• search
 • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಕನ್ನಡದ ಖ್ಯಾತ ನಟಿ ಕಾಂಗ್ರೆಸ್ ಸೇರ್ಪಡೆ

|
Google Oneindia Kannada News

ಬೆಂಗಳೂರು, ನವೆಂಬರ್ 16; ಕನ್ನಡ ನಟಿ ಭಾವನಾ ಪುನಃ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. 2018ರಲ್ಲಿ ವಿಧಾನಸಭೆ ಚುನಾವಣೆಗೆ 2 ದಿನಗಳು ಇರುವಾಗ ಅವರು ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದರು.

ನಟಿ ಭಾವನಾ ರಾಮಣ್ಣ ಕಾಂಗ್ರೆಸ್ ಸೇರ್ಪಡೆ ಕುರಿತು ಎಐಸಿಸಿ ಪ್ರಧಾನ ಕಾರ್ಯದರ್ಶಿ ಮತ್ತು ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲಾ ಮಂಗಳವಾರ ಟ್ವೀಟ್ ಮಾಡಿದ್ದಾರೆ. ಭಾವನಾ ಭೇಟಿಯಾದ ಫೋಟೋವನ್ನು ಸಹ ಟ್ವೀಟ್ ಮಾಡಿದ್ದಾರೆ.

ಬಿಜೆಪಿ ಬಿಟ್ಟು ಕಾಂಗ್ರೆಸ್‌ನತ್ತ ಮಾಜಿ ಸಚಿವ; ಸಿದ್ದರಾಮಯ್ಯ ಭೇಟಿ! ಬಿಜೆಪಿ ಬಿಟ್ಟು ಕಾಂಗ್ರೆಸ್‌ನತ್ತ ಮಾಜಿ ಸಚಿವ; ಸಿದ್ದರಾಮಯ್ಯ ಭೇಟಿ!

"ಕಾಂಗ್ರೆಸ್‌ನ ಮಾಜಿ ಕಾರ್ಯಕರ್ತೆ, ಕನ್ನಡದ ನಟಿ ಭಾವನಾ ರಾಮಣ್ಣ ಅವರು ನನ್ನನ್ನು ಭೇಟಿಯಾದರು. ಕರ್ನಾಟಕದಲ್ಲಿ ಕಾಂಗ್ರೆಸ್ ಸೇರಿ, ಪಕ್ಷಕ್ಕಾಗಿ ದುಡಿಯುವ ಸಂಕಲ್ಪವನ್ನು ಅವರು ಮಾಡಿದ್ದಾರೆ. ಪ್ರತಿಯೊಬ್ಬರ ಸೇರ್ಪಡೆಯೊಂದಿಗೆ ಕಾಂಗ್ರೆಸ್ ಪ್ರಾಬಲ್ಯ ಪಡೆಯಲಿದೆ ಎಂದು ನಾನು ನಿಶ್ಚಿತವಾಗಿ ಭಾವಿಸಿದ್ದೇನೆ, ಅವರಿಗೆ ಶುಭಾಶಯಗಳು" ಎಂದು ಟ್ವೀಟ್‌ನಲ್ಲಿ ತಿಳಿಸಿದ್ದಾರೆ.

ದಾವಣಗೆರೆ; ಡಿಕೆಶಿ ಸಮ್ಮುಖದಲ್ಲಿ ಕಾಂಗ್ರೆಸ್ ಸೇರಿದ ಜೆಡಿಎಸ್ ನಾಯಕ! ದಾವಣಗೆರೆ; ಡಿಕೆಶಿ ಸಮ್ಮುಖದಲ್ಲಿ ಕಾಂಗ್ರೆಸ್ ಸೇರಿದ ಜೆಡಿಎಸ್ ನಾಯಕ!

ಭಾವನಾ ರಾಮಣ್ಣ ಈ ಮೊದಲು ಕಾಂಗ್ರೆಸ್ ಪಕ್ಷದಲ್ಲಿಯೇ ಇದ್ದರು. ಕರ್ನಾಟಕ ರಾಜ್ಯ ಬಾಲಭವನ ಸೊಸೈಟಿಯ ಅಧ್ಯಕ್ಷೆಯಾಗಿದ್ದರು. 2018ರ ವಿಧಾನಸಭೆ ಚುನಾವಣೆಯಲ್ಲಿ ಅವರು ಚಿತ್ರದುರ್ಗದಿಂದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದರು.

3 ದಿನದಲ್ಲಿ ಪಕ್ಷಕ್ಕೆ ರಾಜೀನಾಮೆ; ಜೆಡಿಎಸ್ ಎಂಎಲ್‌ಸಿ ಘೋಷಣೆ! 3 ದಿನದಲ್ಲಿ ಪಕ್ಷಕ್ಕೆ ರಾಜೀನಾಮೆ; ಜೆಡಿಎಸ್ ಎಂಎಲ್‌ಸಿ ಘೋಷಣೆ!

ಆದರೆ ಕಾಂಗ್ರೆಸ್ ಟಿಕೆಟ್ ಸಿಗಲಿಲ್ಲ. ಆಗ ಭಾವನಾ ರಾಮಣ್ಣ ಕಾಂಗ್ರೆಸ್ ಬಿಟ್ಟು ಬಿಜೆಪಿ ಸೇರಿದ್ದರು. ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆಗೆ 2 ದಿನಗಳು ಇರುವಾಗ ಅಂದಿನ ಕರ್ನಾಟಕ ಬಿಜೆಪಿ ಉಸ್ತುವಾರಿ ಮುರಳೀಧರ್‌ ರಾವ್ ಸಮ್ಮುಖದಲ್ಲಿ ಬಿಜೆಪಿ ಸೇರಿದ್ದರು.

2023ರಲ್ಲಿ ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಇದಕ್ಕೂ ಮೊದಲು ವಿವಿಧ ಪಕ್ಷಗಳ ನಾಯಕರು ಪಕ್ಷ ಬದಲಾವಣೆ ಮಾಡುವುದು ಸಹಜವಾಗಿದೆ. ಚುನಾವಣೆ ಗಮನದಲ್ಲಿಟ್ಟುಕೊಂಡು ಭಾವನಾ ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರಿದ್ದಾರೆ.

   ಸುಮ್ನೆ ಕೂತು ಪಂದ್ಯ ನೋಡ್ತಿದ್ದ ಸಿರಾಜ್ ತಲೆಗೆ ರೋಹಿತ್‌ ಹೊಡೆದ ವಿಡಿಯೋ ವೈರಲ್ | Oneindia Kannada

   English summary
   Congress general secretary and Karnataka party in-charge Randeep Surjewala tweeted that Kannada actress & artist Bhavana Ramanna joined Congress.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X