ಕರ್ನಾಟಕ ಸರ್ಕಾರ: ಕಲೆ, ಸಾಹಿತ್ಯ ಗಣ್ಯರಿಗೆ ಗೌರವ, ಸಾಂಸ್ಕೃತಿಕ ಪ್ರಶಸ್ತಿಗಳ ಆಯ್ಕೆ ಪಟ್ಟಿ ಪ್ರಕಟ
ಬೆಂಗಳೂರು: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ನೀಡಲಾಗುವ 2025 26 ನೇ ಸಾಲಿನ ವಿವಿಧ ಪ್ರಶಸ್ತಿಗಳಿಗೆ ಗಣ್ಯರನ್ನು ಆಯ್ಕೆ ಮಾಡಲಾಗಿದೆ. 'ಪಂಪ ಪ್ರಶಸ್ತಿ, ಡಾ ಗುಬ್ಬಿ ವೀರಣ್ಣ ಪ್ರಶಸ್ತಿ, ಬಿ ವಿ ಕಾರಂತ ಪ್ರಶಸ್ತಿ, ಸಾಹಿತ್ಯ ಪ್ರಶಸ್ತಿ, ಜಕಣಾಚಾರಿ ಪ್ರಶಸ್ತಿ, ಜಾನಪದ ಶ್ರೀ ಪ್ರಶಸ್ತಿಗಳು' ಸೇರಿದಂತೆ ಹಲವು ಪ್ರಶಸ್ತಿಗಳಿಗೆ ನಾಡಿನ ಸಾಧಕರನ್ನು ಪುರಸ್ಕರಿಸಲಾಗುವುದು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಇಲಾಖೆಯ ಸಚಿವ ಶಿವರಾಜ ತಂಗಡಗಿ ಬುಧವಾರ ತಿಳಿಸಿದರು. ಪ್ರಶಸ್ತಿಗಳು ಯಾವುವು ಮತ್ತು ಪುರಸ್ಕೃತರ ಮಾಹಿತಿ ಇಲ್ಲಿದೆ.
ಪ್ರಶಸ್ತಿ ಪುರಸ್ಕೃತರ ಪಟ್ಟಿ ಹೀಗಿದೆ
ಪ್ರತಿಷ್ಠಿತ 'ಬಸವ ರಾಷ್ಟ್ರೀಯ ಪುರಸ್ಕಾರ'ಕ್ಕೆ ಸಿದ್ದರಾಮ ಶರಣರು ಬೆಲ್ದಾಳ, 'ಶ್ರೀ ಭಗವಾನ್ ಮಹಾವೀರ ಶಾಂತಿ ರಾಷ್ಟ್ರೀಯ ಪುರಸ್ಕಾರ'ಕ್ಕೆ ಭಾನು ಕೀರ್ತಿ ಭಟ್ಟಾರಕ ಸ್ವಾಮೀಜಿ ಹಾಗೂ ಪ್ರತಿಷ್ಠಿತ 'ಪಂಪ ಪ್ರಶಸ್ತಿ'ಗೆ ದೇವನೂರು ಮಹಾದೇವ ಅವರು ಭಾಜನರಾಗಿದ್ದಾರೆ

'ಕೆ.ಜಿ.ಕುಂದಣಗಾರ ಗಡಿನಾಡ ಸಾಹಿತ್ಯ ಪ್ರಶಸ್ತಿ'ಗೆ ಅಲ್ಲಾಭಕ್ಷ್ ಮೀರಸಾಹೇಬ ಮಿರ್ಜಿ,
'ದಾನಚಿಂತಾಮಣಿ ಅತ್ತಿಮಬ್ಬೆ ಪ್ರಶಸ್ತಿ'ಗೆ ಡಾ. ಸುಕನ್ಯಾ ಮಾರುತಿ, 'ಡಾ ಗುಬ್ಬಿ ವೀರಣ್ಣ ಪ್ರಶಸ್ತಿ'ಗೆ ಶ್ರೀಮತಿ ಜಿ ವಿ ಶಾರದಾ, 'ಬಿ.ವಿ ಕಾರಂತ ಪ್ರಶಸ್ತಿಗೆ ರಂಗಕರ್ಮಿ ಪ್ರಸನ್ನ (ಶಿವಮೊಗ್ಗ).
'ಡಾ. ಸಿದ್ದಲಿಂಗಯ್ಯ ಸಾಹಿತ್ಯ ಪ್ರಶಸ್ತಿ'ಗೆ ಗಂಗಾರಾಮ ಚಂಡಾಳ (ಕೋಲಾರ), 'ವರ್ಣಶಿಲ್ಪಿ ವೆಂಕಟಪ್ಪ ಪ್ರಶಸ್ತಿ'ಗೆ ವಿ ಹರಿ ರಾಮ್, 'ಜಕಣಾಚಾರಿ ಪ್ರಶಸ್ತಿ'ಗೆ ಅಶೋಕ್ ಗುಡಿಗಾರ್, 'ಜಾನಪದ ಶ್ರೀ ಪ್ರಶಸ್ತಿ'ಗೆ ಎಂ ಮಹದೇವಸ್ವಾಮಿ ಹಾಗೂ ಬಿ.ಲಕ್ಷ್ಮಣ ಅವರನ್ನು ಆಯ್ಕೆ ಮಾಡಲಾಗಿದೆ. ಇನ್ನೂ 'ಸಂಗೊಳ್ಳಿ ರಾಯಣ್ಣ ಪ್ರಶಸ್ತಿ' ಸಿದ್ದನಗೌಡ ಪಾಟೀಲ್ (ಧಾರವಾಡ) ಅವರು ಭಾಜನರಾಗಿದ್ದಾರೆ.
'ಅಕ್ಕಮಹಾದೇವಿ ಪ್ರಶಸ್ತಿ' ಶ್ರೀಮತಿ ಕೆ ನೀಲಾ, 'ಕಾಯಕಯೋಗಿ ಶ್ರೀ ಸಿದ್ದರಾಮೇಶ್ವರ ಪ್ರಶಸ್ತಿ'ಗೆ ಪ್ರೊ.ಎಸ್ ಜಿ ಸಿದ್ದರಾಮಯ್ಯ, 'ಕುಮಾರವ್ಯಾಸ ಪ್ರಶಸ್ತಿ' ಕಲ್ಲಿನಾಥ ಶಾಸ್ತ್ರಿ(ಗದಗ), 'ನಾಟ್ಯರಾಣಿ ಶಾಂತಲಾ ಪ್ರಶಸ್ತಿ'ಗೆ ಶ್ರೀಮತಿ ಪ್ರತಿಭಾ ಪ್ರಹ್ಲಾದ್ ಅವರನ್ನು ಆಯ್ಕೆ ಮಾಡಲಾಗಿದೆ.

ನಗದು, ಸ್ಮರಣಿಕೆ ನೀಡಿ ಪುರಸ್ಕೃತರಿಗೆ ಗೌರವ
ಎಲ್ಲಾ ಪ್ರಶಸ್ತಿ ಪುರಸ್ಕೃತರಿಗೆ ಹಾರ್ದಿಕ ಅಭಿನಂದನೆ ತಿಳಿಸಿರುವ ಸಚಿವ ಶಿವರಾಜ ತಂಗಡಗಿ ಅವರು, ಶೀಘ್ರದಲ್ಲಿಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ದಿನಾಂಕ ನಿಗದಿ ಮಾಡಿ ಪ್ರಶಸ್ತಿ ಪ್ರಧಾನ ಸಮಾರಂಭವನ್ನು ಆಯೋಜನೆ ಮಾಡಲಾಗುವುದು. ಪುರಸ್ಕೃತರನ್ನು ಗೌರವಿಸಲಾಗುವುದು ಎಂದು ಹೇಳಿದ್ದಾರೆ.
ಇನ್ನೂ ಮೇಲಿನ ಪ್ರಶಸ್ತಿಗಳ ಪೈಕಿ ರಾಷ್ಟ್ರೀಯ ಪ್ರಶಸ್ತಿಗೆ ತಲಾ10 ಲಕ್ಷ ರೂ.ನಗದು ಹಾಗೂ ಉಳಿದ ಎಲ್ಲಾ ಪ್ರಶಸ್ತಿಗಳಿಗೂ ತಲಾ 5 ಲಕ್ಷ ರೂಪಾಯಿ ನಗದು ಹಾಗೂ ಪ್ರಶಸ್ತಿ ಫಲಕ, ಸ್ಮರಣಿಕೆ ಒಳಗೊಂಡಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
-
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ -
ದ್ವಿತೀಯ PUC ಪರೀಕ್ಷೆ-2: ಅನುತ್ತೀರ್ಣರಾದ ವಿದ್ಯಾರ್ಥಿಗಳಿಗಾಗಿ ಸರ್ಕಾರಿ ಕಾಲೇಜುಗಳಲ್ಲಿ ವಿಶೇಷ ತರಗತಿಗಳು ಆರಂಭ












Click it and Unblock the Notifications