ನೇತ್ರದಾನ ಮಾಡಿ ಸಾವಿನಲ್ಲೂ ಸಾರ್ಥಕತೆ ಮೆರೆದ ಅಭಿಮಾನಿಗಳ ನೆಚ್ಚಿನ ಅಪ್ಪು
ಬೆಂಗಳೂರು, ಅಕ್ಟೋಬರ್ 29: ನಟ ಪುನೀತ್ ರಾಜ್ ಕುಮಾರ್ ಅಕಾಲಿಕ ನಿಧನ ಕನ್ನಡದ ಚಿತ್ರೋದ್ಯಮಕ್ಕೆ ಬರಸಿಡಿಲಿನಂತೆ ಎರಗಿದೆ. ಈ ಮಧ್ಯೆ 'ಅಪ್ಪು' ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ.
Recommended Video
ಪುನೀತ್ ರಾಜ್‌ಕುಮಾರ್ ಬದುಕಿದ್ದಾಗಲೇ ನೇತ್ರದಾನಕ್ಕೆ ಸಹಿ ಮಾಡಿದ್ದರು. ಅಷ್ಟೇ ಅಲ್ಲದೇ ರಾಜಕುಮಾರ್ ಕುಟುಂಬದವರೆಲ್ಲರೂ ನೇತ್ರದಾನಕ್ಕೆ ನಿರ್ಧರಿಸಿದ್ದಾರೆ. ಎಲ್ಲರ ಅಚ್ಚುಮೆಚ್ಚಿನ ನಟ ಪುನೀತ್ ರಾಜ್‌ಕುಮಾರ್ ಅವರ ನೇತ್ರದಾನ ಮಾಡಲು ನಿರ್ಧರಿಸಲಾಗಿದೆ. ಇದರೊಂದಿಗೆ ನಟ ಪುನೀತ್ ತಂದೆಯ ಹಾದಿಯಲ್ಲೇ ಸಾಗಿದ್ದಾರೆ.
ಎಲ್ಲರ ಅಚ್ಚುಮೆಚ್ಚಿನ ನಟ ಪುನೀತ್ ರಾಜ್‌ಕುಮಾರ್ ಅವರಿಂದ ನೇತ್ರದಾನ ಮಾಡಲು ನಿರ್ಧರಿಸಲಾಗಿದೆ. ಇದರೊಂದಿಗೆ ನಟ ಪುನೀತ್ ಅಪ್ಪನ ಹಾದಿಯಲ್ಲೇ ಸಾಗಿದ್ದಾರೆ.

ಈಗಾಗಲೇ ನಟ ಪುನೀತ್ ರಾಜ್‌ಕುಮಾರ್ ಸಾವು ಕನ್ನಡ ಚಿತ್ರರಂಗಕ್ಕೆ ತುಂಬಲಾರದ ನಷ್ಟವಾಗಿದೆ. ಅವರ ಲಕ್ಷಾಂತರ ಅಭಿಮಾನಿಗಳಿಗೆ ನಿಜಕ್ಕೂ ಆಘಾತ ಮೂಡಿಸಿದೆ.
ಕನ್ನಡ ಚಿತ್ರರಂಗದಲ್ಲಿಯೇ ಅತ್ಯಂತ ಫಿಟ್ ಆಗಿದ್ದ ಪುನೀತ್ ರಾಜಕುಮಾರ್ ಹಲವು ಚಿತ್ರಗಳಲ್ಲಿ ನಟಿಸಿದ್ದರು. ಕನ್ನಡದ ಖ್ಯಾತ ನಟ ಡಾ. ರಾಜಕುಮಾರ್‌ರವರ ಮೂರನೇ ಪುತ್ರನಾಗಿದ್ದ ಪುನೀತ್ ರಾಜಕುಮಾರ್ ಬಾಲ್ಯದಿಂದಲೇ ಚಿತ್ರರಂಗದಲ್ಲಿ ಛಾಪು ಮೂಡಿಸಿದ್ದರು.
ನಟ ಪುನೀತ್ ರಾಜಕುಮಾರ್ ಸಾವು ಕನ್ನಡ ಚಿತ್ರರಂಗಕ್ಕೆ ತುಂಬಲಾರದ ನಷ್ಟ ಉಂಟಾಗಿದ್ದು, ಅವರ ಲಕ್ಷಾಂತರ ಅಭಿಮಾನಿಗಳು ಈ ಸಾವು ಅರಗಿಸಿಕೊಳ್ಳಲು ಆಗುತ್ತಿಲ್ಲ. ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಅಂತಿಮ ದರ್ಶನದ ವ್ಯವಸ್ಥೆ ಮಾಡಲಾಗುತ್ತಿದ್ದು, ಪೊಲೀಸರು ಭೇಟಿ ನೀಡಿ ಸ್ಥಳ ಪರಿಶೀಲಿಸಿದ್ದಾರೆ.
ಪುನೀತ್ ರಾಜಕುಮಾರ್ ಜೇಮ್ಸ್ ಸಿನಿಮಾದ ಕೆಲಸಗಳತ್ತ ಗಮನ ಹರಿಸುತ್ತಿದ್ದರು. ಆ ಚಿತ್ರಕ್ಕೆ ಚೇತನ್‌ಕುಮಾರ್ ನಿರ್ದೇಶಕ. ಅಲ್ಲದೇ, ಪವನ್‌ಕುಮಾರ್ ನಿರ್ದೇಶನದ 'ದ್ವಿತ್ವ' ಚಿತ್ರದಲ್ಲೂ ಅಪ್ಪು ನಟಿಸುತ್ತಿದ್ದರು.
ಪುನೀತ್ ರಾಜ್‌ಕುಮಾರ್ ಅಂತಿಮ ದರ್ಶನಕ್ಕೆ ಕಂಠೀರವ ಸ್ಟೇಡಿಯಂನಲ್ಲಿ ಈಗಾಗಲೇ ಸಿದ್ಧತೆಗಳು ಆರಂಭವಾಗಿವೆ. ಕಂಠೀರವ ಸ್ಟೇಡಿಯಮ್‌ಗೆ ಬೆಂಗಳೂರು ಜಿಲ್ಲಾಧಿಕಾರಿ ಮಂಜುನಾಥ್ ಭೇಟಿ ನೀಡಿದ್ದು, ಕ್ರೀಡಾಂಗಣ ಸುತ್ತಮುತ್ತ ಬ್ಯಾರಿಕೇಡ್ ಅಳವಡಿಕೆ ಮಾಡಲಾಗಿದೆ.
ಪುನೀತ್ ರಾಜ್‌ಕುಮಾರ್ ನಿವಾಸಕ್ಕೆ ನಟ ಯಶ್ ಹಾಗೂ ನಿರ್ಮಾಪಕ ರಾಕ್‌ಲೈನ್ ವೆಂಕಟೇಶ್ ಆಗಮಿಸಿದ್ದಾರೆ. ಅದೇ ರೀತಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರು ವಿಕ್ರಂ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ.
ಹೃದಯಾಘಾತದಿಂದ ನಿಧನರಾಗಿರುವ ಪುನೀತ್ ರಾಜ್‌ಕುಮಾರ್ ಮೃತದೇಹವನ್ನು ಸದಾಶಿವನಗರದ ನಿವಾಸಕ್ಕೆ ಆಂಬ್ಯುಲೆನ್ಸ್‌ನಲ್ಲಿ ತೆಗೆದುಕೊಂಡು ಹೋಗಲಾಗುತ್ತಿದೆ.












Click it and Unblock the Notifications