ಕಲ್ಲಪ್ಪ ಹಂಡಿಬಾಗ್ ಪ್ರಕರಣ: ಪ್ರವೀಣ್ ಖಾಂಡ್ಯಗೆ ಜಾಮೀನು

Posted By:
Subscribe to Oneindia Kannada

ಬೆಂಗಳೂರು, ಡಿಸೆಂಬರ್ 16: ಡಿವೈಎಸ್‌ಪಿ ಕಲ್ಲಪ್ಪ ಹಂಡಿಭಾಗ್ ಆತ್ಮಹತ್ಯೆ ಪ್ರಕರಣದ ಪ್ರಮುಖ ಆರೋಪಿ ಪ್ರವೀಣ್‌ ಖಾಂಡ್ಯಗೆ ಹೈಕೋರ್ಟಿನಿಂಡ ಶುಕ್ರವಾರ(ಡಿಸೆಂಬರ್ 16)ದಂದು ನಿರೀಕ್ಷಣಾ ಜಾಮೀನು ಮಂಜೂರಾಗಿದೆ.

ಜುಲೈ 5ರಂದು ಕಲ್ಲಪ್ಪ ಹಂಡಿಭಾಗ್ ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ಆತ್ಮಹತ್ಯೆ ಪ್ರಕರಣದಲ್ಲಿ ಆರೋಪಿಯಾಗಿರುವ ಹಿಂದೂ ಪರ ಸಂಘಟನೆಯ ಮುಖಂಡ ಪ್ರವೀಣ್ ಖಾಂಡ್ಯನಿಗಾಗಿ ಸಿಐಡಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. [ಕಲ್ಲಪ್ಪ ಪ್ರಕರಣದಲ್ಲಿ ಕಿಡ್ನಾಪ್ ಆಗಿದ್ದ ತೇಜಸ್ ಹೇಳಿದ್ದೇನು?]

ಈ ನಡುವೆ ಚಿಕ್ಕಮಗಳೂರಿನ 2ನೇ ಹೆಚ್ಚುವರಿ ಜಿಲ್ಲಾ ಪ್ರಧಾನ ಸೆಷನ್ಸ್ ನ್ಯಾಯಾಲಯದಲ್ಲಿ ಖಾಂಡ್ಯ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿ ತಿರಸ್ಕಾರಗೊಂಡಿತ್ತು. ಹೀಗಾಗಿ ಹೈಕೋರ್ಟ್ ಮೇಟ್ಟಿಲೇರಿದ್ದ ಖಾಂಡ್ಯಗೆ ಶುಕ್ರವಾರ ಶುಭ ಸುದ್ದಿ ಸಿಕ್ಕಿದೆ. [ಕಲ್ಲಪ್ಪ ಸಾವಿಗೆ ಕಿರುಕುಳ ಕಾರಣವಲ್ : ಎಸ್ಪಿ ಸಂತೋಷ್]

Kallappa Handibag suicide case: HC grants bail to Praveen Khandya

'ಆತ್ಮಹತ್ಯೆ ಪ್ರಕರಣದಲ್ಲಿ ನನ್ನ ಪಾತ್ರವಿಲ್ಲ. ಸಿಐಡಿ ಅಧಿಕಾರಿಗಳು ಈಗಾಗಲೇ ಪ್ರಕರಣದ ತನಿಖೆ ಭಾಗಶಃ ಪೂರ್ಣಗೊಳಿಸಿದ್ದಾರೆ. ಮುಂದಿನ ತನಿಖೆಗೆ ಸಂಪೂರ್ಣ ಸಹಕಾರ ನೀಡುತ್ತೇನೆ ಜಾಮೀನು ನೀಡಿ' ಎಂದು ಪ್ರವೀಣ್ ಪರ ವಕೀಲರು, ನ್ಯಾಯಮೂರ್ತಿ ಬಿ. ಶ್ರೀನಿವಾಸೇಗೌಡ ಅವರಿದ್ದ ಏಕಸದಸ್ಯ ಪೀಠಕ್ಕೆ ಮನವಿ ಸಲ್ಲಿಸಿದ್ದರು. ಪ್ರವೀಣ್ ಸಲ್ಲಿಸಿದ್ದ ಮನವಿಯನ್ನು ನ್ಯಾಯಪೀಠ ಪುರಸ್ಕರಿಸಿ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.

ಉದ್ಯಮಿಯನ್ನು ಅಪಹರಣ ಮಾಡಿದ ಆರೋಪ ಎದುರಿಸುತ್ತಿದ್ದ ಚಿಕ್ಕಮಗಳೂರು ಡಿವೈಎಸ್‌ಪಿ ಕಲ್ಲಪ್ಪ ಹಂಡಿಭಾಗ್ ಅವರು ಜುಲೈ 5ರಂದು ಬೆಳಗಾವಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಸರ್ಕಾರ ಆತ್ಮಹತ್ಯೆ ಪ್ರಕರಣದ ತನಿಖೆಯನ್ನು ಸಿಐಡಿಗೆ ಒಪ್ಪಿಸಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಿರುವ ಸಿಐಡಿ, ವಿಚಾರಣೆ ನಡೆಸಿದೆ. (ಒನ್ಇಂಡಿಯಾ ಸುದ್ದಿ)

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ - ನೋಂದಣಿ ಉಚಿತ!

English summary
Praveen Khandya an activist of pro-Hindu organization gets anticipatory bail today(December 16) from Karnataka High Court. Praveen Khandya is the main accused in DySP Kallappa Handibag suicide case.
Please Wait while comments are loading...