ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಪ್ರತ್ಯೇಕ ರಾಜ್ಯ ಕೂಗಿಗೆ ಸೇರಿಕೊಂಡ ಕಳಸಾ ಬಂಡೂರಿ ಹೋರಾಟ

By Vanitha
|
Google Oneindia Kannada News

ಹುಬ್ಬಳ್ಳಿ, ಅಕ್ಟೋಬರ್, 15 : ಕಳಸಾ ಬಂಡೂರಿ ನಾಲಾ ಯೋಜನೆ ಜಾರಿಗೆ ಒತ್ತಾಯಿಸಿ ಮೂರು ತಿಂಗಳಿನಿಂದ ನಡೆಯುತ್ತಿರುವ ಹೋರಾಟ ಇದೀಗ ಪ್ರತ್ಯೇಕ ರಾಜ್ಯದ ಕೂಗಿಗೆ ಪರಿವರ್ತನೆಗೊಂಡಿದೆ. ಸಾಕಷ್ಟು ಸಂಘ-ಸಂಸ್ಥೆಗಳು ರೈತರ ಹೋರಾಟಕ್ಕೆ ಬೆಂಬಲ ನೀಡಿದ್ದು, ಇದೀಗ ಪ್ರತ್ಯೇಕ ರಾಜ್ಯದ ಹೋರಾಟಕ್ಕೆ ಮುನ್ನುಡಿ ಬರೆಯುತ್ತಿದ್ದಾರೆ.

ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಈ ಕುರಿತು ಯಾವುದೇ ಸೂಕ್ತ ನಿರ್ಧಾರ ತೆಗೆದುಕೊಳ್ಳದೇ ರೈತರ ಹೋರಾಟವನ್ನು ಕಡೆಗಣಿಸುತ್ತಿವೆ. ಇದು ಮುಂದುವರೆದರೆ ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯದ ಕುರಿತು ಮತ್ತೊಂದು ಹೋರಾಟ ಶೀಘ್ರದಲ್ಲಿಯೇ ಆರಂಭಿಸಬೇಕಾಗುತ್ತದೆ ಎಂದು ಖಡಕ್ಕಾಗಿ ಸರ್ಕಾರಕ್ಕೆ ಧಾರವಾಡ ಮನ್ಸೂರಿನ ಬಸವರಾಜ ದೇವರು ಎಚ್ಚರಿಸಿದ್ದಾರೆ.[ನಿಮಗಿದು ತಿಳಿದಿರಲಿ: ಕಳಸಾ ಬಂಡೂರಿ ಕುಡಿಯುವ ನೀರು ಹೋರಾಟ]

Kalasa banduri protest is turned out a seprate state issue in hubballi

ಮುಖ್ಯಮಂತ್ರಿ ಸಿದ್ದರಾಮಯ್ಯ ಅಕ್ಟೋಬರ್ 16ರ ಶುಕ್ರವಾರ ಸರ್ವಪಕ್ಷ ನಾಯಕರ ಸಭೆ ಕರೆದಿದ್ದು, ಮತ್ತೊಮ್ಮೆ ಪ್ರಧಾನಿ ಬಳಿ ನಿಯೋಗ ಹೋಗುವ ಬಗ್ಗೆ ಚರ್ಚಿಸಲಾಗುವುದು. ಜೊತೆಗೆ ರಾಜ್ಯದಿಂದ ಆಯ್ಕೆಯಾದ ಸಂಸತ್ ಸದಸ್ಯರು ಈ ಹೋರಾಟಕ್ಕೆ ಸೂಕ್ತ ಬೆಂಬಲ ನೀಡಬೇಕೆಂದು ಕೋರಿದ್ದಾರೆ.

ಮಧ್ಯಂತರ ಅರ್ಜಿ ಸಲ್ಲಿಸಿ : ಕಳಸಾ ಯೋಜನೆ ಜಾರಿಯಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ರಾಜಕೀಯ ಆಟ ಆಡುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಹುಬ್ಬಳ್ಳಿಯಲ್ಲಿ ಆರೋಪಿಸಿದ್ದಾರೆ.[ನರೇಂದ್ರ ಮೋದಿಗೆ ಕರ್ನಾಟಕದ ಕೂಗು ಕೇಳಿಸಲಿ: ಚಿತ್ರರಂಗ]

ಈ ಹಿಂದೆ ನಗರಕ್ಕೆ ಬಂದಿದ್ದ ಮುಖ್ಯಮಂತ್ರಿ ಸಿದ್ಧರಾಮಯ್ಯ ರೈತ ಹೋರಾಟಗಾರರಿಗೆ ಇನ್ನೆರಡು ದಿನಗಳಲ್ಲಿಯೇ ಮಧ್ಯಂತರ ಅಜರ್ಿ ಸಲ್ಲಿಸುತ್ತೇನೆ ಎಂದಿದ್ದರು. ಆದರೆ ಹದಿನೈದು ಇಪ್ಪತ್ತು ದಿನಗಳಾದರೂ ಈ ಬಗ್ಗೆ ಮುಖ್ಯಮಂತ್ರಿಗಳು ಚಕಾರವೆತ್ತುತ್ತಿಲ್ಲ. ಈ ಬಗ್ಗೆ ಕೇಳಿದವರಿಗೆ ಮೋದಿ ಸರ್ಕಾರದತ್ತ ಬೆರಳು ತೋರಿಸಿ ಕಾಲಹರಣ ಮಾಡುತ್ತಿದ್ದಾರೆ ಎಂದು ದೂರಿದರು.

English summary
Kalasa banduri protest is turned out a seperate state issue on Wednesday. Chief Minister Siddaramaiah called a party leaders meeting on Friday
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X