• search
 • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಸಿಸಿಬಿ ಪೊಲೀಸರಿಂದ ನಟಿ ರಾಗಿಣಿ ದ್ವಿವೇದಿ ಬಂಧನ

|

ಬೆಂಗಳೂರು, ಸೆಪ್ಟೆಂಬರ್ 04: ಬೆಂಗಳೂರು ನಗರಕ್ಕೆ ಮಾದಕ ದ್ರವ್ಯ ಪೂರೈಕೆ ಜಾಲದ ಬಗ್ಗೆ ತನಿಖೆ ನಡೆಸುತ್ತಿರುವ ಸಿಸಿಬಿ ಪೊಲೀಸರು ನಟಿ ರಾಗಿಣಿ ದ್ವಿವೇದಿ ಬಂಧಿಸಿದ್ದಾರೆ.

   ರಾಗಿಣಿ ಮನೆಗೆ ಪೋಲೀಸರ ಎಂಟ್ರಿ | Oneindia Kannada

   ಶುಕ್ರವಾರ ಬೆಳಗ್ಗೆಯಿಂದ ಬೆಂಗಳೂರಿನ ಸಿಸಿಬಿ ಕಚೇರಿಯಲ್ಲಿ ನಟಿ ರಾಗಿಣಿ ದ್ವಿವೇದಿ ವಿಚಾರಣೆ ನಡೆಯುತ್ತಿತ್ತು. ಸಂಜೆ ಅವರನ್ನು ಪೊಲೀಸರು ಅವರನ್ನು ಬಂಧಿಸಿದ್ದಾರೆ. ಹೆಚ್ಚಿನ ವಿಚಾರಣೆಗಾಗಿ ಪೊಲೀಸರು ಬಂಧಿಸಿದ್ದಾರೆ.

   ಡ್ರಗ್ಸ್ ಪ್ರಕರಣ: ನಟಿ ರಾಗಿಣಿ ದ್ವಿವೇದಿ ಸಿಸಿಬಿ ವಶಕ್ಕೆ

   ನಟಿ ರಾಗಿಣಿ ದ್ವಿವೇದಿ ವೈದ್ಯಕೀಯ ಪರೀಕ್ಷೆ ಬಳಿಕ ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗುತ್ತದೆ. ಬಳಿಕ ಹೆಚ್ಚಿನ ವಿಚಾರಣೆಗಾಗಿ ಪೊಲೀಸರು ವಶಕ್ಕೆ ನೀಡುವಂತೆ ನ್ಯಾಯಾಲಯಕ್ಕೆ ಮನವಿ ಮಾಡಲಿದ್ದಾರೆ.

   ಸಂಜನಾ, ರಾಗಿಣಿ ನಟಿಯರಲ್ಲ, ಮಜಾ ಮಾಡುವುದಕ್ಕೆ ಬಂದವರು: ಮುತಾಲಿಕ್

   ಶುಕ್ರವಾರ ಮುಂಜಾನೆ ಸಿಸಿಬಿ ಪೊಲೀಸರು ಯಲಹಂಕ ಸಮೀಪದ ನಟಿ ರಾಗಿಣಿ ನಿವಾಸದ ಮೇಲೆ ದಾಳಿ ಮಾಡಿದ್ದರು. 11 ಗಂಟೆ ತನಕ ಮನೆಯಲ್ಲಿ ಪರಿಶೀಲನೆ ನಡೆಸಲಾಗಿತ್ತು. ಬಳಿಕ ರಾಗಿಣಿ ದ್ವಿವೇದಿಯನ್ನು ವಶಕ್ಕೆ ಪಡೆಯಲಾಗಿತ್ತು.

   ಗಾರ್ಡನ್ ಸಿಟಿ ಡ್ರಗ್ಸ್ ಘಾಟು; ಸೇಲಂ ಪೊಣ್ಣು, ಆಫ್ರಿಕಾ ಜುಂಬೋ ನಶೆ

   11.45ರ ಸುಮಾರಿಗೆ ವಿಚಾರಣೆಗಾಗಿ ರಾಗಿಣಿಯನ್ನು ಚಾಮರಾಜಪೇಟೆಯಲ್ಲಿರುವ ಸಿಸಿಬಿ ಕಚೇರಿಗೆ ಕರೆದುಕೊಂಡು ಬರಲಾಗಿತ್ತು. ಸಂಜೆಯ ತನಕ ವಿಚಾರಣೆ ನಡೆಸಿದ ಪೊಲೀಸರು ಬಳಿಕ ಅವರನ್ನು ಬಂಧಿಸಿದ್ದಾರೆ.

   ನಟಿ ರಾಗಿಣಿ ದ್ವಿವೇದಿ ಆಪ್ತರಾದ ರವಿಶಂಕರ್‌ರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದರು. ಅವರು ಈಗಾಗಲೇ ಸಿಸಿಬಿ ಪೊಲೀಸರ ವಶದಲ್ಲಿದ್ದಾರೆ. ಅವರ ವಿಚಾರಣೆ ವೇಳೆ ಪಡೆದ ಮಾಹಿತಿಯಂತೆ ರಾಗಿಣಿ ನಿವಾಸದ ಮೇಲೆ ದಾಳಿ ಮಾಡಲಾಗಿತ್ತು.

   English summary
   Bengaluru CCB police arrested Kannada actress Ragini Dwivedi. CCB police conducted raid in Ragini house on September 4, 2020 morning and detained her for questioning. Evening police arrested her.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X