ನಟ ದೊಡ್ಡಣ್ಣಗೆ ಅನಾರೋಗ್ಯ; ಆಸ್ಪತ್ರೆಗೆ ದಾಖಲು
ಗುರುವಾರ ವಿಜಯಪುರದಲ್ಲಿ ತೆಲುಗು ಚಿತ್ರವೊಂದರ ಶೂಟಿಂಗ್ ನಲ್ಲಿ ನಿರತರಾಗಿದ್ದರು ದೊಡ್ಡಣ್ಣ. ಆಗ, ಅನಾರೋಗ್ಯ ಕಾಡಿದ್ದರಿಂದಾಗಿ ಅವರನ್ನು ವಿಜಯಪುರದ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.
ವಿಜಯಪುರ, ಮೇ 19: ಕನ್ನಡ ಚಿತ್ರರಂಗದ ಹಿರಿಯ ನಟ ದೊಡ್ಡಣ್ಣ ಅವರು ಅನಾರೋಗ್ಯಕ್ಕೆ ತುತ್ತಾಗಿದ್ದು ಅವರನ್ನು ಮೊದಲು ವಿಜಯಪುರ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ, ಇದೀಗ ಅವರನ್ನು ಬೆಂಗಳೂರಿಗೆ ಸ್ಥಳಾಂತರಿಸಲಾಗಿದೆ. ದೊಡ್ಡಣ್ಣ ಅವರಿಗೀಗ 68 ವರ್ಷ ವಯಸ್ಸು.
ದೊಡ್ಡಣ್ಣ ಅವರು ತೆಲುಗು ಚಿತ್ರವೊಂದರ ಶೂಟಿಂಗ್ ನಲ್ಲಿ ನಿರತರಾಗಿದ್ದರು. ಚಿತ್ರದ ಶೂಟಿಂಗ್ ವಿಜಯಪುರದ ಸೊಲ್ಲಾಪುರ ರಸ್ತೆಯಲ್ಲಿ ನಡೆಯುತ್ತಿತ್ತು. ಅದೇ ವೇಳೆ, ದೊಡ್ಡಣ್ಣ ಅವರಿಗೆ ಅನಾರೋಗ್ಯ ಉಂಟಾಗಿದೆ. ತಕ್ಷಣ ಅವರನ್ನು ವಿಜಯಪುರದ ಆಯುಷ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಆದರೆ, ಅವರ ಕುಟುಂಬ ಸದಸ್ಯರು ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ಕರೆತರಲು ಕೋರಿದ್ದರು. ಈ ಹಿನ್ನೆಲೆಯಲ್ಲಿ, ಖಾಸಗಿ ಆಸ್ಪತ್ರೆಯ ವೈದ್ಯರು ರಾತ್ರಿ ಸುಮಾರು 2:30ರ ವೇಳೆಗೆ ದೊಡ್ಡಣ್ಣ ಅವರನ್ನು ಆ್ಯಂಬುಲೆನ್ಸ್ ಒಂದರಲ್ಲಿ ಬೆಂಗಳೂರಿಗೆ ಸ್ಥಳಾಂತರಿಸಿದ್ದಾರೆ.
ಬೆಂಗಳೂರಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ದೊಡ್ಡಣ್ಣ ಇದೀಗ ಚಿಕಿತ್ಸೆಗೊಳಗಾಗಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.
{promotion-urls}