ಶ್ರೀರಾಮಸೇನೆ ಉಲ್ಲೇಖ ಸರಿ ಅಲ್ಲ: ಚೆನ್ನವೀರ ಕಣವಿ ಸ್ಪಷ್ಟನೆ
ಧಾರವಾಡ, ಸೆಪ್ಟೆಂಬರ್. 21: ಪ್ರೋ. ಡಾ.ಎಂ.ಎಂ.ಕಲಬುರ್ಗಿ ಹತ್ಯೆ ಖಂಡಿಸಿ ಧಾರವಾಡದಲ್ಲಿ ಪ್ರತಿಭಟನೆ ನಡೆಸಿದ ವೇಳೆ ಸಲ್ಲಿಸಿದ ಮನವಿಯಲ್ಲಿ ಶ್ರೀರಾಮ ಸೇನೆಯ ಹೆಸರು ಉಲ್ಲೇಖವಾಗಿದ್ದರೆ ಅದು ಸರಿಯಲ್ಲ ಎಂದು ಹಿರಿಯ ಸಾಹಿತಿ ಡಾ.ಚೆನ್ನವೀರ ಕಣವಿ ಮತ್ತು ವಿಮರ್ಶಕ ಡಾ.ಗಿರಡ್ಡಿ ಗೋವಿಂದರಾಜ ಸ್ಪಷ್ಟನೆ ನೀಡಿದ್ದಾರೆ.
ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಸಾಹಿತಿಗಳು, ಡಾ. ಕಲಬುರ್ಗಿ ಅವರ ಹತ್ಯೆ ಖಂಡಿಸಿ ಧಾರವಾಡದಲ್ಲಿ ಸಾಹಿತಿಗಳು, ಕಲಾವಿದರು, ಸಾಹಿತ್ಯಾಭಿಮಾನಿಗಳು ಪ್ರತಿಭಟನೆ ನಡೆಸಿದ್ದರು. ಸೆಪ್ಟೆಂಬರ್ 14 ರಂದು ಜಿಲ್ಲಾಧಿಕಾರಿಗೆ ಸಲ್ಲಿಸಿದ ಮನವಿಯನ್ನು ಮೊದಲೇ ಓದಿ ನೋಡುವ ಅವಕಾಶವನ್ನು ಸಂಘಟಕರು ನಮಗೆ ನೀಡಿರಲಿಲ್ಲ. ಮನವಿ ಪತ್ರವನ್ನು ಓದಲು ಅವಕಾಶ ನೀಡದೆ, ಸಂಘಟಕರೊಬ್ಬರು ನಮ್ಮ ಸಹಿ ಪಡೆದಿದ್ದು ಪ್ರಮಾದವಾಗಿರಬೇಕು ಎಂದು ತಿಳಿಸಿದ್ದಾರೆ.[ಕಲಬುರ್ಗಿ ಹತ್ಯೆಯ ಸಂಚು ರೂಪಿಸಿದ್ದು ರುದ್ರ ಪಾಟೀಲ್?]

ಒಂದು ವೇಳೆ ಮನವಿ ಪತ್ರದಲ್ಲಿ ಶ್ರೀರಾಮ ಸೇನೆಯ ಹೆಸರು ಉಲ್ಲೇಖಿಸಿದ್ದರೆ ಅದು ತಪ್ಪ. ನಾವು ಯಾವ ಸಂಘಟನೆ ವಿರುದ್ಧ ದೂರು ಸಲ್ಲಿಕೆ ಮಾಡುತ್ತಿಲ್ಲ. ಹತ್ಯೆ ತನಿಖೆ ಸಮಗ್ರವಾಗಿ ನಡೆಯುಬೇಕು ಎಂಬುದು ನಮ್ಮ ಉದ್ದೇಶ ಎಂದು ತಿಳಿಸಿದ್ದಾರೆ.[ಕಲಬುರ್ಗಿ ಹತ್ಯೆ ಸುಳಿವು ಕೊಟ್ಟವರಿಗೆ 5 ಲಕ್ಷ ಬಹುಮಾನ]
ಪ್ರತಿಭಟನೆ ನಡೆಸಿ, ತಮ್ಮ ವಿರುದ್ಧ ಮಾನಹಾನಿಕರ ನಿಂದನೆ ಮಾಡಿದ್ದಾರೆ ಎಂದು ಆರೋಪಿಸಿದ್ದ ಶ್ರೀರಾಮ ಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಪ್ರಮುಖರ ವಿರುದ್ಧ ನೋಟಿಸ್ ನೀಡುವುದಾಗಿ ಹೇಳಿದ್ದರು. ಆದರೆ ಈಗ, ಡಾ. ಗಿರಡ್ಡಿ ಗೋವಿಂದರಾಜ ಹಾಗೂ ಚೆನ್ನವೀರ ಕಣವಿ ಸ್ಪಷ್ಟನೆ ನೀಡಿರುವುದರಿಂದ ಅವರ ವಿರುದ್ಧ ನೋಟಿಸ್ ನೀಡದಿರಲು ನಿರ್ಧರಿಸಿದ್ದಾರೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications