ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕನ್ನಡ ಪುಸ್ತಕ ಪ್ರಾಧಿಕಾರದ 2020ನೇ ಸಾಲಿನ ವಾರ್ಷಿಕ ಪ್ರಶಸ್ತಿ ಪ್ರಕಟ

|
Google Oneindia Kannada News

ಬೆಂಗಳೂರು, ಜುಲೈ 2: "ಕನ್ನಡ ಪುಸ್ತಕ ಪ್ರಾಧಿಕಾರದ 2020ನೇ ಸಾಲಿನ ವಾರ್ಷಿಕ ಪ್ರಶಸ್ತಿ ಆಯ್ಕೆ ಪ್ರಕ್ರಿಯೆ ಪೂರ್ಣಗೊಂಡಿದ್ದು, ಹಿರಿಯ ಸಾಹಿತಿ, ಚಿಂತಕ ಡಾ. ಟಿ.ವಿ. ವೆಂಕಟಾಚಲ ಶಾಸ್ತ್ರೀ ಅವರನ್ನು ಡಾ. ಎಂ.ಎಂ. ಕಲಬುರ್ಗಿ ಮಾನವಿಕ ಅಧ್ಯಯನ ಪ್ರಶಸ್ತಿಗಾಗಿ ಆಯ್ಕೆ ಮಾಡಲಾಗಿದೆ," ಎಂದು ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷ ಡಾ. ಎಂ.ಎನ್. ನಂದೀಶ್ ಹಂಚೆ ಹೇಳಿದ್ದಾರೆ.

ಕನ್ನಡ ಪುಸ್ತಕ ಪ್ರಾಧಿಕಾರದಿಂದ ನೀಡಲಾಗುವ ಅತ್ಯುತ್ತಮ ಪ್ರಕಾಶನ ಪ್ರಶಸ್ತಿಯನ್ನು ಹುಬ್ಬಳ್ಳಿಯ ಸಾಹಿತ್ಯ ಪ್ರಕಾಶನಕ್ಕೆ ನೀಡಲಾಗಿದೆ. ಡಾ.ಜೆ.ಪಿ. ರಾಜರತ್ನಂ ಸಾಹಿತ್ಯ ಪರಿಚಾರಕ ಪ್ರಶಸ್ತಿಗೆ ಮೈಸೂರಿನ ಸಯ್ಯದ್ ಇಸಾಕ್‌ರನ್ನು ಆಯ್ಕೆ ಮಾಡಲಾಗಿದೆ.

ಡಾ. ಅನುಪಮ ನಿರಂಜನ ವೈದ್ಯಕೀಯ ಹಾಗೂ ವಿಜ್ಞಾನ ಸಾಹಿತ್ಯ ಪ್ರಶಸ್ತಿಯನ್ನು ಡಾ. ಸುಧೀಂದ್ರ ಹಾಲ್ದೊಡ್ಡೇರಿ ಅವರಿಗೆ ನೀಡಲಾಗಿದೆ ಎಂದು ಡಾ. ಎಂ.ಎನ್. ನಂದೀಶ್ ಹಂಚೆ ತಿಳಿಸಿದ್ದಾರೆ. ಆದರೆ ಶುಕ್ರವಾರದಂದು ಡಾ. ಸುಧೀಂದ್ರ ಹಾಲ್ದೊಡ್ಡೇರಿ ನಿಧನರಾದರು. ಮರಣೋತ್ತರವಾಗಿ ಪ್ರಶಸ್ತಿ ನೀಡಲಾಗುವುದು.

kannada book authority announced 2020 annual awards

"ಪುಸ್ತಕ ಬಹುಮಾನಗಳ ಆಯ್ಕೆ ಪ್ರಕ್ರಿಯೆ ನಡೆದಿದ್ದು, ಕೆಲವು ದಿನಗಳಲ್ಲೇ ಪ್ರಕಟ ಮಾಡಲಾಗುವುದು," ಎಂದು ನಂದೀಶ್ ಹಂಚೆ ಹೇಳಿದ್ದಾರೆ.

* ಅತ್ಯುತ್ತಮ ಪ್ರಕಾಶನ ಪ್ರಶಸ್ತಿ 1.00 ಲಕ್ಷ ರೂ. ನಗದು ಹಾಗೂ ಪ್ರಶಸ್ತಿ ಫಲಕ ಒಳಗೊಂಡಿರುತ್ತದೆ.

* ಡಾ. ಎಂ.ಎಂ. ಕಲಬುರ್ಗಿ ಮಾನವಿಕ ಅಧ್ಯಯನ ಪ್ರಶಸ್ತಿ 75,000 ರೂ. ನಗದು ಹಾಗೂ ಪ್ರಶಸ್ತಿ ಫಲಕ ಒಳಗೊಂಡಿದೆ.

* ಡಾ. ಜೆ.ಪಿ. ರಾಜರತ್ನಂ ಸಾಹಿತ್ಯ ಪರಿಚಾರಕ ಪ್ರಶಸ್ತಿ 50,000 ರೂ. ನಗದು ಹಾಗೂ ಪ್ರಶಸ್ತಿ ಫಲಕ ಒಳಗೊಂಡಿದೆ.

Recommended Video

ಸಿದ್ದರಾಮಯ್ಯ ಮುಂದೆ ನಡೀಲಿಲ್ಲ ಡಿಕೆಶಿ ಆಟ | Karnataka Congress Inside Politics | Oneindia Kannada

* ಡಾ. ಅನುಪಮಾ ನಿರಂಜನ ವೈದ್ಯಕೀಯ ಹಾಗೂ ವಿಜ್ಞಾನ ಸಾಹಿತ್ಯ ಪ್ರಶಸ್ತಿ 25,000 ರೂ. ನಗದು ಹಾಗೂ ಪ್ರಶಸ್ತಿ ಫಲಕ ಒಳಗೊಂಡಿದೆ.

English summary
Kannada Book Authority Announced 2020 Annual Awards; Here is the list of winners.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X