K. Venkatesh profile: ಸಿದ್ದರಾಮಯ್ಯ ಸಂಪುಟ ಸೇರಲಿರುವ ಮುತ್ಸದ್ದಿ ರಾಜಕಾರಣಿ ಕೆ.ವೆಂಕಟೇಶ್
ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ಆರನೇ ಬಾರಿ ಗೆಲುವು ಸಾಧಿಸಿರುವ ಕಾಂಗ್ರೆಸ್ ಹಿರಿಯ ನಾಯಕ ಕೆ.ವೆಂಕಟೇಶ್ ಈ ಬಾರಿ ಮತ್ತೆ ಸಿಎಂ ಸಿದ್ದರಾಮಯ್ಯ ಅವರ ಸಂಪುಟ ಸೇರಲಿದ್ದಾರೆ. ಕಾಂಗ್ರೆಸ್ ನಾಯಕರಾಗಿ ಸತತ ಐದು ಬಾರಿ ಗೆಲುವು ದಾಖಲಿಸಿ ಪಿರಿಯಾಪಟ್ಟಣವನ್ನು ಕಾಂಗ್ರೆಸ್ ಭದ್ರಕೋಟೆ ಮಾಡಿದ್ದ ಇವರು 2018ರ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ಕೆ.ಮಹದೇವ್ ಅವರಮ ಎದುರು ಸೋಲು ಕಂಡಿದ್ದರು. ಈಗ ಮತ್ತೆ ಆರನೇ ಬಾರಿ ಗೆದ್ದು ಕಾಂಗ್ರೆಸ್‌ಗೆ ಭದ್ರಕೋಟೆಯನ್ನಾಗಿಸಿದ್ದಾರೆ.
ಪಿರಿಯಾಪಟ್ಟಣದ ಶಾಸಕ ಕೆ. ವೆಂಕಟೇಶ್ ಒಬ್ಬ ಸೌಮ್ಯ ಸ್ವಭಾವದ ಹಿರಿಯ ಮುತ್ಸದ್ದಿ ರಾಜಕಾರಣಿ, ಯಾವಾಗಲೂ ಯಾರನ್ನು ನಿಂದಿಸದ, ಗದರಿಸುವ ಸ್ವಭಾವದ ಮನುಷ್ಯರಲ್ಲ, ಯಾವಾಗಲು ತಾಳ್ಮೆ ಹಾಗೂ ಸಂಯಮದಿಂದ ಮಾತನಾಡುತ್ತಾರೆ ಎಂದು ಕ್ಷೇತ್ರದ ಜನರು ಹೇಳುತ್ತಾರೆ. ತಾಲೂಕು ಬೋರ್ಡ್ ಅಧ್ಯಕ್ಷರಾಗುವ ಮೂಲಕ ರಾಜಕೀಯಕಕ್ಕೆ ಕಾಲಿರಿಸಿದ ಇವರು, ತಮ್ಮ 42 ವರ್ಷಗಳ ಕಾಲದ ಸುದೀರ್ಘ ರಾಜಕಾರಣದಲ್ಲಿ 9 ಚುನಾವಣೆಗಳನ್ನು ಎದುರಿಸಿದ್ದಾರೆ. ಒಟ್ಟು 6 ಬಾರಿ ಶಾಸಕರಾಗಿ, ಒಮ್ಮೆ ಸಚಿವರಾಗಿ, ಒಮ್ಮೆ ಬಿಡಿಎ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ.

ಪಿರಿಯಾಪಟ್ಟಣದ ಕ್ಷೇತ್ರದ ಅಧಿಕಾರಿಗಳು ಮತ್ತು ಜನರೊಡನೆ ಸಂಯಮದಿಂದ ಮಾತನಾಡುವುದು ಕೆ.ವೆಂಕಟೇಶ್ ಅವರ ಹೆಗ್ಗಳಿಕೆ. ಇವರು ಪ್ರಥಮ ಬಾರಿಗೆ ಶಾಸಕರಾದ ಸಂದರ್ಭದಲ್ಲಿ ತಾಲ್ಲೂಕಿನಲ್ಲಿ ಅನೇಕ ಸಮಸ್ಯೆಗಳಿದ್ದು, ರಾಮಕೃಷ್ಣ ಹೆಗಡೆ ಸರ್ಕಾರದಲ್ಲಿ ರಾಜ್ಯದಲ್ಲಿಯೇ ಹೆಚ್ಚು ಜನತಾ ಮನೆಗಳನ್ನು ತಂದ ಕೀರ್ತಿ ವೆಂಕಟೇಶ್‌ರವರಿಗೆ ಸಲ್ಲುತ್ತದೆ.
ನೀರಾವರಿ ಕ್ಷೇತ್ರಕ್ಕೆ ನೀಡಿರುವ ಕೊಡುಗೆ ಅನನ್ಯವಾದುದು, ಕಾವೇರಿ ನದಿ ನೀರಿಗಾಗಿ ರಾಜ್ಯ-ಅಂತರ್ ರಾಜ್ಯ ಮಟ್ಟದಲ್ಲಿ ಹೋರಾಟ ನಡೆಯುತ್ತಿದ್ದ ಸಂದರ್ಭದಲ್ಲಿ ಸ್ಥಳೀಯ ಮಟ್ಟದಲ್ಲಿ ಈ ನೀರಿನ ಸದ್ಬಳಕೆ ಆಗಬೇಕು ಎಂದು ಮುತ್ತಿನ ಮುಳುಸೋಗೆ ಗ್ರಾಮದ ಬಳಿ ಕಾವೇರಿ ನದಿಯಿಂದ 150 ಕೆರೆಗಳಿಗೆ ನೀರು ತುಂಬಿಸುವ ಯೋಜನೆ ಜಾರಿಗೊಳಿಸಿದ್ದರು. ಜೊತೆಗೆ ಹಾರಂಗಿ ನೀರಾವರಿ ನಿಗಮದ ಮೂಲಕ ಕರಡಿಲಕ್ಕನ ಕೆರೆ ಏತ ನೀರಾವರಿ ಜಾರಿಗೊಳಿಸಿ ರೈತರ ವಿಶ್ವಾಸಕ್ಕೆ ಪಾತ್ರರಾಗಿದ್ದರು.

ಶಿಕ್ಷಣ ಕ್ಷೇತ್ರದಲ್ಲಿಯೂ ಅನೇಕ ಕೆಲಸ ಮಾಡಿರುವ ಇವರು ಪದವಿ ಕಾಲೇಜುಗಳು, ಗ್ರಾಮಾಂತರ ಪ್ರದೇಶದ ಪ್ರಮುಖ ಸ್ಥಳಗಳಿಗೆ ಪದವಿ ಪೂರ್ವ ಕಾಲೇಜು, ಐಟಿಐ, ಡಿಪ್ಲೊಮಾ ಕಾಲೇಜುಗಳನ್ನು ಪ್ರಾರಂಭಿಸುವ ಮೂಲಕ ಶಿಕ್ಷಣ ಕ್ಷೇತ್ರದಲ್ಲಿ ಕ್ರಾಂತಿ ಮಾಡಿದ್ದಾರೆ. ಆರೋಗ್ಯ ಕ್ಷೇತ್ರದಲ್ಲಿ ಪಟ್ಟಣದ ಪ್ರಮುಖ ಭಾಗದಲ್ಲಿ 100 ಹಾಸಿಗೆಯುಳ್ಳ ಹೈಟೆಕ್ ಆಸ್ಪತ್ರೆ, ಗ್ರಾಮಾಂತರ ಪ್ರದೇಶಗಳಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರಗಳು, ಉಪ ಆರೋಗ್ಯ ಕೇಂದ್ರಗಳ ಸ್ಥಾಪನೆಗೆ ಕಾರಣರಾಗಿದ್ದಾರೆ.
ಶಾಸಕ ಕೆ.ವೆಂಕಟೇಶ್ ಅಧಿಕಾರದ ಅವಧಿಯಲ್ಲಿ ಪಟ್ಟಣದ ಹೃದಯ ಭಾಗದಲ್ಲಿ ತಾಲ್ಲೂಕು ಆಡಳಿತ ಭವನ, ಹೈಟೆಕ್ ಪುರಸಭಾ ಕಟ್ಟಡ, ನೂತನ ಅಗ್ನಿ ಶಾಮಕ ಠಾಣೆ, ಡಿ.ದೇವರಾಜು ಅರಸು ಕಲಾ ಭವನ, ಅಂಬೇಡ್ಕರ್ ಭವನ, ವಾಲ್ಮೀಕಿ ಭವನ, ಬಾಬು ಜಗಜೀವನ್ ರಾಮ್, ನೂತನ ಬಸ್ ಡಿಪೋ, ನೂತನ ಉಗ್ರಾಣ, ವಸತಿ ಕ್ಷೇತ್ರದಲ್ಲಿ ಸಾವಿರಾರು ಮನೆಗಳನ್ನು ನಿರ್ಮಾಣ ಮಾಡಲಾಗಿದೆ.
ಕಳೆದ 2018 ರ ಚುನಾವಣೆಯಲ್ಲಿ ಸೋಲು ಕಂಡ ಅವರು ಎದೆಗುಂದದ ವೆಂಕಟೇಶ್ ತಮ್ಮ ಅವಧಿಯಲ್ಲಿ ಮಾಡಿದ ಅಭಿವೃದ್ಧಿ ಕಾರ್ಯಗಳನ್ನು ಈ ಬಾರಿಯ ಚುನಾವಣೆಯಲ್ಲಿ ಜನರಿಗೆ ತಿಳಿಸುವಲ್ಲಿ ಯಶಸ್ವಿಯಾದರು. ಇದೇ ಅವರ ಗೆಲುವಿಗೆ ಕಾರಣ ಎನ್ನಲಾಗಿದೆ. ಈ ಚುನಾವಣೆಯಲ್ಲಿ ಕೆ.ವೆಂಕಟೇಶ್ 85,289 ಮತಗಳನ್ನು ಪಡೆದು ಭರ್ಜರಿ ಜಯ ಗಳಿಸಿದ್ದಾರೆ. ಈಗ ಸಿದ್ದರಾಮಯ್ಯ ಸಂಪುಟ ಸೇರಲಿದ್ದಾರೆ.
-
ಬೆಂಗಳೂರಿನಲ್ಲಿ ದೇಶದ ಮೊದಲ ಮನೋರೋಗ ಅಧ್ಯಯನದ ಡಿಜಿಟಲ್ 'ಕಾಮ್-ಬ್ರೈನ್' ಲೋಕಾರ್ಪಣೆ -
Jobs: ರಾಜ್ಯದ ಕಾರಾಗೃಹ ಆಸ್ಪತ್ರೆಗಳಲ್ಲಿ ಖಾಲಿ ಇರುವ ವೈದ್ಯಕೀಯ ಸಿಬ್ಬಂದಿ ಹುದ್ದೆಗಳ ಭರ್ತಿಗೆ ಸರ್ಕಾರದ ಮಹತ್ವದ ಆದೇಶ -
ಬೆಂಗಳೂರಿನ ಪಾನಿಪುರಿ ವ್ಯಾಪಾರಿಯ ತಿಂಗಳ ಸಂಪಾದನೆ ಫುಲ್ Viral: ದಿನಕ್ಕೆ 3 ಸಾವಿರ ರೂ. ಗಳಿಕೆ -
Viral Video: 11 ವರ್ಷದ ಬಾಲಕನಿಂದ ಯಶಸ್ವಿ ವಿಮಾನ ಲ್ಯಾಂಡಿಂಗ್; ನೆಟ್ಟಿಗರ ಮನಗೆದ್ದ ಈ ಪುಟ್ಟ ಪೋರ -
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ












Click it and Unblock the Notifications