ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕಲಬುರ್ಗಿ ಹತ್ಯೆಗೆ ಒಂದು ವರ್ಷ, ತನಿಖೆ ಎತ್ತ ಸಾಗಿದೆ?

By ವಿಕಾಸ್ ನಂಜಪ್ಪ
|
Google Oneindia Kannada News

ಬೆಂಗಳೂರು, ಆಗಸ್ಟ್ 30 : ಹಿರಿಯ ಸಂಶೋಧಕ ಎಂ.ಎಂ.ಕಲಬುರ್ಗಿ ಅವರ ಹತ್ಯೆಯಾಗಿ ಒಂದು ವರ್ಷ ಕಳೆದಿದೆ. ಕಲಬುರ್ಗಿ ಅವರ ಸಾವಿಗೆ ನ್ಯಾಯಬೇಕು ಎಂಬ ಬೇಡಿಕೆ ಜೋರಾಗಿದೆ. ಆದರೆ, ಹತ್ಯೆಯ ತನಿಖೆ ವಿಳಂಬವಾಗುತ್ತಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 'ಎಂ.ಎಂ.ಕಲಬುರ್ಗಿ ಅವರ ಹತ್ಯೆಯ ತನಿಖೆ ನಡೆಯುತ್ತಿದೆ. ಶೀಘ್ರದಲ್ಲೇ ಹತ್ಯೆ ಮಾಡಿದ ಆರೋಪಿಗಳನ್ನು ಬಂಧಿಸಲಾಗುತ್ತದೆ' ಎಂದು ಹೇಳಿಕೆ ನೀಡಿದ್ದಾರೆ.[ಎಂಎಂ ಕಲಬುರ್ಗಿ ಬೆಂಬಲಿಸಿ ಟ್ವಿಟ್ಟರ್ ಅಭಿಯಾನ]

Kalaburgi

ಎಂ.ಎಂ.ಕಲಬುರ್ಗಿ ಹತ್ಯೆ ಪ್ರಕರಣದ ತನಿಖೆ ವಿಳಂಬವಾಗುತ್ತಿದ್ದು, ಈ ಪ್ರಕರಣ ತನಿಖೆ ವಿಚಾರವಾದಿ ನರೇಂದ್ರ ದಾಬೋಲ್ಕರ್ ಮತ್ತು ಗೋವಿಂದ ಪನ್ಸಾರೆ ಅವರ ಹತ್ಯೆ ಪ್ರಕರಣದ ತನಿಖೆ ಮೇಲೆ ಹೆಚ್ಚು ಅವಲಂಬಿತವಾಗಿದೆ.[ದಾಬೋಲ್ಕರ್ ಎದೆಹೊಕ್ಕ ಗುಂಡು ಕೊಂಡಿದ್ದು ಬೆಳಗಾವಿಯಲ್ಲಿ]

ವಿಳಂಬ ಏಕೆ? : ಎಂ.ಎಂ.ಕಲಬುರ್ಗಿ ಹತ್ಯೆ ಪ್ರಕರಣದ ತನಿಖೆಯನ್ನು ಸಿಐಡಿ ನಡೆಸುತ್ತಿದೆ. ದಾಬೋಲ್ಕರ್ ಮತ್ತು ಗೋವಿಂದ ಪನ್ಸಾರೆ ಮತ್ತು ಕಲಬುರ್ಗಿ ಅವರ ಹತ್ಯೆಯ ನಡುವೆ ಸಾಮ್ಯಾತೆ ಇದೆ. ವಿಚಾರವಾದಿ ನರೇಂದ್ರ ದಾಬೋಲ್ಕರ್ ಹತ್ಯೆಯ ತನಿಖೆ ನಡೆಸುತ್ತಿರುವ ಸಿಬಿಐ ಡಾ.ವಿರೇಂದ್ರ ತಾವಡೆ ಎಂಬುವವರನ್ನು ಬಂಧಿಸಿದೆ. ಸಿಐಡಿ ಈ ಆರೋಪಿಯ ವಿಚಾರಣೆ ನಡೆಸಬೇಕಾಗಿದೆ.[ಕಲಬುರ್ಗಿ ಹತ್ಯೆ ತನಿಖೆಗೆ ವಿಶೇಷ ತಂಡ ರಚನೆ]

ದಾಬೋಲ್ಕರ್ ಮತ್ತು ಗೋವಿಂದ ಪನ್ಸಾರೆ ಹತ್ಯೆಗೆ ಬಳಸಿದ ಮಾದರಿಯ ಬುಲೆಟ್‌ಗಳನ್ನೇ ಕಲಬುರ್ಗಿ ಹತ್ಯೆಗೆ ಬಳಸಲಾಗಿದೆ ಎಂದು ಸಿಐಡಿ ಮಾಹಿತಿ ಸಂಗ್ರಹಿಸಿದೆ. ಬ್ಯಾಲಸ್ಟಿಕ್ ಫಿಂಗರ್ ಪ್ರಿಂಟ್ ತಜ್ಞರ ಮಾಹಿತಿ ಪ್ರಕಾರ ಅಧಿಕಾರಿಗಳು ಈ ಕುರಿತು ನಿರ್ಧಾರ ಕೈಗೊಂಡಿದ್ದಾರೆ.

ದಾಬೋಲ್ಕರ್ ಮತ್ತು ಗೋವಿಂದ ಪನ್ಸಾರೆ ಹತ್ಯೆಗೆ ಬಳಸಿದ ಮಾದರಿಯ ಬಂದೂಕನ್ನೇ ಕಲಬುರ್ಗಿ ಅವರ ಹತ್ಯೆಗೂ ಬಳಸಲಾಗಿದೆ ಎಂದಿ ವಿಧಿವಿಜ್ಞಾನ ಪ್ರಯೋಗಾಲಯದ ತಜ್ಞರು ಹೇಳಿದ್ದಾರೆ. ಗೋವಿಂದ ಪನ್ಸಾರೆ ಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ಸಿಬಿಐ ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಅಂತರಾಷ್ಟ್ರೀಯ ತನಿಖಾ ಸಂಸ್ಥೆಗಳ ಮೊರೆ ಹೋಗಿದೆ. ಅಲ್ಲಿಂದ ವರದಿ ಬಂದ ಬಳಿಕ ಕರ್ನಾಟಕ ಸಿಐಡಿಗೂ ಕಲಬುರ್ಗಿ ಹತ್ಯೆ ಬಗ್ಗೆ ಹೆಚ್ಚಿನ ಮಾಹಿತಿ ಸಿಗಲಿದೆ.

ಕಲಬುರ್ಗಿ ಹತ್ಯೆ ಪ್ರಕರಣದಲ್ಲಿ ಸನಾತನ ಸಂಸ್ಥೆಯ ಕೈವಾಡವಿದೆಯೇ? ಎಂದು ಸಿಐಡಿ ತನಿಖೆ ನಡೆಸುತ್ತಿದೆ. 2009ರ ಗೋವಾ ಬಾಂಬ್ ಸ್ಫೋಟದಲ್ಲಿ ಭಾಗಿಯಾದ ಆರೋಪ ಎದುರಿಸುತ್ತಿರುವ ಜೈ ಪ್ರಕಾಶ್, ರುದ್ರ ಪಾಟೀಲ್, ಸಾರಂಗ್ ಕುಲಕರ್ಣಿ ಮತ್ತು ಪ್ರವೀಣ್‌ಗಾಗಿ ಹುಡುಕಾಟ ನಡೆಸಲಾಗುತ್ತಿದೆ.

English summary
It has been a year since rationalist, Prof M M Kalaburgi was shot dead. While campaigns have begun seeking justice for the slain rationalist, the probe into his murders appears to be in a loop.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X