವಾ ಪರಿಶಿಷ್ಟ ಪಂಗಡಗಳ ಸಮುದಾಯಗಳ ಜನಸಂಖ್ಯೆಯು 40%ಕ್ಕಿಂತ ಹೆಚ್ಚಿರುವ ನ್ಯಾಯಬೆಲೆ ಅಂಗಡಿ ಪ್ರದೇಶದಲ್ಲಿ ಆದ್ಯತೆಯ ಮೇಲೆ ಹೊಸ ನ್ಯಾಯಬೆಲೆ ಅಂಗಡಿಗಳು ಮತ್ತು ನವೀಕರಿಸಿದ ನ್ಯಾಯಬೆಲೆ ಅಂಗಡಿಗಳನ್ನು ಆ ಸಮುದಾಯದವರಿಗೆ ನೀಡಲು ಅಧಿಸೂಚನೆಯನ್ನು ಹೊರಡಿಸಲಾಗಿದೆ.
ಹೊಸ ನ್ಯಾಯಬೆಲೆ ಅಂಗಡಿಗಳನ್ನು ಮಂಜೂರು ಮಾಡುವ ಸಂದರ್ಭದಲ್ಲಿ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಸಮುದಾಯದ ಸಂಘ ಸಂಸ್ಥೆಗಳಿಗೆ/ಸಮುದಾಯದ ಖಾಸಗಿ ವ್ಯಕ್ತಿಗಳಿಗೆ ಮೀಸಲಾತಿಯನ್ನು ಅನುಸರಿಸಿ ಹೊಸ ನ್ಯಾಯಬೆಲೆ ಅಂಗಡಿ ಮಂಜೂರು ಮಾಡಲು ಆದ್ಯತೆ ನೀಡುವ ಬಗ್ಗೆ ಜಿಲ್ಲಾ ಮಟ್ಟದ ಸಮಿತಿಯನ್ನು ರಚಿಸಿ ಮಾರ್ಗಸೂಚಿಗಳನ್ನು ಸಹ ಹೊರಡಿಸಲಾಗಿದೆ. ಸರ್ಕಾರದ ಆದೇಶದಂತೆ 75 ವಯಸ್ಸಿನ ಮೇಲ್ಪಟ್ಟ ಒಂಟಿ ಹಿರಿಯ ನಾಗರೀಕರು ಮಾತ್ರ ಇರುವ ಮನೆಗಳಿಗೆ ಅನ್ನಸುವಿಧಾ ಮಾಡ್ಯುಲ್ ಮೂಲಕ ಅರ್ಹ ಫಲಾನುಭವಿಗಳ ಮನೆ ಬಾಗಿಲಿಗೆ ಪಡಿತರ ವಿತರಣೆ ಕಾರ್ಯವನ್ನು ಅನುಷ್ಠಾನಗೊಳಿಸಲಾಗಿರುತ್ತದೆ ಎಂದು ಸಚಿವ ಕೆ. ಹೆಚ್.ಮುನಿಯಪ್ಪ ವಿಧಾನಸಭೆಯಲ್ಲಿ ವಿವರಿಸಿದರು.
ರಾಷ್ಟ್ರದಲ್ಲಿ ಪ್ರಪ್ರಥಮ ಬಾರಿಗೆ ನಮ್ಮ ರಾಜ್ಯ ಸರ್ಕಾರವು SC/ST ಸಮುದಾಯಗಳಿಗೆ ಆದ್ಯತೆ ಮೇರೆಗೆ ಮಿಸಲಾತಿ ಅನುಸಾರ ನ್ಯಾಯ ಬೆಲೆ ಅಂಗಡಿ ನೀಡಲು ತಿರ್ಮಾನಿಸಿ, ಆದೇಶ ಹೊರಡಿಸಿದೆ. ರಾಜ್ಯದಲ್ಲಿ ಪ್ರಸ್ತುತ 20,463 ನ್ಯಾಯ ಬೆಲೆ ಅಂಗಡಿಗಳಿದ್ದು, ಅದರಲ್ಲಿ 918 ನ್ಯಾಯಬೆಲೆ ಅಂಗಡಿಗಳು ರದ್ದು ಆಗಿದ್ದು ಇವುಗಳನ್ನು ಹೊಸದಾಗಿ ಅಧಿಸೂಚನೆ ಮೂಲಕ ಕರೆಯಲು ಕ್ರಮವಹಿಸಲಾಗುತ್ತಿದೆ. ಶಾಸಕರಾದ ಶರಣಗೌಡ ಕಂದಕೂರು ರವರು ಸದನದಲ್ಲಿ ಪ್ರಸ್ತಾಪಿಸಿದಂತೆ 5ರಿಂದ 6 ಗ್ರಾಮಗಳು ಸೇರಿ ಒಂದು ನ್ಯಾಯಬೆಲೆ ಅಂಗಡಿ ಇರುವುದು ನಮ್ಮ ಗಮನಕ್ಕೆ ಬಂದಿದೆ. ಇದರಿಂದ ಫಲಾನುಭವಿಗಳಿಗೆ ಅನಾನುಕೂಲವಾತ್ತಿದೆ.
ಪ್ರಸ್ತುತ ರಾಜ್ಯದಲ್ಲಿರುವ 20,463 ನ್ಯಾಯ ಬೆಲೆ ಅಂಗಡಿಗಳಲ್ಲಿ ಸುಮಾರು 3000 ದಿಂದ 2000 ಪಡಿತರ ಚೀಟಿ ಹೊಂದಿರುವ ನ್ಯಾಯಬೆಲೆ ಅಂಗಡಿಗಳಲ್ಲಿ ಹೆಚ್ಚುವರಿ ಕಾರ್ಡಗಳನ್ನು ವೈಜ್ಞಾನಿಕವಾಗಿ ಮರು ವರ್ಗಿಕರಣ ಮಾಡಿದಾಗ ಸುಮಾರು 4600 ಹೊಸ ನ್ಯಾಯ ಅಂಗಡಿಗಳನ್ನು ಇನ್ನೂ ಸೃಜಿಸಬಹುದು. ನ್ಯಾಯಬೆಲೆ ಅಂಗಡಿಗಳನ್ನು ಆ ಊರಿನ ಫಲಾನುಭವಿಗಳಿಗೆ ಅನುಕೂಲವಾಗುವಂತೆ ಹೊಸ ನ್ಯಾಯಬೆಲೆ ಅಂಗಡಿ ಮಂಜೂರು ಮಾಡಲು ಕ್ರಮವಹಿಸಲಾಗುವುದು.
-
LPG Good News: ಬೆಂಗಳೂರು ಹೋಟೆಲ್ಗಳಿಗೆ 17,5000 ಸಿಲಿಂಡರ್ ವಿತರಣೆ: ಕೆಎಚ್ ಮುನಿಯಪ್ಪ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ












Click it and Unblock the Notifications