"ಕಗ್ಗಲೀಪುರ ಬೈಪಾಸ್' ನಿರ್ಮಾಣ: ಕೇಂದ್ರ ಸರ್ಕಾರಕ್ಕೆ ಪತ್ರ ಬರೆದ ಸಚಿವ ಎಚ್‌.ಡಿ ಕುಮಾರಸ್ವಾಮಿ

ಕಗ್ಗಲೀಪುರ ಬೈಪಾಸ್‌ ನಿರ್ಮಾಣ ಮಾಡುವುದಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರಕ್ಕೆ ಪತ್ರ ಕೇಂದ್ರ ಸಚಿವ ಎಚ್‌.ಡಿ ಕುಮಾರಸ್ವಾಮಿ ಅವರು ಪತ್ರ ಬರೆದಿದ್ದಾರೆ.

ದಕ್ಷಿಣ ಬೆಂಗಳೂರಿನ, ಬೆಂಗಳೂರು-ಕನಕಪುರ ಹೆದ್ದಾರಿಯ (NH-948) ಕಗ್ಗಲೀಪುರ ವ್ಯಾಪ್ತಿಯಲ್ಲಿ ಹೆಚ್ಚುತ್ತಿರುವ ಅಪಘಾತಗಳು ಹಾಗೂ ಭಾರಿ ಸಂಚಾರ ದಟ್ಟಣೆಯನ್ನು ತಪ್ಪಿಸಲು ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಅವರು ಮಹತ್ವದ ಹೆಜ್ಜೆ ಇಟ್ಟಿದ್ದಾರೆ. ಈ ಮಾರ್ಗದಲ್ಲಿ ಬೈಪಾಸ್ ರಸ್ತೆ ಇಲ್ಲದ ಕಾರಣ ಭಾರಿ ವಾಹನಗಳ ಸಂಚಾರದಿಂದಾಗಿ ಶಾಲಾ ಮಕ್ಕಳು, ರೈತರು, ದ್ವಿಚಕ್ರ ವಾಹನ ಸವಾರರು ಹಾಗೂ ಸುತ್ತಮುತ್ತಲಿನ ಹಳ್ಳಿಗಳಾದ ಸೋಮನಹಳ್ಳಿ, ತರಳು ಮತ್ತು ನೆಲಗುಳಿ ಭಾಗದ ಜನಸಾಮಾನ್ಯರು ದಿನನಿತ್ಯ ಜೀವಭಯದಲ್ಲಿ ಓಡಾಡುವಂತಾಗಿದೆ. ಹೀಗಾಗಿ, ಈ ಭಾಗದ ಜನರ ಸಮಸ್ಯೆ ತಪ್ಪಿಸಬೇಕು ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ಪತ್ರ ಬರೆದಿದ್ದಾರೆ.

Kaggalipura Bypass HD Kumaraswamy Writes to Nitin Gadkari Seeking Urgent Approval

ಸ್ಥಳೀಯರು, ರೈತ ಸಂಘಟನೆಗಳು ಹಾಗೂ ಕಾರ್ಮಿಕ ಸಂಘಟನೆಗಳ ಆತಂಕವನ್ನು ಆಲಿಸಿರುವುದಾಗಿ ಎಚ್.ಡಿ ಕುಮಾರಸ್ವಾಮಿ ಹೇಳಿದ್ದಾರೆ. ಎಕುಮಾರಸ್ವಾಮಿ ಅವರು, ಈ ಬಗ್ಗೆ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರಿಗೆ ಪತ್ರ ಬರೆದು ತುರ್ತು ಗಮನಹರಿಸುವಂತೆ ಮನವಿ ಮಾಡಿದ್ದಾರೆ. ಸಾರ್ವಜನಿಕರ ಹಿತದೃಷ್ಟಿಯಿಂದ 'ಕಗ್ಗಲೀಪುರ ಬೈಪಾಸ್' ನಿರ್ಮಾಣಕ್ಕೆ ಆದ್ಯತೆ ಮೇರೆಗೆ ತಕ್ಷಣವೇ ಒಪ್ಪಿಗೆ ನೀಡಿ, ತ್ವರಿತಗತಿಯಲ್ಲಿ ಡಿಪಿಆರ್ (DPR) ಸಿದ್ಧಪಡಿಸುವಂತೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ (NHAI) ಹಾಗೂ ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಲು ಅವರು ಒತ್ತಾಯಿಸಿದ್ದಾರೆ. ನಾಡಿನ ಜನರ, ರೈತರ ಹಾಗೂ ವಿದ್ಯಾರ್ಥಿಗಳ ಸಮಸ್ಯೆಗಳಿಗೆ ಸ್ಪಂದಿಸಿ, ಶಾಶ್ವತ ಪರಿಹಾರ ಕಲ್ಪಿಸುವುದೇ ನಮ್ಮ ಆದ್ಯತೆ ಎಂದು ಜೆಡಿಎಸ್ ಹೇಳಿದೆ.

ಮಂಗಳೂರು: ಕೋಕರ್ ಹೈಡ್ರೋಟ್ರೀಟರ್ ಘಟಕದಲ್ಲಿ ಆಕಸ್ಮಿಕ ಸ್ಫೋಟ

ಮಂಗಳೂರಿನ ಎಂಆರ್‌ಪಿಎಲ್ (MRPL) ಸಂಸ್ಥೆಯ ಕೋಕರ್ ಹೈಡ್ರೋಟ್ರೀಟರ್ ಘಟಕದಲ್ಲಿ ಸೆಪ್ಟೆಂಬರ್ 30ರ ಬುಧವಾರ ಮಧ್ಯಾಹ್ನ ಆಕಸ್ಮಿಕ ಸ್ಫೋಟ ಸಂಭವಿಸಿ ಬೆಂಕಿ ಹೊತ್ತಿಕೊಂಡ ಘಟನೆ ತೀವ್ರ ಕಳವಳ ತಂದಿದೆ ಎಂದು ಸಚಿವ ಯು.ಟಿ ಖಾದರ್ ಅವರು ಹೇಳಿದ್ದಾರೆ.

ಘಟನೆ ತಿಳಿದ ತಕ್ಷಣವೇ ಜಿಲ್ಲಾಧಿಕಾರಿಗಳು ಹಾಗೂ ಪೊಲೀಸ್ ಕಮಿಷನರ್ ಅವರನ್ನು ದೂರವಾಣಿ ಮೂಲಕ ಸಂಪರ್ಕಿಸಿ ಘಟನೆಯ ಸಂಪೂರ್ಣ ವಿವರಗಳನ್ನು ಪಡೆದುಕೊಂಡಿದ್ದೇನೆ. ಸ್ಥಳದಲ್ಲಿ ಸೂಕ್ತ ಮುನ್ನೆಚ್ಚರಿಕೆ ವಹಿಸಲು, ಗಾಯಗೊಂಡವರಿಗೆ ತಕ್ಷಣ ಉತ್ತಮ ಚಿಕಿತ್ಸೆ ಕೊಡಿಸಲು ಮತ್ತು ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಕಟ್ಟುನಿಟ್ಟಿನ ಸೂಚನೆ ನೀಡಿದ್ದೇನೆ.

ಸದ್ಯ ಲಭ್ಯವಿರುವ ಮಾಹಿತಿಯಂತೆ ಈ ಅವಘಡದಲ್ಲಿ 9 ಜನರು ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ದೇವರ ದಯೆಯಿಂದ ಹಾಗೂ ಮಂಗಳೂರಿನ ಜನರ ಹಾರೈಕೆಯಿಂದ ಈ ದುರಂತದಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂಬುದು ಸಮಾಧಾನಕರ ವಿಷಯ. ಘಟನೆಯ ಕುರಿತು ತನಿಖೆ ನಡೆಸುವಂತೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದ್ದು, ಸಾರ್ವಜನಿಕರು ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರು ಯಾವುದೇ ರೀತಿಯ ಆತಂಕಕ್ಕೆ ಒಳಗಾಗಬಾರದು. ಜಿಲ್ಲಾಡಳಿತವು ಎಲ್ಲಾ ರೀತಿಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ.

ಅಲ್ಲದೆ, ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಈ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಸಬೇಕೆಂದು ಒತ್ತಾಯಿಸುತ್ತೇನೆ. ಜೊತೆಗೆ, ಈ ದುರ್ಘಟನೆಯ ಹೊಣೆ ಹೊತ್ತು ಎಂಆರ್‌ಪಿಎಲ್ ಸಂಸ್ಥೆಯು ಎಲ್ಲಾ ಗಾಯಾಳುಗಳಿಗೆ ಸೂಕ್ತ ಪರಿಹಾರ ಘೋಷಿಸಬೇಕು ಎಂದು ಆಗ್ರಹಿಸುತ್ತೇನೆ. ಈ ಸಂದರ್ಭದಲ್ಲಿ ಎಲ್ಲಾ ರೀತಿಯ ಸಹಕಾರ ನೀಡಿದ ಜೋಕಟ್ಟೆ ಗ್ರಾಮದ ಜನಸಾಮಾನ್ಯರನ್ನು ನಾನು ಹೃದಯಪೂರ್ವಕವಾಗಿ ಗೌರವಿಸುತ್ತೇನೆ ಎಂದೂ ಅವರು ಹೇಳಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+