Kalaburagi Earthquake: ಕಲಬುರಗಿಯಲ್ಲಿ ಭೂಕಂಪ, ಬೆಚ್ಚಿಬಿದ್ದ ಗ್ರಾಮಸ್ಥರು!
ಕಲಬುರಗಿ, ಸೆಪ್ಟೆಂಬರ್ 11 : ಕಲಬುರಗಿ ಜಿಲ್ಲೆ ಆಳಂದ ತಾಲೂಕಿನ ಚಿಂಚನಸೂರು ಗ್ರಾಮದಲ್ಲಿ ಭೂಮಿ ಕಂಪಿಸಿದ ಅನುಭವವಾಗಿದೆ. ಇಂದು (ಸೆಪ್ಟೆಂಬರ್ 11) ಬೆಳಗ್ಗೆ 8 ಗಂಟೆ 17 ನಿಮಿಷದ ಸುಮಾರಿಗೆ ಭೂಮಿ ಕಂಪಿಸಿದ್ದು, ರಿಕ್ಟರ್ ಮಾಪಕದಲ್ಲಿ 2.3ರಷ್ಟು ಕಂಪನದ ತೀವ್ರತೆ ದಾಖಲಾಗಿದೆ.
ಇನ್ನೂ ಈ ಭೂಕಂಪದ ವಿಷಯ ತಿಳಿಯುತ್ತಿದ್ದಂತೆಯೇ ಗ್ರಾಮಕ್ಕೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಗ್ರಾಮಸ್ಥರ ಜೊತೆ ಸಭೆ ನಡೆಸಿ ಸಣ್ಣ ಪ್ರಮಾಣದಲ್ಲಿ ಭೂಮಿ ಕಂಪಿಸಿರುವ ಬಗ್ಗೆ ಮಾಹಿತಿ ನೀಡಿದ್ದಾರೆ. ಅಲ್ಲದೇ ಇದರಿಂದ ಯಾರೂ ಕೂಡ ಆತಂಕಕ್ಕೆ ಒಳಗಾಗದಂತೆ ಗ್ರಾಮಸ್ಥರಿಗೆ ಧೈರ್ಯ ಹೇಳಿದ್ದಾರೆ.

ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಚಿಂಚನಸೂರು ಗ್ರಾಮದ ಸುತ್ತಮುತ್ತಲಿನ ಪ್ರದೇಶದಲ್ಲಿನ ಭೂಕಂಪರ ಬಗ್ಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಅವರು ಮಾತನಾಡಿ, ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಚಿಂಚನಸೂರು ಗ್ರಾಮದ ಸುತ್ತಮುತ್ತಲಿನ ಪ್ರದೇಶದಲ್ಲಿ ಇಂದು ಬೆಳಗ್ಗೆ 8. 17 ಗಂಟೆಯ ಸುಮಾರಿಗೆ ಸಣ್ಣ ಪ್ರಮಾಣದ ಭೂಕಂಪನವಾಗಿದ್ದು, ರಿಕ್ಟರ್ ಮಾಪಕದಲ್ಲಿ 2.3 ತೀವ್ರತೆ ದಾಖಲಾಗಿರುತ್ತದೆ.
ಈ ಘಟನೆ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರದೊಂದಿಗೆ ತಾವು ಸಂಪರ್ಕದಲ್ಲಿದ್ದು ಸ್ಥಳಕ್ಕೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿಗಳು, ತಹಸೀಲ್ದಾರ, ಪೊಲೀಸ್ ಅಧಿಕಾರಿಗಳು ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ. ಭೂಕಂಪನವು ಸಣ್ಣ ಪ್ರಮಾಣದ್ದಾಗಿದ್ದು ಸಾರ್ವಜನಿಕರು ಹಾಗೂ ಚಿಂಚನಸೂರು ಸೇರಿದಂತೆ ಸುತ್ತಮುತ್ತಲಿನ ವ್ಯಾಪ್ತಿಯ ಗ್ರಾಮಸ್ಥರು ಯಾವುದೇ ರೀತಿಯ ಆತಂಕಕ್ಕೆ ಒಳಗಾಗಬಾರದು ಎಂದು ಸಚಿವ ಪ್ರಿಯಾಂಕ್ ಖರ್ಗೆ ವಿನಂತಿ ಮಾಡಿದ್ದಾರೆ.












Click it and Unblock the Notifications