• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ವಿವಾದವಾದ ಕಲ್ಯಾಣ ಕರ್ನಾಟಕ ವಿಮೋಚನಾ ದಿನಾಚರಣೆ ಆದೇಶ

|

ಬೆಂಗಳೂರು, ಸೆಪ್ಟೆಂಬರ್ 12 : ಹೈದರಾಬಾದ್-ಕರ್ನಾಟಕವನ್ನು ಕಲ್ಯಾಣ ಕರ್ನಾಟಕ ಎಂದು ಬದಲಾವಣೆ ಮಾಡಲು ಸರ್ಕಾರ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಿದೆ. ಸೆ. 17ರಂದು ನಡೆಯಬೇಕಿರುವ ಹೈದರಾಬಾದ್-ಕರ್ನಾಟಕ ವಿಮೋಚನಾ ದಿನದ ಆಚರಣೆ ಈಗ ವಿವಾದಕ್ಕೆ ಕಾರಣವಾಗಿದೆ.

ಹೈದರಾಬಾದ್-ಕರ್ನಾಟಕ ವಿಮೋಚನಾ ದಿನವನ್ನು 'ಕಲ್ಯಾಣ ಕರ್ನಾಟಕ ವಿಮೋಚನಾ ದಿನ'ವಾಗಿ ಆಚರಣೆ ಮಾಡಬೇಕು ಎಂದು ಸರ್ಕಾರ ಆದೇಶ ಹೊರಡಿಸಿದೆ. ಇದಕ್ಕೆ ಕಾಂಗ್ರೆಸ್‌ನ ಶಾಸಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಹೈದರಾಬಾದ್ ಕರ್ನಾಟಕ ಇನ್ನು ಮುಂದೆ ಕಲ್ಯಾಣ ಕರ್ನಾಟಕ

ಮಾಜಿ ಸಚಿವ ಪ್ರಿಯಾಂಕ್‌ ಖರ್ಗೆ, "ಹೈದರಾಬಾದ್-ಕರ್ನಾಟಕ ಎಂಬ ಪದ ಎಲ್ಲೆಲ್ಲಿ ಬಳಕೆಯಾಗಿದೆಯೋ ಅಲ್ಲಿ ಕಲ್ಯಾಣ ಕರ್ನಾಟಕ ಎಂದು ವಿವೇಚನೆ ಇಲ್ಲದೆ ಬಳಕೆ ಮಾಡಲಾಗಿದೆ. ಇದರಿಂದ ಸಾಕಷ್ಟು ಗೊಂದಲಗಳಾಗಿವೆ" ಎಂದು ಹೇಳಿದ್ದಾರೆ.

ಹೈ-ಕರ್ನಾಟಕಕ್ಕೆ ವಿವೇಚನಾ ಅನುದಾನ: ವಿಜಯನಗರಕ್ಕೆ ಬಂಪರ್ ಲಾಟರಿ

"ಕಲ್ಯಾಣ ಕರ್ನಾಟಕದಿಂದಲೇ ವಿಮೋಚನೆ ಎಂಬ ತಪ್ಪು ಅರ್ಥವೂ ಹೊರಹೊಮ್ಮಲಿದೆ. ಹೀಗಾಗಿ ಈ ಗೊಂದಲವನ್ನು ಬಗೆಹರಿಸುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಮನವಿ ಮಾಡುತ್ತೇವೆ" ಎಂದು ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

ಹೈ-ಕ ವಿಶೇಷ ಸ್ಥಾನಮಾನಕ್ಕೆ ಲೋಕಸಭೆ ಅಸ್ತು

ಶಾಸಕರ ಸಮರ್ಥನೆ : ಸೇಡಂ ಕ್ಷೇತ್ರದ ಬಿಜೆಪಿ ಶಾಸಕ ರಾಜಕುಮಾರ ಪಾಟೀಲ ತೇಲ್ಕೂರ ಸರ್ಕಾರದ ತೀರ್ಮಾನವನ್ನು ಸಮರ್ಥಿಸಿಕೊಂಡಿದ್ದಾರೆ. "ಸರ್ಕಾರದ ಆದೇಶದಲ್ಲಿ ಗೊಂದಲವಿಲ್ಲ. ಕಲ್ಯಾಣ ಕರ್ನಾಟಕದ ಭಾಗವಾಗಿದ್ದ ಈ ಪ್ರದೇಶ ಹೈದರಾಬಾದ್ ನಿಜಾಮರ ಆಳ್ವಿಕೆ ಒಳಪಟ್ಟಿತ್ತು" ಎಂದು ಹೇಳಿದ್ದಾರೆ.

"1948ರ ಸೆಪ್ಟೆಂಬರ್ 17ರಂದು ವಿಲೀನಗೊಂಡಿತು ಈ ವಿಮೋಚನಾ ದಿನವನ್ನು ಸಂಭ್ರಮದಿಂದ ಆಚರಣೆ ಮಾಡಬೇಕು. ಮೊಸರಿನಲ್ಲಿ ಕಲ್ಲು ಹುಡುಕಬಾರದು" ಎಂದು ಕಾಂಗ್ರೆಸ್‌ ನಾಯಕರಿಗೆ ತಿರುಗೇಟು ಕೊಟ್ಟಿದ್ದಾರೆ.

English summary
Karnataka government approved to rename Hyderabad-Karnataka region Kalyana Karnataka. The celebration of Kalyana Karnataka on September 17 sparked controversy.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X