ಕಲಬುರ್ಗಿ ಹತ್ಯೆ ತನಿಖೆಗೆ ಸ್ಕಾಟ್‌ಲ್ಯಾಂಡ್ ಪೊಲೀಸರ ನೆರವು
ಬೆಂಗಳೂರು, ಜೂನ್ 11 : ಹಿರಿಯ ಸಂಶೋಧಕ ಎಂ.ಎಂ.ಕಲಬುರ್ಗಿ ಅವರ ಹತ್ಯೆ ಪ್ರಕರಣದ ತನಿಖೆಗೆ ಸ್ಕಾಟ್‌ಲ್ಯಾಂಡ್ ಪೊಲೀಸರು ಸಹಕಾರ ನೀಡಲಿದ್ದಾರೆ. ಹತ್ಯೆಗೆ ಬಳಸಿದ ಬಂದೂಕಿನ ಕುರಿತು ಅಲ್ಲಿನ ಪೊಲೀಸರಿಂದ ಮಾಹಿತಿ ಸಂಗ್ರಹಣೆ ಮಾಡಲಾಗುತ್ತದೆ.
ವಿಚಾರವಾದಿ ನರೇಂದ್ರ ದಾಬೋಲ್ಕರ್ ಹತ್ಯೆಯ ತನಿಖೆ ನಡೆಸುತ್ತಿರುವ ಸಿಬಿಐ ಡಾ.ವಿರೇಂದ್ರ ತಾವಡೆ ಅವರನ್ನು ಶುಕ್ರವಾರ ರಾತ್ರಿ ಬಂಧಿಸಿದೆ. ಈ ಬಂಧನದಿಂದಾಗಿ ಕಲಬುರಗಿ, ದಾಬೋಲ್ಕರ್ ಮತ್ತು ಗೋವಿಂದ ಪನ್ಸಾರೆ ಅವರ ಹತ್ಯೆ ಪ್ರಕರಣದ ತನಿಖೆಗೆ ಹೊಸ ಆಯಾಮ ಸಿಕ್ಕಿದೆ. [ಕಲ್ಲುಬಂಡೆಯಂತೆ ಕುಳಿತಿರುವ ಎಂಎಂ ಕಲಬುರ್ಗಿ ಹತ್ಯೆ ತನಿಖೆ]

ಈ ಮೂರು ಹತ್ಯೆ ಪ್ರಕರಣದಲ್ಲಿ ತಾವಡೆ ಅವರು ಭಾಗಿಯಾದ ಆರೋಪವಿದ್ದು, ಆ ಬಗ್ಗೆ ತನಿಖೆ ನಡೆಯುತ್ತಿದೆ.ಆದರೆ, ವಿಧಿವಿಜ್ಞಾನ ಪ್ರಯೋಗಾಲಯ ಹತ್ಯೆಗೆ ಬಳಿಸಿದ ಬಂದೂಕಿನ ಬಗ್ಗೆ ನೀಡಿವ ವರದಿ ಬಗ್ಗೆ ಗೊಂದಲಗಳಿವೆ. ಆದ್ದರಿಂದ ಸ್ಕಾಟ್‌ಲ್ಯಾಂಡ್ ಪೊಲೀಸರ ಸಹಕಾರ ಪಡೆಯಲಾಗುತ್ತಿದೆ. [ಕಲಬುರ್ಗಿ ಹತ್ಯೆ ತನಿಖೆಗೆ ವಿಶೇಷ ತಂಡ ರಚನೆ]
ಗೊಂದಲಕ್ಕೆ ಕಾರಣವೇನು? : ಗೋವಿಂದ ಪನ್ಸಾರೆ ಅವರ ಹತ್ಯೆಗೆ 2 ಬಂದೂಕನ್ನು ಬಳಸಲಾಗಿದೆ. ದಾಬೋಲ್ಕರ್ ಮತ್ತು ಕಲಬುರ್ಗಿ ಅವರ ಹತ್ಯೆಗೂ ಇದೇ ಬಂದೂಕು ಬಳಸಲಾಗಿದೆ ಎಂಬುದು ತನಿಖೆಯಿಂದ ತಿಳಿದುಬಂದಿದೆ. [ಕಲಬುರ್ಗಿ ಹತ್ಯೆಯ ತನಿಖೆ ವಿಳಂಬಕ್ಕೆ ಯಾರು ಕಾರಣ?]
ಆದರೆ, ಮುಂಬೈನ ಪ್ರಯೋಗಾಲಯ ಒಂದೇ ಬಂದೂರು ಬಳಕೆ ಮಾಡಲಾಗಿದೆ ಎಂದು ಹೇಳಿದೆ. ಮೂವರ ಹತ್ಯೆಗೆ ಒಂದೇ ಬಂದೂಕು ಬಳಸಲಾಗಿದೆ ಎಂದು ಮುಂಬೈ ಪ್ರಯೋಗಾಲಯ ಹೇಳಿದೆ. ಆದ್ದರಿಂದ, ಸಿಬಿಐ ಮೂರನೇ ಅಭಿಪ್ರಾಯ ಸಂಗ್ರಹಣೆ ಮಾಡಲು ಸ್ಕಾಟ್‌ಲ್ಯಾಂಡ್ ಪೊಲೀಸರ ಸಹಕಾರ ಪಡೆಯಲಿದೆ.
ಸಿಐಡಿಯಿಂದ ವಿಚಾರಣೆ : ಕಲಬುರ್ಗಿ ಹತ್ಯೆ ತನಿಖೆ ನಡೆಸುತ್ತಿರುವ ಕರ್ನಾಟಕ ಸಿಐಡಿ ಅಧಿಕಾರಿಗಳ ತಂಡ ಡಾ.ವಿರೇಂದ್ರ ತಾವಡೆ ವಿಚಾರಣೆ ನಡೆಸುವ ಸಾಧ್ಯತೆ ಇದೆ. ಈಗಾಗಲೇ ಮಹಾರಾಷ್ಟ್ರ ಸರ್ಕಾರ ತನಿಖೆಗ ಸಹಕಾರ ನೀಡುತ್ತಿಲ್ಲ ಎಂದು ಸಿಐಡಿ ಆರೋಪ ಮಾಡುತ್ತಿದೆ.
2015ರ ಆಗಸ್ಟ್ 30ರಂದು ಧಾರವಾಡದ ಕಲ್ಯಾಣ ನಗರದ ನಿವಾಸದಲ್ಲಿ ಎಂ.ಎಂ.ಕಲಬುರ್ಗಿ ಅವರ ಹತ್ಯೆ ನಡೆದಿತ್ತು. ಮೊದಲು ಸ್ಥಳೀಯ ಪೊಲೀಸರು ತನಿಖೆ ಆರಂಭಿಸಿದ್ದರು. ನಂತರ ಸರ್ಕಾರ ತನಿಖೆಯನ್ನು ಸಿಐಡಿಗೆ ವಹಿಸಿತ್ತು.
-
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Asha Bosle Net Worth: ದೇಶ-ವಿದೇಶಗಳಲ್ಲಿ ರೆಸ್ಟೊರೆಂಟ್ಸ್, ನೂರಾರು ಕೋಟಿ ಒಡತಿ ಆಶಾ ಭೋಸ್ಲೆ ಒಟ್ಟು ಆಸ್ತಿ ವಿವರ ಹೀಗಿದೆ -
Summer Specail Train: ಮೈಸೂರಿನಿಂದ ಇಲ್ಲಿಗೆ ವಿಶೇಷ ಎಕ್ಸ್ಪ್ರೆಸ್ ರೈಲು, 3 ರಾಜ್ಯಗಳಿಗೆ ಅನುಕೂಲ












Click it and Unblock the Notifications