Kalyana Karnataka: ಕಲ್ಯಾಣ ಕರ್ನಾಟಕದಲ್ಲಿ ಮೋದಿ ಅಲೆಯೋ, ಖರ್ಗೆ ಪ್ರಭಾವವೋ?
ದೇಶದಲ್ಲಿ ಮೂರನೇ ಹಂತದ ಚುನಾವಣೆಗೆ ದಿನಗಣನೆ ಆರಂಭವಾಗಿದೆ. ಕರ್ನಾಟಕದಲ್ಲಿ ಈಗಾಗಲೇ ಮೊದಲ ಹಂತದ ಚುನಾವಣೆಗಳು ಮುಗಿದಿವೆ. ಎರಡನೇ ಹಂತದ ಚುನಾವಣೆಗಳಿಗೆ ಉತ್ತರ ಕರ್ನಾಟಕ ಭಾಗ ಸಿದ್ಧವಾಗುತ್ತಿದೆ. ಈಗ ಎಲ್ಲ ಪಕ್ಷಗಳ ಚಿತ್ತ ಉತ್ತರದನಟ್ಟ ನೆಟ್ಟಿವೆ.
ಬಿಜೆಪಿ ಕಳೆದ ಲೋಕಸಭಾ ಚುನಾವಣೆಯಲ್ಲಿ ಕಲ್ಯಾಣ ಕರ್ನಾಟಕದಲ್ಲಿ ಕ್ಲೀನ್ ಸ್ವೀಪ್ ಸಾಧನೆಯನ್ನು ಮಾಡಿತ್ತು. ಈ ಭಾಗದಲ್ಲಿ ಈ ಬಾರಿ ಕಾಂಗ್ರೆಸ್ ಹಾಗೂ ಬಿಜೆಪಿ ನಡುವೆ ಜಿದ್ದಾಜಿದ್ದಿನ ಸ್ಪರ್ಧೆ ಎದ್ದು ಕಾಣುತ್ತಿದೆ. ಕಲ್ಯಾಣ ಕರ್ನಾಟಕ ಭಾಗದಲ್ಲಿ ಚುನಾವಣೆ ಇದೇ ಏಳರಂದು ನಡೆಯಲಿದೆ.

ಕಲ್ಯಾಣ ಕರ್ನಾಟಕ ಭಾಗದ ಐದು ಲೋಕಸಭಾ ಕ್ಷೇತ್ರಗಳಾದ ಬೀದರ್, ಕಲ್ಬುರ್ಗಿ, ರಾಯಚೂರು, ಬಳ್ಳಾರಿ, ಭಾಗದಲ್ಲಿ ಕಮಲ ಪಡೆ ಭರ್ಜರಿ ಜಯ ಸಾಧಿಸಿತ್ತು. ಈ ಭಾಗದ ಏಳು ಜಿಲ್ಲೆಗಳು ವಾಣಿಜ್ಯ ನಗರಿಯಾಗಿ ಗುರುತಿಸಿಕೊಂಡಿವೆ.
ಬಿಜೆಪಿ ಕ್ಲೀನ್ ಸ್ವೀಪ್
ಕಳೆದ ಲೋಕಸಭಾ ಚುನಾವಣೆಯಲ್ಲಿ ಮೋದಿ ಅಲೆ ಈ ಭಾಗದಲ್ಲಿ ಭರ್ಜರಿ ಕೆಲಸ ಮಾಡಿತ್ತು. ಇನ್ನು ಕರ್ನಾಟಕದಲ್ಲೂ 2019ರಲ್ಲಿ ಕಮಲ ಪಡೆ 28 ಕ್ಷೇತ್ರಗಳಲ್ಲಿ 25 ಸ್ಥಾನವನ್ನು ಗೆದ್ದು ಕೊಂಡಿತ್ತು. ಇನ್ನು ಮೋದಿ ಅಲೆ ಹಾಗೂ ಬಿಜೆಪಿ ಸಿಂಬಾಲ್ 2023ರ ವಿಧಾನಸಭಾ ಚುನಾವಣೆಯಲ್ಲಿ ಕೈ ಹಿಡಿಯಲಿಲ್ಲ. ಈ ಭಾಗದಲ್ಲಿ ಕಾಂಗ್ರೆಸ್ ಬಿಗಿ ಹಿಡಿತ ಸಾಧಿಸಿತ್ತು.

2023ರ ವಿಧಾನಸಭಾ ಚುನಾವಣೆಗಲ್ಲಿ ಕಾಂಗ್ರೆಸ್, ಬಿಜೆಪಿ ರಣ ತಂತ್ರವನ್ನು ಬುಡಮೇಲು ಮಾಡಿತ್ತು. ಈ ಕ್ಷೇತ್ರದಲ್ಲಿ ಒಟ್ಟು 26 ವಿಧಾನಸಭಾ ಕ್ಷೇತ್ರಗಳನ್ನು ಗೆದ್ದು ಕೊಂಡಿತ್ತು. ಇನ್ನು ಬಿಜೆಪಿ ಸಾಧನೆ ಕಳಪೆಯಾಗಿತ್ತು. ಹಿಂದಿನ ಚುನಾವಣೆಗಳನ್ನು ಹೋಲಿಸಿದೆ ಕಮಲ ಪಡೆ ಒಟ್ಟು ಏಳು ಸ್ಥಾನಗಳನ್ನು ಕೈ ಚೆಲ್ಲಿತ್ತು.
ಕಾಂಗ್ರೆಸ್ ಪ್ರತಿಷ್ಠೆಯ ಕ್ಷೇತ್ರ
ಈ ಕ್ಷೇತ್ರ ಕಾಂಗ್ರೆಸ್ ಪಾಲಿಗೆ ಮಹತ್ವದಾಗಿದೆ. ಈ ಕ್ಷೇತ್ರದಲ್ಲಿ ಗೆಲುವು ಸಾಧಿಸುವುದು ಕಾಂಗ್ರೆಸ್ ಪಕ್ಷಕ್ಕೆ ಅನಿವಾರ್ಯವಾಗಿದೆ. ಈ ಕ್ಷೇತ್ರ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಅವರು ತವರು ಕ್ಷೇತ್ರ. ಈ ಕ್ಷೇತ್ರದಲ್ಲಿ ತಮ್ಮ ಪ್ರಭಾವ ಎಷ್ಟಿದೇ ಎಂದು ತೋರಿಸಲು ಉತ್ತಮ ಅವಕಾಶವಾಗಿದೆ. ಈ ಕಲ್ಬುರ್ಗಿ ಕ್ಷೇತ್ರದಲ್ಲಿ ಮಲ್ಲಿಕಾರ್ಜುನ್ ಖರ್ಗೆ ಅವರ ಅಳಿಯ ಸಹ ಚುನಾವಣೆ ಸ್ಪರ್ಧಿಸುತ್ತಿದ್ದು, ಗೆಲುವಿನ ಗುರಿ ಹೊಂದಿದ್ದಾರೆ.

ಕಲ್ಯಾಣ ಕರ್ನಾಟಕದಲ್ಲಿ ಕಾಂಗ್ರೆಸ್ ಪ್ರಭಾವ
2023ರಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಆಕ್ಸಿಜನ್ ಸಿಕ್ಕಂತೆ ಆಗಿದೆ. ಬೀದರ್‌ನಲ್ಲಿ ಕಾಂಗ್ರೆಸ್ ಎಂಟು ಕ್ಷೇತ್ರಲ್ಲಿ ಮೂರರಲ್ಲಿ ಜಯ ಸಾಧಿಸಿದರೆ, ಬಿಜೆಪಿ ಐದರಲ್ಲಿ ಜಯ ಸಾಧಿಸಿತ್ತು. ಇನ್ನು ಕಲ್ಬುರ್ಗಿ ಜಿಲ್ಲೆಯಲ್ಲಿ ಬಿಜೆಪಿ ಕೇವಲ ಒಂದು ಸ್ಥಾನವನ್ನು ಗೆದ್ದುಕೊಂಡಿತ್ತು. ಕೊಪ್ಪಳ ಜಿಲ್ಲೆಯಲ್ಲಿ ಬಿಜೆಪಿ ಎರಡು ಸ್ಥಾನವನ್ನು, ರಾಯಚೂರಿನಲ್ಲಿ ಬಿಜೆಪಿ ಎರಡು ಸ್ಥಾನವನ್ನು, ಬಳ್ಳಾರಿ ಜಿಲ್ಲೆಯಲ್ಲಿ ಬಿಜೆಪಿ ಕೇವಲ ಒಂದು ಸ್ಥಾನವನ್ನು ಗೆಲ್ಲುವಲ್ಲಿ ಮಾತ್ರ ಬಿಜೆಪಿ ಸಫಲವಾಗಿತ್ತು.
ಈ ಬಾರಿಯ ಲೋಕಸಭಾ ಚುನಾವಣೆಯ ಪ್ರಚಾರದ ರಣಕಹಳೆಯನ್ನು ಮೋದಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಅವರ ತವರು ಕ್ಷೇತ್ರದಿಂದಲೇ ಆರಂಭಿಸಿದ್ದರು. ಕೇಂದ್ರ ಚುನಾವಣೆಗಳು ಎಂದು ಬಂದಾಗ ಈ ಭಾಗದಲ್ಲಿ ಇನ್ನು ಮೋದಿ ಹವಾ ಜೋರಾಗಿದೆ.
ಈ ಭಾಗದಲ್ಲಿ ಮೋದಿ ಹವಾ ಹೆಚ್ಚಾಗಿದೆಯೋ ಅಥವಾ ಮಲ್ಲಿಕಾರ್ಜುನ್ ಖರ್ಗೆ ಅವರ ಪ್ರಭಾವ ಹೆಚ್ಚಿದೆಯೋ ಎಂಬುದನ್ನು ತಿಳಿಯುವುದಕ್ಕೆ ಕಾಯಲೇ ಬೇಕು. ಜೂನ್ 4 ರಂದು ಚುನಾವಣಾ ಫಲಿತಾಂಶಗಳು ಹೊರ ಬೀಳಲಿದ್ದು ಅಲ್ಲಿವರೆಗೆ ಕಾಯಲೇಬೇಕು.
-
ಏಪ್ರಿಲ್ 12ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026: ಗಿಲ್ ಮತ್ತು ಬಟ್ಲರ್ ಸ್ಫೋಟಕ ಬ್ಯಾಟಿಂಗ್, ಎಲ್ಎಸ್ಜಿ ಮಣಿಸಿದ ಗುಜರಾತ್ ಟೈಟಾನ್ಸ್ -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
ಮದ್ಯಪಾನದ ಅಭ್ಯಾಸವನ್ನು ನಿಯಂತ್ರಿಸಲು ಬಯಸುತ್ತೀರಾ? ತಜ್ಞರ ಸರಳ ಸಲಹೆಗಳು ಇಲ್ಲಿವೆ -
Transfer: ಕರ್ನಾಟಕ ಶಿಕ್ಷಕರಿಗೆ ಸಿಹಿ ಸುದ್ದಿ: ವರ್ಗಾವಣೆ ನಿಯಮಗಳಲ್ಲಿ ಮಹತ್ವ ಬದಲಾವಣೆ, ಯಾರು ಅರ್ಹರು? -
ವೈಭವ್ ಸೂರ್ಯವಂಶಿ ಕುರಿತು ಬಿಸಿಸಿಐಗೆ ಹೋಯ್ತು ವಿಶೇಷ ಮನವಿ; ಟೀಮ್ ಇಂಡಿಯಾ ಸೇರ್ತಾರಾ ಯುವ ಪ್ರತಿಭೆ? -
ಒಂದು ಬಟನ್ ಒತ್ತಿದರೆ ಬದಲಾಗುತ್ತೆ BMW ಕಾರಿನ ನಂಬರ್ ಪ್ಲೇಟ್, ಹೈಟೆಕ್ ಕಳ್ಳಾಟದ ವಿಡಿಯೋ ಭಾರಿ ವೈರಲ್ -
Asha Bhosle: ಗಾನ ಕೋಗಿಲೆ ಆಶಾ ಭೋಸ್ಲೆ ನಿಧನ: ದೇಶವೇ ಶೋಕದಲ್ಲಿ, ಸಾಮಾಜಿಕ ಜಾಲತಾಣದಲ್ಲಿ ಫ್ಯಾನ್ಸ್ ಕಂಬನಿ -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
ವಾಂಖೆಡೆಯಲ್ಲಿ ಆರ್ಸಿಬಿ-ಮುಂಬೈ ಇಂಡಿಯನ್ಸ್ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ವರದಿ ಹೀಗಿದೆ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Duet Songs: ಆಶಾ ಭೋಸ್ಲೆ-ಲತಾ ಮಂಗೇಶ್ಕರ್ ಸಹೋದರಿಯರ ಕಂಠಸಿರಿಯಲ್ಲಿ ಅರಳಿದ ಮಾಧುರ್ಯ: ಒಟ್ಟಿಗೆ ಹಾಡಿದ ಹಿಟ್ ಹಾಡುಗಳಿವು












Click it and Unblock the Notifications