K Shivaram: ಕೆ.ಶಿವರಾಮ್ ಅವರ ನಿಧನ: ರಾಜಕೀಯ ಗಣ್ಯರಿಂದ ಸಂತಾಪ

ಬೆಂಗಳೂರು, ಫೆಬ್ರವರಿ 29: ನಟ, ಬಿಜೆಪಿ ಮುಖಂಡ, ನಿವೃತ್ತ ಐಎಎಸ್ ಅಧಿಕಾರಿ ಕೆ. ಶಿವರಾಮ್ ಆರೋಗ್ಯ ಸಮಸ್ಯೆಯಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಅವರು, ಇಂದು ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾರೆ.

ಬಿಜೆಪಿ ಮುಖಂಡ, ನಟ ಕೆ.ಶಿವರಾಮ್ ಅವರ ನಿಧನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ. ಕೆಎಎಸ್ ಅಧಿಕಾರಿಯಾಗಿ ಆಯ್ಕೆಯಾಗಿದ್ದ ಅವರು ಬಳಿಕ, ಕನ್ನಡದಲ್ಲಿಯೇ ಐಎಎಸ್ ಪರೀಕ್ಷೆ ಬರೆದು, ಐಎಎಸ್ ಅಧಿಕಾರಿಯೂ ಆಗಿದ್ದರು. ಕೆ.ಶಿವರಾಮ್ ಅವರು ರಾಜ್ಯದ ಹಲವು ಜಿಲ್ಲೆಗಳಲ್ಲಿ ಜಿಲ್ಲಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದರು ಎಂದು ತಿಳಿಸಿದ್ದಾರೆ.

K.Shivaram passed away condolences from dignitaries

ಹಲವು ಸಿನಿಮಾಗಳಲ್ಲಿ ನಟಿಸಿದ್ದರು. ಬಿಜೆಪಿ ಮುಖಂಡರಾಗಿದ್ದ ಅವರು, ಛಲವಾದಿ ಮಹಾಸಭಾದ ಅಧ್ಯಕ್ಷರೂ ಆಗಿದ್ದರು. ಮೃತರ ಕುಟುಂಬ, ಬಂಧು ಮಿತ್ರರಿಗೆ ದೇವರು ಅವರ ಅಗಲುವಿಕೆಯ ದುಃಖವನ್ನು ಸಹಿಸುವ ಶಕ್ತಿಯನ್ನು ನೀಡಲಿ. ಅಲ್ಲದೆ ಅವರಿಗೆ ಚಿರಶಾಂತಿಯನ್ನು ಕರುಣಿಸಲಿ ಎಂದು ಪ್ರಾರ್ಥಿಸಿದ್ದಾರೆ ಎಂದು ವಿಜಯೇಂದ್ರ ಸಂತಾಪ ಸೂಚಿಸಿದ್ದಾರೆ.

ಇನ್ನೂ ನಿವೃತ್ತ ಐಎಎಸ್ ಅಧಿಕಾರಿಗಳು, ಚಲನಚಿತ್ರ ನಟರು ಹಾಗೂ ಬಿಜೆಪಿ ನಾಯಕರು ಆದಂತಹ ಕೆ.ಶಿವರಾಂ ಅವರ ನಿಧನದ ಸುದ್ದಿಯಿಂದ ತೀವ್ರ ದುಃಖವಾಗಿದೆ. ಭಗವಂತ ಅವರ ಕುಟುಂಬದ ಸದಸ್ಯರಿಗೆ, ಅಭಿಮಾನಿಗಳಿಗೆ ದುಃಖ ಭರಿಸುವಂತಹ ಶಕ್ತಿಯನ್ನು ಕೊಡಲಿ ಎಂದು ಮಾಜಿ ಸಚಿವ ಹಾಗೂ ಶಾಸಕ ಕೆ. ಗೋಪಾಲಯ್ಯ ಅವರು ಸಂತಾಪ ವ್ಯಕ್ತಪಡಿಸಿದರು.

ಮಾಜಿ ಮುಖ್ಯಮಂತ್ರಿ ಬಿ ಎಸ್‌ ಯಡಿಯೂರಪ್ಪ ಅವರು ಸಹ ಕೆ ಶಿವರಾಂ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. ಹೆಸರಾಂತ ಕಲಾವಿದ, ಪಕ್ಷದ ಮುಖಂಡ, ಕನ್ನಡದಲ್ಲಿ ಐಎಎಸ್‌ ಪರೀಕ್ಷೆ ಬರೆದು ಯಶಸ್ವಿಯಾಗಿದ್ದ ನಿವೃತ್ತ ಐಎಎಸ್ ಅಧಿಕಾರಿ ಕೆ.ಶಿವರಾಮ್ ಹೃದಯಾಘಾತದಿಂದ ನಿಧನರಾದ ಸುದ್ದಿ ಅತೀವ ಆಘಾತ ತಂದಿದೆ. ಅವರು ಅಸ್ವಸ್ಥರಾದ ವಿಷಯ ತಿಳಿದು ಇಂದು ಬೆಳಗ್ಗೆ ಆಸ್ಪತ್ರೆಗೆ ತೆರಳಿ ಅವರನ್ನು ನೋಡಿ, ಶೀಘ್ರದಲ್ಲಿ ಗುಣಮುಖರಾಗಲಿ ಎಂದು ಪ್ರಾರ್ಥಿಸಿದ್ದೆ. ಆದರೆ ವಿಧಿ ಅವರನ್ನು ಬೇಗ ಕರೆದುಕೊಂಡಿದೆ. ಅವರ ಆತ್ಮಕ್ಕೆ ಚಿರಶಾಂತಿ ಕೋರುತ್ತಾ, ಅವರ ಕುಟುಂಬದವರಲ್ಲಿ ಹಾಗು ಅಭಿಮಾನಿಗಳಲ್ಲಿ ನನ್ನ ಸಂತಾಪಗಳನ್ನು ಸಲ್ಲಿಸುತ್ತೇನೆ ಎಂದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+