Breaking; ಕಾಂಗ್ರೆಸ್ ತೊರೆದ ಮುಖ್ಯಮಂತ್ರಿ ಚಂದ್ರು
ಬೆಂಗಳೂರು, ಮೇ 29; ಕನ್ನಡದ ಹಿರಿಯ ನಟ ಮುಖ್ಯಮಂತ್ರಿ ಚಂದ್ರು ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದರು. ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್‌ಗೆ ರಾಜೀನಾಮೆ ಪತ್ರವನ್ನು ರವಾನೆ ಮಾಡಿದ್ದಾರೆ.
25/5/2022ರ ದಿನಾಂಕದಂದು ಬರೆದಿರುವ ರಾಜೀನಾಮೆ ಪತ್ರವನ್ನು ಸಲ್ಲಿಕೆ ಮಾಡಿದ್ದಾರೆ. ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಎಂಬ ವಿಷಯದಲ್ಲಿ ಕಾರಣ ವಿವರಿಸಿದ್ದಾರೆ.
ಈ ಪತ್ರದ ಮೂಲಕ ನಾನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ವೈಯಕ್ತಿಕ ಕಾರಣಗಳಿಂದ ರಾಜೀನಾಮೆಯನ್ನು ಸಲ್ಲಿಸುತ್ತಿದ್ದೇನೆ ಎಂದು ಹೇಳಿದ್ದಾರೆ.

ದೇಶದಲ್ಲೇ ಸುಧೀರ್ಘ ಇತಿಹಾಸವಿರುವ ಕಾಂಗ್ರೆಸ್ ಪಕ್ಷಕ್ಕೆ ನಾನು ವ್ಯಾಪಕ ನೆಲೆಯಲ್ಲಿ ಜನಸೇವೆ ಮಾಡುವ ಆಶಯದಿಂದ ಸೇರ್ಪಡೆಗೊಂಡೆ. ಪಕ್ಷಕ್ಕೆ ಸೇರಿದಂದಿನಿಂದ ಪ್ರಾಮಾಣಿಕವಾಗಿ ಕೆಲಸ ಮಾಡಿದ್ದೇನೆ ಎಂಬ ತೃಪ್ತಿ ಇದೆ.
ಸದ್ಯ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆಯನ್ನು ಸಲ್ಲಿಸಿದ್ದು, ನನ್ನ ಮೇಲೆ ವಿಶ್ವಾಸವಿಟ್ಟು ಪಕ್ಷದ ಸಾಂಸ್ಕೃತಿಕ ಘಟಕದ ಅಧ್ಯಕ್ಷರನ್ನಾಗಿ ಪ್ರಕಟಿಸಿರುವ ಜವಾಬ್ದಾರಿಯನ್ನು ವಹಿಸಿಕೊಳ್ಳುವ ಪ್ರಮೇಯವೇ ಉದ್ಭವಿಸುವುದಿಲ್ಲ.
ಇಂದಿನವರೆಗೂ ನನಗೆ ಪಕ್ಷದಲ್ಲಿ ಬೆಂಬಲಿಸಿದ ಪ್ರೀತಿಯನ್ನು ತೋರಿಸಿದ ಎಲ್ಲರಿಗೂ ಮನದಾಳದ ಕೃತಜ್ಞತೆಗಳು ಎಂದು ರಾಜೀನಾಮೆ ಪತ್ರದಲ್ಲಿ ಮುಖ್ಯಮಂತ್ರಿ ಚಂದ್ರು ವಿವರಿಸಿದ್ದಾರೆ.












Click it and Unblock the Notifications