ರಸ್ತೆ ಅಪಘಾತ : ಕಲಬುರಗಿ ಲೋಕಾಯುಕ್ತ ಎಸ್ಪಿ ಸಾವು

Posted By:
Subscribe to Oneindia Kannada

ಹಾವೇರಿ, ಸೆಪ್ಟೆಂಬರ್ 16 : ರಸ್ತೆ ಅಪಘಾತದಲ್ಲಿ ಕಲಬುರಗಿ ಜಿಲ್ಲೆಯ ಲೋಕಾಯುಕ್ತ ಎಸ್ಪಿ ಎಂ.ಬಿ.ಪಾಟೀಲ್ ಸಾವನ್ನಪ್ಪಿದ್ದಾರೆ. ಬಸ್ ಮತ್ತು ಟೆಂಪೋ ಟ್ರಾವೆಲರ್‌ ನಡುವೆ ಈ ಅಪಘಾತ ನಡೆದಿದ್ದು, 10 ಜನರು ಗಾಯಗೊಂಡಿದ್ದಾರೆ.

ಹಾವೇರಿ ಜಿಲ್ಲೆಯ ಹಾನಗಲ್‌ ತಾಲೂಕಿನ ಬೈಪಾಸ್ ಬಳಿ ಶುಕ್ರವಾರ ಮುಂಜಾನೆ ಈ ಅಪಘಾತ ನಡೆದಿದೆ. ಬೆಂಗಳೂರಿನಿಂದ ಬೆಳಗಾವಿಗೆ ತೆರಳುತ್ತಿದ್ದ ಸರ್ಕಾರಿ ಬಸ್ಸಿನಲ್ಲಿ ಲೋಕಾಯುಕ್ತ ಎಸ್ಪಿ ಎಂ.ಬಿ.ಪಾಟೀಲ್ ಪ್ರಯಾಣಿಸುತ್ತಿದ್ದರು.[ಬೆಂಗಳೂರು : ಯಮನಾಗಿ ಬಂದ ಮರಳು ಲಾರಿ, ಒಬ್ಬರು ಸಾವು]

Kalaburagi Lokayukta SP dies in road accident

ಸಕ್ಕರೆ ತುಂಬಿಕೊಂಡು ಹೋಗುತ್ತಿದ್ದ ಲಾರಿಗೆ ಟೆಂಪೋ ಟ್ರಾವೆಲರ್ ಡಿಕ್ಕಿಯಾಗಬೇಕಿತ್ತು. ಅದನ್ನು ತಪ್ಪಿಸಲು ಚಾಲಕ ಪ್ರಯತ್ನಿಸಿದಾಗ ಬಸ್ಸಿಗೆ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ. ಟೆಂಪೋ ಟ್ರಾವೆಲರ್ ಡಿಕ್ಕಿ ಹೊಡೆದ ರಭಸಕ್ಕೆ ಎಂ.ಬಿ.ಪಾಟೀಲ್ ಅವರು ಸಾವನ್ನಪ್ಪಿದ್ದಾರೆ.[ಕೃಷ್ಣಗಿರಿಯಲ್ಲಿ ಭೀಕರ ಅಪಘಾತ, 10 ಜನ ಸಾವು]

ಈ ಅಪಘಾತದಲ್ಲಿ 10ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಬೆಂಗಳೂರಿನ ಡಾ. ಅಂಕಿತ, ಚನ್ನಬಸವಯ್ಯ, ಬೆಳಗಾವಿಯ ಗಂಗಾಧರ ನಗರದ ಶ್ರೀಕಾಂತ ಹಾವನೂರು ಎಂದು ಗುರುತಿಸಲಾಗಿದೆ. ವಿವಿಧ ಆಸ್ಪತ್ರೆಗಳಲ್ಲಿ ಗಾಯಾಳುಗಳು ಚಿಕಿತ್ಸೆ ಪಡೆಯುತ್ತಿದ್ದಾರೆ.

ಟೆಂಪೋ ಟ್ರಾವೆಲರ್ ಮತ್ತು ಸರ್ಕಾರಿ ಬಸ್ಸಿನ ಚಾಲಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಹಾವೇರಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಚಾಲಕನ ಅಜಾಗರೂಕತೆಯೇ ಘಟನೆಗೆ ಕಾರಣ ಎಂದು ತಿಳಿದುಬಂದಿದೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Kalaburagi Lokayukta SP died in a road accident in Haveri. M.B.Patil was travelling in a Volvo bus which rammed into a tempo traveler. 10 people have been injured in accident.
Please Wait while comments are loading...