School Holiday: ಈ ಜಿಲ್ಲೆಯಲ್ಲಿ ಇಂದು ಶಾಲಾ-ಕಾಲೇಜುಗಳಿಗೆ ರಜೆ: ಮದ್ಯ ಮಾರಾಟವೂ ಬಂದ್
ಸಂಸತ್ನಲ್ಲಿ ಸಂವಿಧಾನದ 75 ನೇ ವಾರ್ಷಿಕೋತ್ಸವದ ಸಂದರ್ಭದ ಭಾಷಣದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಕುರಿತು ನೀಡಿದ ಹೇಳಿಕೆ ಭಾರೀ ವಿವಾದಕ್ಕೆ ಗುರಿಯಾಗಿದೆ. ಕೇಂದ್ರ ಸಚಿವ ಅಮಿತ್ ಶಾ ವಿರುದ್ಧ ಪ್ರತಿಪಕ್ಷಗಳು ತಿರುಗಿಬಿದ್ದಿದ್ದು, ಅಮಿತ್ ಶಾ ರಾಜೀನಾಮೆಗೆ ಆಗ್ರಹಿಸಿವೆ.
ಕೇಂದ್ರ ಸಚಿವ ಅಮಿತ್ ಶಾ ಅವರು ಅಂಬೇಡ್ಕರ್ ಕುರಿತು ಸಂಸತ್ ನಲ್ಲಿ ನೀಡಿದ ಹೇಳಿಕೆ ಕುರಿತು ರಾಜ್ಯದ ರಾಜ್ಯದ ಹಲವೆಡೆ ಇದೀಗ ಅಮಿತ್ ಶಾ ವಿರುದ್ಧ ಕೂಗು ಕೇಳಿಬರುತ್ತಿದೆ. ಇದೀಗ ಅಮಿತ್ ಶಾ ಹೇಳಿಕೆಯನ್ನಿ ಖಂಡಿಸಿ ಕಲಬುರಗಿ, ಗದಗ, ಉಡುಪಿ ಜಿಲ್ಲೆಗಳಲ್ಲಿಇಂದು (ಡಿ.24) ಪ್ರತಿಭಟನೆ ನಡೆಯಲಿದೆ.

ಗೃಹ ಸಚಿವ ಅಮಿತ್ ಶಾ ಅವರು ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಕುರಿತು ನೀಡಿದ ಹೇಳಿಕೆಯನ್ನು ಖಂಡಿಸಿ ಮತ್ತು ಅಮಿತ್ ಶಾ ಅವರನ್ನು ಸಚಿವ ಸಂಪುಟದಿಂದ ವಜಾಗೊಳಿಸಲು ಆಗ್ರಹಿಸಿ ಇಂದು ಕಲಬುರಗಿ ಜಿಲ್ಲೆಯಲ್ಲಿ ಹಲವು ಸಂಘಟನೆಗಳು ಬಂದ್‌ಗೆ ಕರೆ ನೀಡಿದೆ. ಸಂವಿಧಾನ ರಕ್ಷಣಾ ಸಮಿತಿ ಹಾಗೂ ವಿವಿಧ ಸಂಘಟನೆಗಳಿಂದ ಇಂದು (ಡಿ.24) ಕಲಬುರಗಿ ಬಂದ್‌ಗೆ ಕರೆ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಠಿಯಿಂದ ಮದ್ಯ ಮಾರಾಟವನ್ನೂ ನಿಷೇಧಿಸಲಾಗಿದೆ. ಅಲ್ಲದೇ ಕಲಬುರಗಿ ನಗರದ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆ ಘೋಷಿಸಿ ಡಿ.ಡಿ.ಪಿ.ಐ ಸೂರ್ಯಕಾಂತ ಮದಾನಿ ಅವರು ಪ್ರತ್ಯೇಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಗದಗದಲ್ಲಿ ಬಂದ್
ಸಂಸತ್ ನಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಅಂಬೇಡ್ಕರ್ ಅವರ ಕುರಿತು ನೀಡಿರುವ ಹೇಳಿಕೆಯಿಂದ ಆಕ್ರೋಶಗೊಂಡಿರುವ ದಲಿತ, ಪ್ರಗತಿಪರ ಸಂಘಟನೆಗಳ ಒಕ್ಕೂಟ ಇಂದು (ಡಿಸೆಂಬರ್ 24) ಗದಗದಲ್ಲಿ ಬಂದ್‌ಗೆ ಕರೆ ನೀಡಿದೆ. ಗೃಹಸಚಿವರ ಹೇಳಿಕೆಯಿಂದ ದೇಶದಲ್ಲಿ ದಲಿತರು ಮತ್ತು ಪ್ರಗತಿಪರ ಜನಗಳ ಭಾವನೆಗಳಿಗೆ ಧಕ್ಕೆಯಾಗಿದೆ ಎಂದು ಸಂಘಟನೆಗಳು ಪ್ರತಿಭಟನೆಗೆ ಕರೆ ಕೊಟ್ಟಿದೆ. ಇನ್ನು, ಉಡುಪಿ ಉಡುಪಿ ಜಿಲ್ಲಾ ಅಂಬೇಡ್ಕರ್ ಯುವಸೇನೆ ವತಿಯಿಂದ ಡಿ.24ರಂದು ಸಂಜೆ 4.30ಕ್ಕೆ ಅಜ್ಜರಕಾಡಿನಲ್ಲೂ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧ್ಯಕ್ಷ ಗಣೇಶ್ ನೆರ್ಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿಜಯಪುರದಲ್ಲಿ ಕಾಂಗ್ರೆಸ್ ಪ್ರತಿಭಟನೆ
ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಕುರಿತು ಸಂಸತ್ ನಲ್ಲಿ ಕೇಂದ್ರ ಸಚಿವ ಅಮಿತ್ ಶಾ ಹೇಳಿಕೆ ಖಂಡಿಸಿ ಇಂದು ವಿಜಯಪುರ ನಗರದಲ್ಲಿ ಜಿಲ್ಲಾ ಕಾಂಗ್ರೆಸ್ ಪಕ್ಷದಿಂದ ಪ್ರತಿಭಟನೆ ಮಾಡಲಾಗಿದೆ. ಡಾ. ಬಿಆರ್ ಅಂಬೇಡ್ಕರ್ ವೃತ್ತದಿಂದ ಜಿಲ್ಲಾಧಿಕಾರಿಗಳ ಕಚೇರಿವರೆಗೆ ಕಾಂಗ್ರೆಸ್ ಪದಾಧಿಕಾರಿಗಳು, ಕಾರ್ಯಕರ್ತರು, ಪ್ರತಿಭಟನಾ ಮೆರವಣಿಗೆ ನಡೆಸಿದರು. ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ದ ಘೋಷಣೆಗಳನ್ನು ಕೂಗಿ ಆಕ್ರೋಶ ಹೊರ ಹಾಕಿದ್ದಾರೆ.
ಅಂಬೇಡ್ಕರ್ ಭಾವಚಿತ್ರ ಹಿಡಿದು ಅಮಿತ್ ಶಾ ಅಂಬೇಡ್ಕರ್ ಅವರಿಗೆ ಅವಮಾನ ಮಾಡಿದ್ದಾರೆ. ಅಮಿತ್ ಶಾ ಅವರನ್ನ ಸಚಿವ ಸಂಪುಟದಿಂದ ತೆಗೆದು ಹಾಕಬೇಕೆಂದು ಒತ್ತಾಯಿಸಿದ್ದಾರೆ. ಅಲ್ಲದೇ ಅಮಿತ್ ಶಾ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಬೇಕೆಂದು ಆಗ್ರಹಿಸಿದ್ದಾರೆ. ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ ಲೋಣಿ, ಅಮೀದ್ ಮುಶ್ರೀಫ್, ಬಾಬು ರಾಜೇಂದ್ರ ನಾಯಕ್ ಸೇರಿದಂತೆ ಇತರರು ಹೋರಾಟದಲ್ಲಿ ಹಾಜರಾಗಿದ್ದರು. ಡಿಸಿ ಕಚೇರಿಯಲ್ಲಿ ಜಿಲ್ಲಾಧಿಕಾರಿಗಳ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿದ್ದಾರೆ.












Click it and Unblock the Notifications