K.N.Rajanna: ರಾಜಕೀಯ ನಿವೃತ್ತಿ ಬಗ್ಗೆ ಕೆ.ಎನ್.ರಾಜಣ್ಣ ಮಹತ್ವದ ಹೇಳಿಕೆ
K.N.Rajanna: ರಾಜಕೀಯ ನಿವೃತ್ತಿ ಬಗ್ಗೆ ಸಚಿವ ಕೆ.ಎನ್.ರಾಜಣ್ಣ ಮಹತ್ವದ ಹೇಳಿಕೆ ನೀಡಿದ್ದು, ಇದು ಕಾಂಗ್ರೆಸ್ ಪಾಳಯದಲ್ಲಿ ಭಾರೀ ಸಂಚಲ ಮೂಡಿಸಿದೆ. ಹಾಗಾದರೆ ಅವರು ಈ ನಿರ್ಧಾರಕ್ಕೆ ಬರಲು ಕಾರಣ ಏನು ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
ಬಾಗಲಕೊಟೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಡಿಸಿಎಂ ಹುದ್ದೆಯ ಆಕಾಂಕ್ಷಿಯಲ್ಲ. ನಾನು ಮುಂದಿನ ದಿನಗಳಲ್ಲಿ ಯಾವ ಚುನಾವಣೆಯಲ್ಲೂ ಸ್ಪರ್ಧಿಸುವುದಿಲ್ಲ ಎಂದು ಹೇಳುವ ಮೂಲಕ ರಾಜಕೀಯ ನಿವೃತ್ತಿ ಬಗ್ಗೆ ಸುಳಿವು ನೀಡಿದ್ದಾರೆ.

ಇದೀಗ ರಾಜ್ಯದಲ್ಲಿ ಡಿಸಿಎಂ ಹುದ್ದೆ ವಿಚಾರದ ಬಗ್ಗೆ ಚರ್ಚೆಗಳು ನಡೆಯುತ್ತಿದ್ದು, ಇದರ ಬೆನ್ನಲ್ಲೇ ಇದೀಗ ತಾವು ಡಿಸಿಎಂ ಹುದ್ದೆಯ ಆಕಾಂಕ್ಷಿಯಲ್ಲ ಎಂದು ಮೂಲಕ ಡಿಸಿಎಂ ಹುದ್ದೆ ಕುರಿತು ಕೆ.ಎನ್.ರಾಜಣ್ಣ ಸ್ಪಷ್ಟನೆ ನೀಡಿದ್ದಾರೆ.
ರೇಣುಕಾಚಾರ್ಯ ವಿರುದ್ಧ ಆಕ್ರೋಶ: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಸೋಲಲು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಮತ್ತು ಅವರ ತಂಡವೇ ಕಾರಣ. ಟಿಕೆಟ್ ಘೋಷಣೆಗೂ ಮುನ್ನ ಶುರು ಮಾಡಿದ್ದ ಗೊಂದಲ ಕೊನೆಯವರೆಗೂ ಮುಂದುವರಿಯಿತು. ಈ ಕಾರಣದಿಂದಲೇ ಬಿಜೆಪಿ ಸೋಲಬೇಕಾಯಿತು ಎಂದು ಬಿಜೆಪಿ ನಾಯಕರು ಗಂಭೀರ ಆರೋಪ ಮಾಡಿದರು.
ನಗರದ ಕೆ.ಬಿ.ಬಡಾವಣೆಯ ಮಾಜಿ ಶಾಸಕ ಎಸ್.ವಿ.ರಾಮಚಂದ್ರಪ್ಪ ಅವರ ಮನೆಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಬಿಜೆಪಿ ಜಿಲ್ಲಾ ಘಟಕದ ಮಾಜಿ ಅಧ್ಯಕ್ಷರಾದ ವೀರೇಶ್ ಹನಗವಾಡಿ, ಯಶವಂತರಾವ್ ಜಾಧವ್, ಬಿ.ಎಸ್.ಜಗದೀಶ್, ಎಸ್.ವಿ.ರಾಮಚಂದ್ರಪ್ಪ ಅವರು ರೇಣುಕಾಚಾರ್ಯ ಅಂಡ್ ಟೀಂ ವಿರುದ್ಧ ಆರೋಪಗಳ ಸುರಿಮಳೆಗೈದರು.
ದಾವಣಗೆರೆ ಲೋಕಸಭಾ ಕ್ಷೇತ್ರ ಬಿಜೆಪಿ ಭದ್ರಕೋಟೆ. ಕಳೆದ 26 ವರ್ಷಗಳಿಂದಲೂ ಇಲ್ಲಿ ಗೆದ್ದಿರುವುದು ಬಿಜೆಪಿಯೇ. ಆದರೆ, ಬಿಜೆಪಿ ಪಕ್ಷದವರ ಅಸಹಕಾರ, ಭಿನ್ನಮತೀಯ ಚಟುವಟಿಕೆ, ನಡವಳಿಕೆ ಸರಿಯಿಲ್ಲದ ಕಾರಣ ನಾವು ಸೋಲು ಕಾಣಬೇಕಾಯಿತು. ಕಾಂಗ್ರೆಸ್ ಅಭ್ಯರ್ಥಿ ಡಾ.ಪ್ರಭಾ ಮಲ್ಲಿಕಾರ್ಜುನ್ ಅವರಿಗೆ ಪರೋಕ್ಷವಾಗಿ ಬೆಂಬಲಿಸಿದ ಕಾರಣ ಸೋಲುಂಟಾಗಿದೆ. ಈಗ ಬಿಜೆಪಿ ಪಕ್ಷದ ತತ್ವ, ಸಿದ್ಧಾಂತದ ಬಗ್ಗೆ ಮಾತನಾಡುವ ನೈತಿಕತೆ ಉಳಿಸಿಕೊಂಡಿಲ್ಲ ಎಂದು ಆರೋಪಿಸಿದರು.
ಬಿಜೆಪಿ ಜಿಲ್ಲಾ ಘಟಕದ ಮಾಜಿ ಅಧ್ಯಕ್ಷ ವೀರೇಶ್ ಹನಗವಾಡಿ ಮಾತನಾಡಿ, ನಾನೊಬ್ಬನೇ ಬರ್ತೀನಿ. ನಾನು ಯಾರಿಗೂ ಹೆದರಲ್ಲ. ನಾನು ಹೊನ್ನಾಳಿಗೆ ಬಂದರೆ ಗಲಾಟೆ ಆಗುತ್ತದೆ ಎಂದಿದ್ದರು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ. ನಾನು ಈಗ ಒಬ್ಬನೇ ಬರ್ತಿನಿ. ಎಲ್ಲಿಗೆ
ಕರೆದರು ಬರುವೆ. ಗೂಂಡಾಗಿರಿ, ದಾದಾಗಿರಿಗೆ ಹೆದರುವವನಲ್ಲ ಎಂದು ಬಿಜೆಪಿ ಜಿಲ್ಲಾ ಘಟಕದ ಮಾಜಿ ಅಧ್ಯಕ್ಷ ವೀರೇಶ್ ಹನಗವಾಡಿ ಅವರು ಎಂ.ಪಿ.ರೇಣುಕಾಚಾರ್ಯರಿಗೆ ಪಂಥಾಹ್ವಾನ ಕೊಟ್ಟಿದ್ದಾರೆ.
ಹೊನ್ನಾಳಿಗೆ ನಾನು ಬಂದರೆ ಗಲಾಟೆ ಆಗುತ್ತದೆ ಎಂದಿದ್ದರು. ಭಂಡನತ ಪ್ರಶ್ನೆ ಮಾಡಿದ್ದಕ್ಕೆ ಮಾಜಿ ಶಾಸಕರು ಈ ಮಾತು ಆಡಿದ್ದರು. ಎಲ್ಲೇ ಹೇಳಿದರೂ ಒಬ್ಬನೇ ಬರುತ್ತೇನೆ. ಗಲಾಟೆ ಮಾಡಿಸುವುದಾದರೆ ಮಾಡಿಸಿ, ಅದೆಲ್ಲಿ ಆಗುತ್ತದೆ ಅಂತಾ ಹೇಳಲಿ. ಭಂಡನತ, ಬಂಡವಾಳ ಎಲ್ಲವೂ ನಮಗೆ ಗೊತ್ತು ಎಂದು ವಾಗ್ದಾಳಿ ನಡೆಸಿದರು.
ಟಿವಿ ಮುಂದೆ, ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದಾಕ್ಷಣ ದೊಡ್ಡ ಲೀಡರ್ ಆಗುತ್ತೇನೆ ಎಂಬ ಭ್ರಮೆಯಿಂದ ಮೊದಲು ರೇಣುಕಾಚಾರ್ಯ ಹೊರಗಡೆ ಬರಬೇಕು. ಲೋಕಸಭೆ ಚುನಾವಣೆಯಲ್ಲಿ ಹೊನ್ನಾಳಿ ಕ್ಷೇತ್ರದಲ್ಲಿ ಬಿಜೆಪಿ ಯಾಕೆ ಮುನ್ನಡೆ ಬರಲಿಲ್ಲ ಎಂದು ಪ್ರಶ್ನೆ ಮಾಡಿದರು.
ನಾವು ಬಿ.ಎಲ್.ಸಂತೋಷ್, ಬಿ.ವೈ.ವಿಜಯೇಂದ್ರ ಅವರನ್ನು ಭೇಟಿ ಮಾಡಿದ್ದೇವೆ. ಕಾಂಗ್ರೆಸ್ ಅಭ್ಯರ್ಥಿಯವರೇ ಬಿಜೆಪಿಯವರು ಸಹಾಯ ಮಾಡಿದ್ದರಿಂದ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದೇನೆ ಎಂಬುದಾಗಿ ಒಪ್ಪಿಕೊಂಡಿದ್ದಾರೆ. ಇನ್ನು ರೇಣುಕಾಚಾರ್ಯ ಅಂಡ್ ಟೀಂ ಯಾವ ರೀತಿ ಕೆಲಸ ಮಾಡಿರಬಹುದು ಎಂಬುದು ಎಲ್ಲರಿಗೂ ಗೊತ್ತಿದೆ ಎಂದರು.
ಚುನಾವಣೆ ಅಂದ ಮೇಲೆ ಸೋಲು-ಗೆಲುವು ಸಹಜ. ಈ ವಿಚಾರದ ಬಗ್ಗೆ ಹೆಚ್ಚು ಮಾತನಾಡುವುದಿಲ್ಲ. ಬಿಜೆಪಿ ಭದ್ರಕೋಟೆಯಾಗಿದ್ದ ದಾವಣಗೆರೆಯಲ್ಲಿ ಬಿಜೆಪಿ ಸೋತಿರುವುದು ರಾಜ್ಯ ಮಾತ್ರವಲ್ಲ, ಕೇಂದ್ರದ ವರಿಷ್ಠರಿಗೂ ಆಶ್ಚರ್ಯ ತಂದಿದೆ. 2 ಲಕ್ಷ ಮತಗಳ ಅಂತರದಲ್ಲಿ ಗೆಲ್ಲುವ ಕ್ಷೇತ್ರದಲ್ಲಿ ಯಾಕೆ ಹೀಗೆ ಆಯಿತು ಎಂಬ ಪ್ರಶ್ನೆ ಅವರನ್ನೂ ಕಾಡುತ್ತಿದೆ. ಈ ಬಗ್ಗೆ ವರದಿ ತರಿಸಿಕೊಂಡಿದ್ದಾರೆ ಎಂದು ಮಾಹಿತಿ ನೀಡಿದರು.
ನಮ್ಮ ತಕಾರಾರು ಇರುವುದು ಸೋತಿರುವುದಕ್ಕೆ ಅಲ್ಲ. ಚುನಾವಣೆ ವೇಳೆಯಲ್ಲಿ ರೇಣುಕಾಚಾರ್ಯ ಅಂಡ್ ಟೀಂ ನಡೆದುಕೊಂಡ ರೀತಿ. ಕೆಲವು ಬಿಜೆಪಿಯವರು ಬೆಂಬಲ ನೀಡಿದ್ದಾರೆ ಎಂದು ಕಾಂಗ್ರೆಸ್‌ನಿಂದ ಗೆದ್ದ ಸಂಸದರು ಹೇಳಿರುವುದಕ್ಕಿಂತ ಸಾಕ್ಷಿ ಬೇಕಾ? ನಾವು ನರೇಂದ್ರ ಮೋದಿ ಅವರಿಗೆ ಈ ಬಾರಿ ಗಾಯಿತ್ರಿ ಸಿದ್ದೇಶ್ವರ ಅವರನ್ನು ಗೆಲ್ಲಿಸಿಕೊಂಡು ಬರುತ್ತೇವೆ ಎಂಬ ವಚನ ನೀಡಿದ್ದೇವೆ. ಇಲ್ಲಿ ಸೋತಿರುವುದು ಬಿಜೆಪಿ ಅಲ್ಲ, ನರೇಂದ್ರ ಮೋದಿ ಅವರು. ವಿಶ್ವ ಕಂಡಂತಹ, ದೈವತ್ವ ಹೊಂದಿರುವ ನರೇಂದ್ರ ಮೋದಿ ಅವರಿಗೆ ಅನ್ಯಾಯ, ಮೋಸ ಮಾಡಿದವರು ಉದ್ಧಾರ ಆಗುವುದಿಲ್ಲ ಎಂದು ಸಿಟ್ಟು ಹೊರಹಾಕಿದರು.
ಲಗಾನ್ ಟೀಂ, ನವದೆಹಲಿ ಬಾಯ್ಸ್ ಅಂತಾ ಕರೆಯಿಸಿಕೊಂಡವರೇ ಅಭ್ಯರ್ಥಿ ಬದಲಾವಣೆ ಮಾಡಬೇಕೆಂದು ಪಟ್ಟು ಹಿಡಿದರು. ದಾವಣಗೆರೆ, ಬೆಂಗಳೂರು, ನವದೆಹಲಿಗೆ ಎಡತಾಕಿದ್ದು ಎಲ್ಲರಿಗೂ ಗೊತ್ತು. ಯಾರನ್ನೋ ಅಭ್ಯರ್ಥಿ ಮಾಡುತ್ತೇವೆ ಎಂದು ಒಳಗೊಳಗೆ ಅಂದುಕೊಂಡರೂ, ಅಂತಿಮವಾಗಿ ಆತ ಕಾಂಗ್ರೆಸ್‌ಗೆ ಹೋದ ಎಂದು ಆರೈಕೆ ಆಸ್ಪತ್ರೆ ರವಿಕುಮಾರ್ ಹೆಸರು ಪ್ಪಸ್ಪಾಪಿಸದೇ ಚುಚ್ಚಿದರು.












Click it and Unblock the Notifications