ಪ್ರಧಾನಿ ಮೋದಿಗೆ ಪತ್ರ ಬರೆದ ಮುಖ್ಯಮಂತ್ರಿ ಸಿದ್ದರಾಮಯ್ಯ

Posted By:
Subscribe to Oneindia Kannada

ಬೆಂಗಳೂರು, ಮೇ 02 : ಕಳಸಾ ಬಂಡೂರಿ ನಾಲಾ ಯೋಜನೆಯ ವಿವಾದವನ್ನು ನ್ಯಾಯಾಧೀಕರಣದ ಹೊರಗೆ ಬಗೆಹರಿಸಿಕೊಳ್ಳಲು ಮೂರು ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ಕರೆಯಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಏ.26ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ. ಏಪ್ರಿಲ್ 2ರಂದು ಸರ್ವಪಕ್ಷಗಳ ಸಭೆ ಕರೆದು ಕಳಸಾ ಬಂಡೂರಿ ನಾಲಾ ಯೋಜನೆಯ ವಿಚಾರದಲ್ಲಿ ಮತ್ತೊಮ್ಮೆ ಪ್ರಧಾನ ಮಂತ್ರಿಗಳ ಮಧ್ಯಸ್ಥಿಕೆಗೆ ಮನವಿ ಮಾಡುವ ಕುರಿತು ನಿರ್ಣಯ ಕೈಗೊಳ್ಳಲಾಗಿದೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ. [ಕಳಸಾ ಬಂಡೂರಿ ಯೋಜನೆ, ಸರ್ವ ಪಕ್ಷ ಸಭೆ ವಿಫಲ]

siddaramaiah

1977ರಲ್ಲಿ ತೆಲಗು-ಗಂಗಾ ಯೋಜನೆ ವಿವಾದ ವಾದ ಸಂದರ್ಭದಲ್ಲಿ ಪ್ರಧಾನ ಮಂತ್ರಿಗಳು ಮಧ್ಯಸ್ಥಿಕೆ ವಹಿಸಿದ ಉದಾಹರಣೆ ಇದೆ. ಕಳಸಾ ಬಂಡೂರಿ ಯೋಜನೆ ವಿವಾದವನ್ನು ಬಗೆಹರಿಸಲು ಮೂರು ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ಕರೆಯಬೇಕು ಎಂದು ಸಿದ್ದರಾಮಯ್ಯ ಮನವಿ ಮಾಡಿದ್ದಾರೆ. [ಏನಿದು ಕಸಳಾ-ಬಂಡೂರಿ ಯೋಜನೆ?]

ನದಿ ನೀರಿನ ವಿವಾದವನ್ನು ನ್ಯಾಯಾಧೀಕರಣದ ಹೊರಗೆ ಬಗೆಹರಿಸಿಕೊಳ್ಳಲು ರಾಜ್ಯ ಬಯಸಿದೆ. ಇದಕ್ಕಾಗಿ ಗೋವಾ ರಾಜ್ಯದ ಮುಖ್ಯಮಂತ್ರಿಗಳಿಗೆ ಪತ್ರ ಬರೆಯಲಾಗಿತ್ತು. ಆದರೆ, ಅವರು ನ್ಯಾಯಾಧೀಕರಣದಲ್ಲೇ ಬಗೆಹರಿಸಿಕೊಳ್ಳುವ ಇಚ್ಛೆ ವ್ಯಕ್ತಪಡಿಸಿದ್ದಾರೆ. [ಮಹದಾಯಿ ಜಲವಿವಾದ : ಮುರಿದು ಬಿತ್ತು ಮಾತುಕತೆ ಪ್ರಸ್ತಾಪ?]

ಒಕ್ಕೂಟ ವ್ಯವಸ್ಥೆಯ ಮುಖ್ಯಸ್ಥರಾಗಿರುವ ನೀವು ಗೋವಾ, ಮಹಾರಾಷ್ಟ್ರ, ಕರ್ನಾಟಕ ಮುಖ್ಯಮಂತ್ರಿಗಳ ಸಭೆ ಕರೆದು, ವಿವಾದವನ್ನು ಮಾತುಕತೆ ಮೂಲಕ ಬಗೆಹರಿಸುತ್ತೀರಿ ಎಂಬ ವಿಶ್ವಾಸವಿದೆ ಎಂದು ಸಿದ್ದರಾಮಯ್ಯ ಅವರು ಪತ್ರದಲ್ಲಿ ತಿಳಿಸಿದ್ದಾರೆ.

ವಿಚಾರಣೆ ಮುಗಿಸುವ ಭರವಸೆ : ಮತ್ತೊಂದು ಕಳಸಾ ಬಂಡೂರಿ ನಾಲಾ ಯೋಜನೆ ವಿವಾದದ ಪ್ರಕರಣವನ್ನು ಶೀಘ್ರವಾಗಿ ಇತ್ಯರ್ಥ ಮಾಡಬೇಕು ಎಂದು ಕರ್ನಾಟಕ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಧೀಕರಣ ಪರಿಗಣಿಸಿದೆ. ಸೋಮವಾರ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಜೆ.ಎಸ್. ಪಾಂಚಾಲ್ ನೇತೃತ್ವದ ಪೀಠ, ಒಂದು ವರ್ಷದೊಳಗೆ ಪ್ರಕರಣವನ್ನು ಇತ್ಯರ್ಥಪಡಿಸುವ ಭರವಸೆ ನೀಡಿದೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Karnataka chief minister Siddaramaiah requested Prime Minister Narendra Modi to call the meeting of three state chief ministers to solve Kalasa Banduri dispute.
Please Wait while comments are loading...