ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಪ್ರಶಸ್ತಿ ಪ್ರಕಟ
ಬೆಂಗಳೂರು, ಫೆ.4 : ಕರ್ನಾಟಕ ಸರ್ಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ 2012ನೇ ಸಾಲಿಗೆ ವಿವಿಧ ಪ್ರಶಸ್ತಿಗಳಿಗೆ ಅರ್ಹರನ್ನು ಆಯ್ಕೆ ಮಾಡಲಾಗಿದೆ. ಪ್ರಶಸ್ತಿ ಪ್ರದಾನ ಸಮಾರಂಭದ ದಿನಾಂಕವನ್ನು ಶೀಘ್ರದಲ್ಲಿಯೇ ಪ್ರಕಟಿಸಲಾಗುವುದು ಎಂದು ಸಚಿವೆ ಉಮಾಶ್ರೀ ಹೇಳಿದ್ದಾರೆ.
ಸಂತ ಶಿಶುನಾಳ ಪರೀಫ ಪ್ರಶಸ್ತಿ, ಶ್ರೀ ನಿಜಗುಣ ಪುರಂದರ ಪ್ರಶಸ್ತಿ, ವರ್ಣಶಿಲ್ಪಿ ವೆಂಕಟಪ್ಪ ಪ್ರಶಸ್ತಿ, ದಾನಚಿಂತಾಮಣಿ ಅತ್ತಿಮಬ್ಬೆ ಪ್ರಶಸ್ತಿ ಮತ್ತು ಕುಮಾರವ್ಯಾಸ ಪ್ರಶಸ್ತಿಗಳಿಗೆ ಅರ್ಹರನ್ನು ಆಯ್ಕೆ ಮಾಡಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವೆ ಉಮಾಶ್ರೀ ಪಕ್ರಟಣೆಯಲ್ಲಿ ತಿಳಿಸಿದ್ದಾರೆ. ಪ್ರಶಸ್ತಿ ಪಡೆದವರ ವಿವಿರ ಹೀಗಿದೆ.

ಸಂತ ಶಿಶುನಾಳ ಷರೀಫ ಪ್ರಶಸ್ತಿ
2012ನೇ ಸಾಲಿನ ಸಂತ ಶಿಶುನಾಳ ಷರೀಫ ಪ್ರಶಸ್ತಿಗೆ ಬೆಂಗಳೂರಿನ ಎಸ್.ಸೋಮಸುಂದರಮ್ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಶ್ರೀ ನಾರಾಯಣರಾವ್ ಮಾನೆ, ಅವರ ಅಧ್ಯಕ್ಷತೆಯಲ್ಲಿ ರಚಿಸಲಾಗಿದ್ದ ಆಯ್ಕೆ ಸಮಿತಿಯು ಸೋಮಸುಂದರಮ್ ಅವರನ್ನು ಆಯ್ಕೆ ಮಾಡಿದೆ. ಈ ಪ್ರಶಸ್ತಿಯು 3 ಲಕ್ಷ ರೂ. ನಗದು, ಸ್ಮರಣಿಕೆ ಹಾಗೂ ಪ್ರಶಸ್ತಿ ಪತ್ರವನ್ನು ಒಳಗೊಂಡಿದೆ.

ಶ್ರೀ ನಿಜಗುಣ ಪುರಂದರ ಪ್ರಶಸ್ತಿ
ಧಾರವಾಡದ ಪಂ.ಸಂಗಮೇಶ್ವರ ಗುರವ ಅವರನ್ನು ಶ್ರೀ ನಿಜಗುಣ ಪುರಂದರ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಶ್ರೀ ರಾಜಶೇಖರ ಮನ್ಸೂರ ಅವರ ಅಧ್ಯಕ್ಷತೆಯಲ್ಲಿ ರಚಿಸಲಾಗಿದ್ದ ಸಮಿತಿಯು ಪಂ.ಸಂಗಮೇಶ್ವರ ಗುರವ ಅವರನ್ನು ಆಯ್ಕೆ ಮಾಡಿದೆ. ಪ್ರಶಸ್ತಿಯು 3 ಲಕ್ಷ ರೂ. ನಗದು, ಸ್ಮರಣಿಕೆ ಹಾಗೂ ಪ್ರಶಸ್ತಿ ಪತ್ರವನ್ನು ಒಳಗೊಂಡಿದೆ.

ವರ್ಣಶಿಲ್ಪಿ ವೆಂಕಟಪ್ಪ ಪ್ರಶಸ್ತಿ
ಬೆಂಗಳೂರಿನ ಶ್ರೀ ಯು.ಭಾಸ್ಕರರಾವ್ ಅವರಿಗೆ ವರ್ಣಶಿಲ್ಪಿ ವೆಂಕಟಪ್ಪ ಪ್ರಶಸ್ತಿ ನೀಡಲಾಗಿದೆ. ಚಂದ್ರನಾಥ ಆಚಾರ್ಯ ಅವರ ಅಧ್ಯಕ್ಷತೆಯಲ್ಲಿ ರಚಿಸಲಾದ ಆಯ್ಕೆ ಸಮಿತಿಯು ಇವರನ್ನು ಆಯ್ಕೆ ಮಾಡಿದೆ. ಈ ಪ್ರಶಸ್ತಿಯು 3 ಲಕ್ಷ ರೂ. ನಗದು, ಸ್ಮರಣಿಕೆ ಹಾಗೂ ಪ್ರಶಸ್ತಿ ಪತ್ರ ಒಳಗೊಂಡಿದೆ.

ದಾನಚಿಂತಾಮಣಿ ಅತ್ತಿಮಬ್ಬೆ ಪ್ರಶಸ್ತಿ
ಬೆಂಗಳೂರಿನ ಡಾ.ಬಿ.ಎನ್.ಸುಮಿತ್ರಾಬಾಯಿ ಅವರನ್ನು 2012ರ ದಾನಚಿಂತಾಮಣಿ ಅತ್ತಿಮಬ್ಬೆ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಪ್ರಶಸ್ತಿಯು 3 ಲಕ್ಷ ರೂ. ನಗದು, ಸ್ಮರಣಿಕೆ ಮತ್ತು ಪ್ರಶಸ್ತಿ ಪತ್ರವನ್ನು ಒಳಗೊಂಡಿದೆ. ಡಾ.ಸರಸ್ವತಿ ಚಿಮ್ಮಲಗಿ ಅವರ ಅಧ್ಯಕ್ಷತೆಯ ಆಯ್ಕೆ ಸಮಿತಿ ಇವರನ್ನು ಪ್ರಶಸ್ತಿಗಾಗಿ ಆಯ್ಕೆ ಮಾಡಿದೆ.

ಕುಮಾರವ್ಯಾಸ ಪ್ರಶಸ್ತಿ
2012ನೇ ಸಾಲಿನ ಕುಮಾರವ್ಯಾಸ ಪ್ರಶಸ್ತಿಗೆ ಶಿವಮೊಗ್ಗ ಜಿಲ್ಲೆಯ ಶ್ರೀ ಮಾರ್ಕಂಡೇಯ ಅವಧಾನಿ ಅವರನ್ನು ಆಯ್ಕೆ ಮಾಡಲಾಗಿದೆ. ಈ ಪ್ರಶ್ತಿಯು 3 ಲಕ್ಷ ರೂ. ನಗದು ಬಹುಮಾನ, ಸ್ಮರಣಿಕೆ ಮತ್ತು ಪ್ರಶಸ್ತಿ ಪತ್ರವನ್ನು ಒಳಗೊಂಡಿದೆ. ಎಂ.ಆರ್.ಸತ್ಯನಾರಾಯಣ ಅವರ ಅಧ್ಯಕ್ಷತೆಯಲ್ಲಿ ಪ್ರಶಸ್ತಿಗಾಗಿ ಅರ್ಹರನ್ನು ಆಯ್ಕೆ ಮಾಡಲು ಸಮಿತಿ ರಚಿಸಲಾಗಿತ್ತು.












Click it and Unblock the Notifications