ಕರ್ನಾಟಕದ ಈ ಎರಡು ಕಡೆ ಆಧುನಿಕ ಕ್ರೀಡಾಂಗಣ, ಅಂತಾರಾಷ್ಟ್ರೀಯ ಪಂದ್ಯಗಳಿಗೆ ಅತಿಥ್ಯ: ಖರ್ಗೆ
ಬೆಂಗಳೂರು, ಅಕ್ಟೋಬರ್ 26: ಬೆಂಗಳೂರು ಸೇರಿದಂತೆ ರಾಜ್ಯದ ಇತರ ಕಡೆಗಳಲ್ಲಿ ಉತ್ತಮ, ಸುವ್ಯವಸ್ಥಿತ ಕ್ರೀಡಾಂಗಣಗಳು ಇವೆ. ಅದೇ ರೀತಿ ಬೇರೆ ಬೇರೆ ಭಾಗಗಳಲ್ಲೂ ಕ್ರೀಡಾಂಗಣ ಆತಿಥ್ಯ ಸಿಗಬೇಕೆಂಬ ಬೇಡಿಕೆ ಇತ್ತು. ಈ ನಿಟ್ಟಿನಲ್ಲಿ ರಾಜ್ಯದಲ್ಲಿ ಎರಡು ಕಡೆ ಹೊಸ ಕ್ರೀಡಾಂಗಣ ನಿರ್ಮಾಣವಾಗಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಅವರು ಮಾಹಿತಿ ನೀಡಿದ್ದಾರೆ.
ಈ ಬಗ್ಗೆ ಎಕ್ಸ್ ಪೋಸ್ಟ್ ಮಾಡಿರುವ ಅವರು, "ಮನುಷ್ಯನ ಆತ್ಮವಿಶ್ವಾಸವನ್ನು ಮತ್ತು ಸೃಜನಶೀಲತೆಯನ್ನು ವೃದ್ಧಿಸುವಲ್ಲಿ ಕ್ರೀಡೆ ಮಹತ್ವದ ಪಾತ್ರ ವಹಿಸುತ್ತದೆ. ಇದನ್ನು ದೃಷ್ಟಿಯಲ್ಲಿಟ್ಟುಕೊಂಡು ಕಲಬುರಗಿ ಮತ್ತು ಚಿತ್ತಾಪುರದಲ್ಲಿ ಸುಸಜ್ಜಿತವಾದ ಕ್ರೀಡಾಂಗಣಗಳನ್ನು ಅಭಿವೃದ್ಧಿಪಡಿಸಲಾಗಿದೆ' ಎಂದು ಮಾಹಿತಿ ನೀಡಿದರು.

ದೊಡ್ಡ ನಗರಗಳಲ್ಲಿನ ಕ್ರೀಡಾ ಸೌಲಭ್ಯಗಳು ಚಿತ್ತಾಪುರದಲ್ಲೂ ಲಭ್ಯವಾಗಬೇಕು ಎಂಬ ದೃಷ್ಟಿಯಲ್ಲಿ ಆರಂಭವಾದ ನಮ್ಮ ಕನಸು ಎಲ್ಲರ ಸಹಕಾರ ಮತ್ತು ಶ್ರಮದಿಂದ ಚಿತ್ತಾಪುರವು ಬ್ಯಾಡ್ಮಿಟನ್ ಕ್ರೀಡೆಯ ಕೇಂದ್ರವಾಗಿ ಹೊರಹೊಮ್ಮಿದೆ, ನಿರಂತರವಾಗಿ ದೇಶಿಯ ಹಾಗೂ ಅಂತಾರಾಷ್ಟ್ರೀಯ ಪಂದ್ಯಗಳಿಗೆ ಅತಿಥ್ಯವಹಿಸಿದ ಕೀರ್ತಿ ಚಿತ್ತಾಪುರದ್ದು ಎಂದರು.
ಚಿತ್ತಾಪುರ ಬ್ಯಾಡ್ಮಿಟನ್ ಅಸೊಸಿಯೆಷನ್ ಆಯೋಜನೆಯಲ್ಲಿ ರಾಜ್ಯ ಹಾಗೂ ಅಂತರರಾಜ್ಯ ಕ್ರೀಡಾಪಟುಗಳು ಭಾಗವಹಿಸಿದ ಓಪನ್ ಡಬಲ್ಸ್ ಬ್ಯಾಡ್ಮಿಟನ್ ಚಾಂಪಿಯನ್ಶಿಪ್ ಪಂದ್ಯಾವಳಿ ಯಶಸ್ವಿಯಾಗಿ ನಡೆದಿದ್ದು ಸಂತಸ ತಂದಿದೆ. ಕ್ರೀಡಾಪಟುಗಳು ಇಲ್ಲಿನ ಕ್ರೀಡಾಂಗಣ, ಇಲ್ಲಿನ ಸೌಲಭ್ಯಗಳನ್ನು ಮೆಚ್ಚಿ ಪ್ರಶಂಸೆ ವ್ಯಕ್ತಪಡಿಸಿದ್ದು ಇನ್ನೂ ಹೆಚ್ಚಿನ ಸಂತೋಷ ತಂದಿದೆ ಎಂದು ತಿಳಿಸಿದರು.
ಓಪನ್ ಡಬಲ್ಸ್ ಬ್ಯಾಡ್ಮಿಂಟನ್ ಚಾಂಪಿಯನ್ ಶಿಪ್-2025
ಪಟ್ಟಣದ ಒಳಾಂಗಣ ಕ್ರೀಡಾಂಗಣದಲ್ಲಿ ತಾಲೂಕ ಬ್ಯಾಡ್ಮಿಂಟನ್ ಅಸೋಸಿಯೇಷನ್, ಗುಲ್ಬರ್ಗ ಜಿಲ್ಲಾ ಬ್ಯಾಡ್ಮಿಂಟನ್ ಅಸೋಸಿಯೇಷನ್ ಮತ್ತು ಕರ್ನಾಟಕ ಬ್ಯಾಡ್ಮಿಂಟನ್ ಅಸೋಸಿಯೇಷನ್ ಬೆಂಗಳೂರು ಇವರ ಸಹಯೋಗದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಓಪನ್ ಡಬಲ್ಸ್ ಬ್ಯಾಡ್ಮಿಂಟನ್ ಚಾಂಪಿಯನ್ ಶಿಪ್-2025 ನಡೆಯಿತು. ಇದರಲ್ಲಿ ಮೆನ್ಸ್ ಮತ್ತು ಹುಮೆನ್ಸ್ ಮತ್ತು 40+ಮೆನ್ಸ್ ಡಬಲ್ಸ್ ಪಂದ್ಯಾವಳಿಯನ್ನು ವಿಧಾನ ಪರಿಷತ್ ಸದಸ್ಯ ತಿಪ್ಪಣ್ಣಪ್ಪ ಕಮಕನೂರ ಉದ್ಘಾಟಿಸಿದರು.
ಪಟ್ಟಣದಲ್ಲಿ ಪ್ರಜಾಸೌಧ, ವಿದ್ಯಾರ್ಥಿ ವಸತಿ ನಿಲಯಗಳು, ಶಾಲಾ, ಕಾಲೇಜುಗಳು, ವಿವಿಧ ಸಮುದಾಯ ಭವನಗಳು, ಕ್ರೀಡಾಂಗಣ, ಆಸ್ಪತ್ರೆಗಳು, ಯುವಜನರ ಸಬಲೀಕರಣಕ್ಕೆ ಡಿಜಿಟಲ್ ಗ್ರಂಥಾಲಯ ಸೇರಿದಂತೆ ಪ್ರಮುಖ ರಸ್ತೆಗಳು ನಿರ್ಮಾಣ ಮಾಡುವ ಮೂಲಕ ಸಚಿವರು ಚಿತ್ತಾಪುರ ಕ್ಷೇತ್ರವನ್ನು ಪ್ರಿಯಾಂಕ್ ಖರ್ಗೆ ಅವರು ಅಭಿವೃದ್ಧಿ ಮಾಡಿದ್ದಾರೆ ಎಂದು ಪ್ರಶಂಸಿದರು.
ಕ್ರೀಡಾಂಗಣದ ವಿವಿಧ ಕಾಮಗಾರಿಗಳಿಗೆ ಈಗಾಗಲೇ 11 ಲಕ್ಷ ಅನುದಾನ ನೀಡಿದ್ದೇನೆ. ಒಳಾಂಗಣ ಕ್ರೀಡಾಂಗಣದಲ್ಲಿ ವಿದ್ಯುತ್ ವ್ಯವಸ್ಥೆಗೆ ಹೆಚ್ಚಿನ ಅನುದಾನ ನೀಡುವುದಾಗಿ ತಿಳಿಸಿದರು. ಇದೇ ವೇಳೆ ಹಿರಿಯ ಪತ್ರಕರ್ತ ಕಾಶಿನಾಥ ಗುತ್ತೇದಾರ ಅವರು, ಸಚಿವರು ಚಿತ್ತಾಪುರದಲ್ಲಿ ಕ್ರೀಡಾಪಟುಗಳಿಗೆ ಅವಶ್ಯವಿದ್ದ ಸುಸಜ್ಜಿತ ಕ್ರೀಡಾಂಗಣ ನಿರ್ಮಾಣವಾಗಿದ್ದು, ಇಲ್ಲಿಕ್ರೀಡಾ ಚಟುವಟಿಕೆಗಳು ಗರಿಗೆದರಿಲಿವೆ. ಇದು ಕ್ರೀಡಾಪಟುಗಳನ್ನು ಉತ್ತೇಜಿಸುತ್ತದೆ. ಯುವ ಸಮೂಹವು ಕ್ರೀಡೆಯಲ್ಲಿ ಆಸಕ್ತಿ ಬೆಳೆಸಲು ಸಹಾಯಕ ಎಂದು ತಿಳಿಸಿದರು.
-
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
Bengaluru Mumbai Vande Bharat: ಬೆಂಗಳೂರು - ಮುಂಬೈ ಹೊಸ ರೈಲು: ಮಹಾ ಸಿಎಂ ಮಹತ್ವದ ಟ್ವೀಟ್, ಯಾವಾಗ ಪ್ರಾರಂಭ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
ಎರಡು ಬಾರಿ ಕೆಲಸ ಕಳೆದುಕೊಂಡ ಯುವಕನಿಂದ ರೆಸ್ಟೋರೆಂಟ್ ಬ್ಯುಸಿನೆಸ್: ಈಗ ತಿಂಗಳಿಗೆ 1.3 ಕೋಟಿ ರೂ. ಆದಾಯ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
ಬ್ರೋ.. ಒಂದು ವಿಕೆಟ್ ಕಿತ್ತರೂ ನನ್ನ ಫೋಟೋ ಹಾಕಿಲ್ಲ ಯಾಕೆ?; ಆರ್ಸಿಬಿ ಮೆಂಟರ್ ಡಿಕೆಗೆ ಕೃನಾಲ್ ಪಾಂಡ್ಯ ಪ್ರಶ್ನೆ -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ -
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ












Click it and Unblock the Notifications