ಕಳಸಾ-ಬಂಡೂರಿ ಹೋರಾಟಕ್ಕೆ 300 ದಿನ, ನರಗುಂದ ಬಂದ್

Posted By:
Subscribe to Oneindia Kannada

ಗದಗ, ಮೇ 10 : ಕಳಸಾ ಬಂಡೂರಿ ನಾಲಾ ಯೋಜನೆ ಜಾರಿಗೊಳಿಸಲು ಒತ್ತಾಯಿಸಿ ನಡೆಸುತ್ತಿರುವ ಪ್ರತಿಭಟನೆ 300ನೇ ದಿನಕ್ಕೆ ಕಾಲಿಟ್ಟಿದೆ. ಸರ್ಕಾರದ ಮೇಲೆ ಒತ್ತಡ ಹೇರಲು ಮಂಗಳವಾರ ನರಗುಂದ ಬಂದ್‌ಗೆ ಕರೆ ನೀಡಲಾಗಿದೆ.

ನರಗುಂದ ಬಂದ್‌ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು ಪಟ್ಟಣಕ್ಕೆ ಆಗಮಿಸುವ ಎಲ್ಲಾ ರಸ್ತೆಗಳನ್ನು ಬಂದ್ ಮಾಡಲಾಗಿದೆ. ಸರ್ಕಾರಿ ಮತ್ತು ಖಾಸಗಿ ಬಸ್ ಸಂಚಾರ ಸಂಪೂರ್ಣವಾಗಿ ಸ್ಥಗಿತಗೊಂಡಿದೆ. ಅಂಗಡಿ ಮತ್ತು ಪೆಟ್ರೋಲ್ ಬಂಕ್‌ಗಳನ್ನು ಮುಚ್ಚಲಾಗಿದೆ. [ಪ್ರಧಾನಿ ಮೋದಿಗೆ ಪತ್ರ ಬರೆದ ಮುಖ್ಯಮಂತ್ರಿ ಸಿದ್ದರಾಮಯ್ಯ]

nargund bandh

300 ದಿನಗಳ ಹಿಂದೆ ನರಗುಂದದಲ್ಲಿ ಕಳಸಾ ಬಂಡೂರಿ ನಾಲಾ ಯೋಜನೆ ಜಾರಿಗೊಳಿಸಲು ಒತ್ತಾಯಿಸಿ ಪ್ರತಿಭಟನೆ ಆರಂಭಿಸಲಾಯಿತು. ನಂತರ ಈ ಕಿಚ್ಚು ಧಾರವಾಡ, ಹುಬ್ಬಳ್ಳಿ, ಗದಗಕ್ಕೂ ಹಬ್ಬಿತು. ಆದರೆ, ಇದುವರೆಗೂ ಸಮಸ್ಯೆಗೆ ಮಾತ್ರ ಪರಿಹಾರ ಸಿಕ್ಕಿಲ್ಲ. [ಏನಿದು ಕಸಳಾ-ಬಂಡೂರಿ ಯೋಜನೆ?]

ಪ್ರಧಾನಿಗೆ ಪತ್ರ : ಕಳಸಾ ಬಂಡೂರಿ ನಾಲಾ ಯೋಜನೆಯ ವಿವಾದವನ್ನು ನ್ಯಾಯಾಧೀಕರಣದ ಹೊರಗೆ ಬಗೆಹರಿಸಿಕೊಳ್ಳಲು ಮೂರು ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ಕರೆಯಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕಳೆದ ವಾರ ಪತ್ರ ಬರೆದಿದ್ದಾರೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Various farmer's organizations called for Nargund bandh on May 10, 2016. Bandh called for clearance of Kalasa Banduri Nala Project. Farmers darana in Nargund, Gadag entered the 300 day.
Please Wait while comments are loading...