ನಮ್ಮ ತಟ್ಟೆಗೆ ಕೈ ಹಾಕಿದ್ರೆ ಕತ್ತರಿಸುತ್ತೇವೆ: ಪಂಚಮಸಾಲಿ ಸ್ವಾಮೀಜಿಗೆ ವಾರ್ನಿಂಗ್ ಕೊಟ್ಟಿದ್ಯಾರು?
2ಎ ಮೀಸಲಾತಿಗಾಗಿ ಪಂಚಮಸಾಲಿ ಸಮುದಾಯ ನಡೆಸುತ್ತಿರುವ ಹೋರಾಟವು ಉದ್ವಿಗ್ನಗೊಂಡಿದೆ. ಬೆಳಗಾವಿಯಲ್ಲಿ ಲಾಠಿಚಾರ್ಜ್ ಮಾಡಿದ ನಂತರ ಕಾಂಗ್ರೆಸ್ ಸರ್ಕಾರದ ಮೇಲೆ ಪಂಚಮಸಾಲಿ ಸಮುದಾಯವು ಹಗೆ ಸಾಧಿಸುತ್ತಿದೆ. ಆದರೆ, ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ಅಧ್ಯಕ್ಷ ಕೆ.ಎಸ್.ಶಿವರಾಮು ಅವರು ಕೂಡಲಸಂಗಮದ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಅವರ ಹೋರಾಟದ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ ಎನ್ನಲಾಗಿದೆ.
ಪಂಚಮಸಾಲಿ ಹೋರಾಟದ ಬಗ್ಗೆ ಮಾತನಾಡಿರುವ ಅವರು ನಮ್ಮ ತಟ್ಟೆಯಲ್ಲಿರುವ ಅನ್ನಕ್ಕೆ ಕೈ ಹಾಕಿದರೆ, ಅವರ ಕೈ ಕತ್ತರಿಸುತ್ತೇವೆ ಎಂದು ಬಹಿರಂಗವಾಗಿ ಎಚ್ಚರಿಕೆ ನೀಡಿದ್ದಾರೆ. ನಾವು ಬಸವಜಯ ಮೃತ್ಯುಂಜಯ ಸ್ವಾಮೀಜಿ ಅವರ ಹೋರಾಟವನ್ನು ಖಂಡಿಸುತ್ತಿದ್ದು, ಅವರು ರಾಜಕೀಯ ಪುಡಾರಿಯಂತೆ ವರ್ತಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಬಸವಜಯ ಮೃತ್ಯುಂಜಯ ಸ್ವಾಮೀಜಿ ಅವರು ಒಬ್ಬರು ಸನ್ಯಾಸಿಯಾಗಿ, ಒಂದು ಜಾತಿ ಪರವಾಗಿ ಕೆಲಸ ಮಾಡುತ್ತಿದ್ದಾರೆ. ಇದು ಸರಿಯಲ್ಲ, ಅವರು ಸ್ವಾಮೀಜಿಯಾಗೋಕೆ ಸೂಕ್ತರಲ್ಲ. ಅವರು ಕಾವಿ ಬಟ್ಟೆ ಬಿಚ್ವಿಟ್ಟು, ಬರೋದು ಸೂಕ್ತ ಎಂದು ವಾಗ್ದಾಳಿ ನಡೆಸಿದ್ದಾರೆ. ನಾವು ಕಾವಿ ಬಟ್ಟೆಗೆ ಗೌರವ ಕೊಡುತ್ತಿದ್ದೇವೆ. ಅದನ್ನ ಉಳಿಸಿಕೊಂಡರೆ ಅವರಿಗೇ ಒಳ್ಳೆಯದು ಎಂದಿದ್ದಾರೆ.
ಅವರು ಒಬ್ಬರು ಸ್ವಾಮೀಜಿಯಾಗಿ ಹಿಂಸಾಚಾರಕ್ಕೆ ಸಾಥ್ ಕೊಡುತ್ತಿದ್ದಾರೆ. ಇದೇನಾ ಅವರ ನೀತಿ? ಹಿಂದುಳಿದ ವರ್ಗಗಳು ವೀರಶೈವರು, ಲಿಂಗಾಯತರೆಲ್ಲ ಒಟ್ಟಾಗಿದ್ದೇವೆ. ಸ್ವಾಮೀಜಿ ನಮ್ಮ ನಡುವೆ ಜಗಳ ಸೃಷ್ಟಿಸುತ್ತಿದ್ದಾರೆ. ಸ್ವಾಮೀಜಿ ಬಿಜೆಪಿ ಏಜೆಂಟ್ ರೀತಿ ಕೆಲಸ ಮಾಡ್ತಿದ್ದಾರೆ. ಸಿದ್ದರಾಮಯ್ಯ ಅವರನ್ನು ಸಿಎಂ ಹುದ್ದೆಯಿಂದ ಕೆಳಗಿಳಿಸಲು ಸುಪಾರಿ ತೆಗೆದುಕೊಂಡಿದ್ದಾರೆ ಎಂದು ಆರೋಪಿಸಿದ್ದಾರೆ.

ಬೆಳಗಾವಿ ಅಧಿವೇಶನ ನಡೆಯುತ್ತಿರುವ ಹಿನ್ನೆಲೆ ಪಂಚಮಸಾಲಿ ಸಮುದಾಯದವರು ಮೀಸಾಲಾತಿಗಾಗಿ ಆಗ್ರಹಿಸಿ ಹೋರಾಟ ನಡೆಸುತ್ತಿದ್ದರು. ಈ ವೇಳೆ ಪೊಲೀಸರು ಲಾಠಿಚಾರ್ಜ್ ನಡೆಸಿದ ಪರಿಣಾಮ ಹೋರಾಟ ಹಿಂಸಾಚಾರಕ್ಕೆ ತಿರುಗಿತ್ತು. ಮತ್ತೊಂದೆಡೆ ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟದ ಮುಖಂಡರು ಹಾಗೂ ಕಾರ್ಯಕರ್ತರು ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಪಂಚಮಸಾಲಿ ಲಿಂಗಾಯತ ಸಮುದಾಯವನ್ನು ಹಿಂದುಳಿದ ಪ್ರವರ್ಗ-2ಎಗೆ ಸೇರಿಸಬಾರದು ಎಂದು ಒತ್ತಾಯಿಸಿ, ಮನವಿ ಕೂಡ ಸಲ್ಲಿಸಿದ್ದರು.
ಇನ್ನು ಸರ್ಕಾರ ಉದ್ದೇಶಪೂರ್ವಕವಾಗಿ ಹೋರಾಟಗಾರರ ಮೇಲೆ ಲಾಠಿಚಾರ್ಜ್ ನಡೆಸಿದೆ ಎಂದು ಬಿಜೆಪಿ ನಾಯಕರು ಹಾಗೂ ಪಂಚಮಸಾಲಿ ಸಮುದಾಯದವರು ಆರೋಪಿಸಿದ್ದರು. ಇದಕ್ಕೆ ನೀಡಿರುವ ಸಿಎಂ ಸಿದ್ದರಾಮಯ್ಯ ಅವರು ಕಾನೂನು ಕೈಗೆ ತೆಗೆದುಕೊಂಡು ಸಾರ್ವಜನಿಕರಿಗೆ ತೊಂದರೆಯಾದರೆ ಸರ್ಕಾರ ಕಣ್ಣುಮುಚ್ಚಿಕೊಂಡು ಕೂರಲು ಸಾಧ್ಯವಿಲ್ಲ ಎಂದು ಖಡಕ್ ಆಗಿ ಹೇಳಿದ್ದಾರೆ.
ಪಂಚಮಸಾಲಿ ಸಮುದಾಯದವರು ಪ್ರವರ್ಗ 2ಎ ಅಡಿಯಲ್ಲಿ ಮೀಸಲಾತಿ ಕಲ್ಪಿಸುವಂತೆ ಕೇಳುವುದಕ್ಕೆ, ಚಳುವಳಿ ಮಾಡುವುದಕ್ಕೆ ನಮ್ಮ ಯಾವುದೇ ತಕರಾರಿಲ್ಲ. ಆದರೆ ಶಾಂತಿಯುತವಾಗಿ ಪ್ರತಿಭಟನೆಯಾಗಬೇಕು. ಕಾನೂನನ್ನ ಯಾರೂ ಕೈಗೆ ತೆಗೆದುಕೊಳ್ಳಬಾರದು. ಸ್ವಾಮೀಜಿಯಾಗಲಿ, ಯಾರಾದರೂ ಆಗಿರಲಿ ಎಲ್ಲರಿಗೂ ಕಾನೂನು ಒಂದೇ. ನನಗೂ, ಸ್ವಾಮೀಜಿಗೂ ಎಲ್ಲರಿಗೂ ಒಂದೇ. ಸಂವಿಧಾನದ 14ನೇ ವಿಧಿಯ ಪ್ರಕಾರ ಕಾನೂನಿನ ಮುಂದೆ ಎಲ್ಲರೂ ಸಮಾನರು ಹಾಗೂ ಕಾನೂನು ಸಮಾನ ರಕ್ಷಣೆಯನ್ನು ಖಾತ್ರಿಪಡಿಸುತ್ತದೆ ಎಂದು ಸಮರ್ಥಿಸಿಕೊಂಡಿದ್ದರು.
-
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger












Click it and Unblock the Notifications