ಏಪ್ರಿಲ್ 11 ರಿಂದ ಕೆಲಸದ ಸ್ಥಳದಲ್ಲೇ ಕೊರೊನಾ ಲಸಿಕೆ ವಿತರಣೆ: ಸುಧಾಕರ್
ಬೆಂಗಳೂರು, ಏಪ್ರಿಲ್ 8: ಎಲ್ಲಾ ಉದ್ಯೋಗಿಗಳಿಗೆ ಕೆಲಸದ ಸ್ಥಳದಲ್ಲೇ ಕೊರೊನಾ ಲಸಿಕೆ ನೀಡಲು ಸರ್ಕಾರ ಅನುಮತಿ ನೀಡಿದೆ ಹಾಗೆಯೇ ಏ.11 ರಿಂದ ಸೌಲಭ್ಯ ಒದಗಿಸಲಾಗುವುದು ಎಂದು ಸಚಿವ ಕೆ. ಸುಧಾಕರ್ ಹೇಳಿದ್ದಾರೆ.
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ಗಣನೀಯ ಹೆಚ್ಚಳ ಕಂಡುಬಂದಿದೆ. ನಿತ್ಯದ ಪ್ರಕರಣಗಳ ಸಂಖ್ಯೆ ಐಸು ಸಾವಿರ ಸಮೀಪಿಸಿದೆ.
ಶಾಕಿಂಗ್: ಕರ್ನಾಟಕದಲ್ಲಿ ಒಂದೇ ದಿನ 6976 ಮಂದಿಗೆ ಕೊರೊನಾವೈರಸ್!
ಪಾಸಿಟಿವಿಟಿ ದರ ಶೇ.5.56ಕ್ಕೆ ತಲುಪಿದೆ. ಬುಧವಾರ ರಾಜ್ಯದಲ್ಲಿ 35 ಮಂದಿ ಕೊರೊನಾದಿಂದ ಮೃತಪಟ್ಟಿದ್ದರೆ 25 ಪ್ರಕರಣಗಳು ಬೆಂಗಳೂರಿನಲ್ಲೇ ಇವೆ.

12 ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜತೆ ಸಭೆ
ಕೊರೊನಾ ನಿಯಂತ್ರಣಕ್ಕೆ ಸಂಬಂಧಿಸಿದಂತೆ 12 ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜತೆ ಬುಧವಾರ ವಿಡಿಯೋ ಸಂವಾದ ನಡೆಸಲಾಗಿದೆ. ಬಳಿಕ ಮಾತನಾಡಿದ ಸಚಿವ ಸುಧಾಕರ್ ಬೃಹತ್ ಉದ್ದಿಮೆಗಳು ಮತ್ತು ಮಾಹಿತಿ ತಂತ್ರಜ್ಞಾನ ಕ್ಷೇತ್ರದ ಸಂಸ್ಥೆಗಳ ಮನವಿಯನ್ನು ಪುರಸ್ಕರಿಸಿರುವ ಕೇಂದ್ರ ಸರ್ಕಾರ, ಕೆಲಸದ ಸ್ಥಳದಲ್ಲಿ ಲಸಿಕೆ ನೀಡಲು ಅನುಮತಿ ನೀಡಿದೆ.

ರಾಜ್ಯಕ್ಕೆ 50 ಲಕ್ಷ ಡೋಸ್ ಪೂರೈಕೆ
ರಾಜ್ಯಕ್ಕೆ ಇದುವರೆಗೆ 50 ಲಕ್ಷ ಡೋಸ್ ಕೋವಿಡ್ 19 ಲಸಿಕೆ ಪೂರೈಕೆಯಾಗಿದೆ. ಕೆಲವೇ ದಿನಗಳಲ್ಲಿ 50 ಲಕ್ಷ ಡೋಸ್ ಪೂರೈಕೆಯಾಗಲಿದೆ. ಕೋವಿಡ್ ನಿಯಂತ್ರಣಕ್ಕೆ ರಾಜ್ಯಾದ್ಯಂತ ಲಸಿಕೆ ವಿತರಣೆಯನ್ನು ಹೆಚ್ಚಿಸಲು ಸಲಹೆ ನೀಡಲಾಗಿದೆ ಎಂದು ಹೇಳಿದರು.

ಕರ್ನಾಟಕದಲ್ಲಿ ಕೊರೊನಾ ಸೋಂಕು ಹೆಚ್ಚಳ
ಕರ್ನಾಟಕದಲ್ಲಿ ಎರಡು ವಾರಗಳಿಂದ ಕೊರೊನಾ ಸೋಂಕು ಹೆಚ್ಚಳವಾಗುತ್ತಿದೆ, ಉಸಿರಾಟದ ತೀವ್ರ ತೊಂದರೆ ಮತ್ತು ವಿಷಮ ಶೀತ ಜ್ವರದ ಪ್ರಕರಣಗಳ ಪತ್ತೆ ಮಾಡುವುದು ಕಡಿಮೆಯಾಗಿದ್ದು, ಈ ಬಗ್ಗೆ ಗಮನಹರಿಸುವಂತೆ ಸೂಚಿಸಲಾಗಿದೆ.

ಒಟ್ಟು 12 ಜಿಲ್ಲಾಧಿಕಾರಿಗಳ ಜತೆ ಸಂವಾದ
ಬೀದರ್, ಬೆಳಗಾವಿ, ವಿಜಯಪುರ, ಕಲಬುರಗಿ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉಡುಪಿ, ಹಾಸನ, ಮಂಡ್ಯ, ಮೈಸೂರು ಮತ್ತು ಚಿತ್ರದುರ್ಗ ಜಿಲ್ಲೆಗಳ ಹಿರಿಯ ಅಧಿಕಾರಿಗಳ ಜತೆ ಸಂವಾದ ನಡೆಸಿದರು.