ಮಾ.26ರಂದು ರಾಜ್ಯಾದ್ಯಂತ ರೈಲು ಸಂಚಾರವಿಲ್ಲ

Posted By:
Subscribe to Oneindia Kannada

ಹಾಸನ,ಮಾರ್ಚ್,18: ಕಳಸಾ ಬಂಡೂರಿ ಯೋಜನೆ ಜಾರಿಗೆ ಒತ್ತಾಯಿಸಿ ರೈತರು ನಡೆಸುತ್ತಿರುವ ಹೋರಾಟಕ್ಕೆ ಬೆಂಬಲ ನೀಡಲು ನಿರ್ಧರಿಸಿದ ವಾಟಾಳ್ ಪಕ್ಷದ ನಾಯಕ ವಾಟಾಳ್ ನಾಗರಾಜ್ ಅವರು ಮಾರ್ಚ್ 26ರಂದು ಕನ್ನಡ ಒಕ್ಕೂಟದ ನೇತೃತ್ವದಲ್ಲಿ ರೈಲು ತಡೆ ನಡೆಸಲು ನಿರ್ಧರಿಸಿದ್ದಾರೆ.

ಗುರುವಾರ ಹಾಸನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ವಾಟಾಳ್ ನಾಗರಾಜ್, 'ಕಳಸಾ ಬಂಡೂರಿ ಯೋಜನೆ ಬಗ್ಗೆ ಕೇಂದ್ರ ಸರ್ಕಾರಕ್ಕೆ ತಿಳಿಸಿಕೊಡುವ ಉದ್ದೇಶದಿಂದ ರೈಲು ತಡೆ ಹಮ್ಮಿಕೊಳ್ಳಲಿದ್ದೇವೆ' ಎಂದು ತಿಳಿಸಿದ್ದಾರೆ.[ಕಳಸಾ-ಬಂಡೂರಿಗಾಗಿ ಏ.18ರಂದು ಕರ್ನಾಟಕ ಬಂದ್]

Kalasa banduri project Rail bandh called on March 26th

ಮಾರ್ಚ್ 26ರಂದು ಬೆಳಿಗ್ಗೆ 6ರಿಂದ ಸಂಜೆ 6ರವರೆಗೆ ರಾಜ್ಯದ ಎಲ್ಲಾ ರೈಲು ನಿಲ್ದಾಣಗಳಲ್ಲಿ ರೈಲು ಸಂಚಾರ ಸ್ಥಗಿತಗೊಳಿಸಲಾಗುವುದು. ಈ ಹೋರಾಟಕ್ಕೆ ರೈತ ಸಂಘ, ಎಂಡಪಂಥೀಯ ಎಲ್ಲ ಪಕ್ಷಗಳು, ಸಂಘಟನೆಗಳು ಸೇರಿದಂತೆ ಸುಮಾರು 650ಕ್ಕೂ ಹೆಚ್ಚು ಸಂಘಟನೆಗಳು ಬೆಂಬಲ ನೀಡಲು ಮುಂದಾಗಿವೆ ಎಂದರು.[ತೀವ್ರಗೊಂಡ ಕಳಸಾ ಹೋರಾಟ : ಹುಬ್ಬಳ್ಳಿಯಲ್ಲಿ ರೈಲು ಬಂದ್]

ಕಳಸಾ ಬಂಡೂರಿ ಹೋರಾಟ ಆರಂಭವಾಗಿ 250 ದಿನಗಳು ಸಂದಿವೆ. ಹೋರಾಟ ಆರಂಭವಾದ ಮೇಲೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಎರಡು ಬಾರಿ ಕರ್ನಾಟಕಕ್ಕೆ ಬಂದು ಹೋಗಿದ್ದಾರೆ. ಆದರೆ ಇದರ ಬಗ್ಗೆ ಪ್ರಧಾನಿ ಅವರು ತಲೆಕೆಡಿಸಿಕೊಂಡಿಲ್ಲ.[ಕಳಸಾ ಬಂಡೂರಿ, ಪ್ರಹ್ಲಾದ್ ಜೋಶಿ ಮೇಲೆ ರೈತರ ಕೆಂಗಣ್ಣು]

ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನಾವೀಸ್, ಆಂಧ್ರಪ್ರದೇಶ ಮುಖ್ಯಮಂತ್ರಿ ನಾರಾ ಚಂದ್ರಬಾಬು ನಾಯ್ಡು ಅವರನ್ನು ಆಹ್ವಾನಿಸಿ ಮಾತುಕತೆ ನಡೆಸಬೇಕು ಎಂದು ಒತ್ತಾಯಿಸಿದರು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
Vatal Party leader Vatal Nagaraj and Pro-Kannada organizations have called rail bandh across the state on March 26th.
Please Wait while comments are loading...