ಸಚಿವ ಸ್ಥಾನಕ್ಕಾಗಿ ಬೇಡಿಕೆ ಇಟ್ಟ ಸಂತೋಷ್ ಲಾಡ್!

ಬೆಂಗಳೂರು, ಜೂ. 04 : ಬಹಳ ದಿನಗಳ ನಂತರ ಮಾಧ್ಯಮಗಳ ಮುಂದೆ ಬಂದಿರುವ ಮಾಜಿ ಸಚಿವ ಮತ್ತು ಕಲಘಟಗಿ ಶಾಸಕ ಸಂತೋಷ್ ಲಾಡ್ ಸಚಿವ ಸ್ಥಾನದ ಬೇಡಿಕೆ ಮುಂದಿಟ್ಟಿದ್ದಾರೆ. ಸಚಿವ ಸಂಪುಟ ಪುನರ್‌ ರಚನೆ ಮಾಡುವಾಗ ತಮ್ಮ ಹೆಸರನ್ನು ಪರಿಶೀಲನೆ ಮಾಡಬೇಕು ಎಂದು ಪಕ್ಷದ ಹೈಮಾಂಡ್ ನಾಯಕರಿಗೆ ಮನವಿ ಮಾಡಿದರು.

ಅಕ್ರಮ ಗಣಿಗಾರಿಕೆ ಆರೋಪ ಎದುರಿಸುತ್ತಿದ್ದ ವಾರ್ತಾ ಮತ್ತು ಮೂಲಸೌಕರ್ಯ ಸಚಿವ ಸಂತೋಷ್ ಲಾಡ್, 2013ರ ನವೆಂಬರ್‌ನಲ್ಲಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ನಂತರ ಮಾಧ್ಯಮಗಳ ಜೊತೆ ಮಾತನಾಡದೇ ಮೌನಕ್ಕೆ ಶರಣಾಗಿದ್ದ ಅವರು ಗುರುವಾರ ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿದರು. [ಸಂತೋಷ್ ಲಾಡ್ ರಾಜೀನಾಮೆ]

santosh lad

ಪತ್ರಿಕಾಗೋಷ್ಠಿ ಮುಖ್ಯಾಂಶಗಳು

* ಅಕ್ರಮ ಅದಿರು ಗಣಿಗಾರಿಕೆ ಪ್ರಕರಣದಲ್ಲಿ ತಮ್ಮ ಕಂಪನಿ ವಿರುದ್ಧದ ವಿಚಾರಣೆಗೆ ಸುಪ್ರೀಂಕೋರ್ಟ್ ತಡೆ ನೀಡಿದೆ. ತಾವು ಅಕ್ರಮ ಗಣಿಗಾರಿಕೆಯಲ್ಲಿ ಭಾಗಿಯಾಗಿಲ್ಲ. ಆದ್ದರಿಂದ ಸಚಿವ ಸ್ಥಾನ ನೀಡಬೇಕು.[ಲಾಡ್ ರಾಜೀನಾಮೆಗೆ ಇವರು ಕಾರಣ]

* ವಿ.ಎಸ್.ಲಾಡ್ ಅಂಡ್ ಕಂಪನಿ ವಿರುದ್ಧದ ಆರೋಪಗಳ ಬಗ್ಗೆ ನ್ಯಾಯಾಲಯ ಪುನರ್ ಪರಿಶೀಲಿಸಿ ವಿಚಾರಣೆಗೆ ತಡೆ ನೀಡಿದೆ. ಅಕ್ರಮ ಅದಿರು ಸಾಗಾಣೆಯಲ್ಲಿ ತಮ್ಮ ಪಾತ್ರವಿಲ್ಲ. ತಾಂತ್ರಿಕ ಕಾರಣಕ್ಕಾಗಿ ನನ್ನ ಮೇಲೆ ಆರೋಪ ಬಂದಿತ್ತು.

* ಕೇದಾರನಾಥದಲ್ಲಿ ಪ್ರವಾಹ ಉಂಟಾದಾಗ ಜೀವದ ಹಂಗು ತೊರೆದು ಕನ್ನಡಿಗರನ್ನು ರಕ್ಷಣೆ ಮಾಡಿದ್ದೇನೆ. ಸಚಿವನಾಗಿ ಉತ್ತಮ ಕೆಲಸ ಮಾಡಿದ್ದೇನೆ ಆದ್ದರಿಂದ ಸಚಿವ ಸ್ಥಾನವನ್ನು ನೀಡಬೇಕು.

* ಸಚಿವ ಸಂಪುಟ ಪುನರ್‌ ರಚನೆ ಮಾಡುವಾಗ ತಮ್ಮ ಹೆಸರನ್ನು ಪರಿಶೀಲನೆ ಮಾಡಬೇಕು ಎಂದು ಪಕ್ಷದ ಹೈಮಾಂಡ್ ನಾಯಕರಿಗೆ ಮನವಿ ಮಾಡುತ್ತೇನೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+