Chetan Kumar : ಕನ್ನಡ ನಟ ಚೇತನ್ ಬಂಧನ, 14 ದಿನ ನ್ಯಾಯಾಂಗ ಬಂಧನ

ಬೆಂಗಳೂರಿನ ಶೇಷಾದ್ರಿಪುರಂ ಪೊಲೀಸರು ಕನ್ನಡ ನಟ ಚೇತನ್ ಅಹಿಂಸಾ ಬಂಧಿಸಿದ್ದಾರೆ.

ಬೆಂಗಳೂರು, ಮಾರ್ಚ್ 21; ಕನ್ನಡ ಚಿತ್ರ ನಟ, ಹೋರಾಟಗಾರ ಚೇತನ್ ಅಹಿಂಸಾ (ಚೇತನ್ ಕುಮಾರ್) ಬಂಧಿಸಲಾಗಿದೆ. ಬೆಂಗಳೂರಿನ ಶೇಷಾದ್ರಿಪುರಂ ಪೊಲೀಸರು ಬಂಧಿಸಿದ್ದು, ನ್ಯಾಯಾಲಯಕ್ಕೆ ಹಾಜರುಪಡಿಸಿದರು. ಕೋರ್ಟ್ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶ ಹೊರಡಿಸಿದೆ.

ಮಂಗಳವಾರ ಶೇಷಾದ್ರಿಪುರಂ ಪೊಲೀಸರು ನಟ ಚೇತನ್ ಅಹಿಂಸಾ ಬಂಧಿಸಿದ್ದಾರೆ. ಹಿಂದುತ್ವದ ಬಗ್ಗೆ ಅವಹೇಳನಕಾರಿ ಪೋಸ್ಟ್‌ಗಳನ್ನು ಸಾಮಾಜಿಕ ಜಾಲತಾಣದಲ್ಲಿ ಅವರು ಹಾಕಿದ್ದರು. ಈ ಕುರಿತು ಹಿಂದೂಪರ ಸಂಘಟನೆಗಳು ಪೊಲೀಸರಿಗೆ ದೂರು ನೀಡಿದ್ದವು. ಈ ಕುರಿತು ಎಫ್‌ಐಆರ್ ದಾಖಲಾಗಿತ್ತು.

Kannada Film Actor Chetan Ahimsa Arrested By Bengaluru Police

ದೂರಿನ ಅನ್ವಯ ಐಪಿಸಿ ಸೆಕ್ಷನ್ 295ಎ, 505ಬಿ ಅಡಿಯಲ್ಲಿ ಪೊಲೀಸರು ಎಫ್‌ಐಆರ್ ದಾಖಲು ಮಾಡಿಕೊಂಡಿದ್ದರು. ಈ ಹಿನ್ನಲೆಯಲ್ಲಿ ನಟ ಚೇತನ್ ಅಹಿಂಸಾ ಬಂಧಿಸಲಾಗಿದೆ. ಬಂಧನದ ಬಳಿಕ ನ್ಯಾಯಾಲಯಕ್ಕೆ ಹಾಜರುಪಡಿಸಿ ಮುಂದಿನ ಕ್ರಮವನ್ನು ಪೊಲೀಸರು ಕೈಗೊಳ್ಳಲಿದ್ದಾರೆ. ಚೇತನ್ ಪರ ವಕೀಲರು ಕೋರ್ಟ್‌ನಲ್ಲಿ ಜಾಮೀನು ಅರ್ಜಿ ಸಲ್ಲಿಕೆ ಮಾಡಲು ಸಹ ತಯಾರಿ ಮಾಡಿಕೊಂಡಿದ್ದಾರೆ. ಮಂಜೂರು ಆಗುವ ಸಾಧ್ಯತೆ ಇದೆ.

ಶೇಷಾದ್ರಿಪುರಂ ಪೊಲೀಸರು ನಟ ಚೇತನ್‌ ಅಹಿಂಸಾರನ್ನು ಬೆಂಗಳೂರಿನ 32ನೇ ಎಸಿಎಂಎಂ ಕೋರ್ಟ್‌ಗೆ ಹಾಜರುಪಡಿಸಿದರು. ಇದೇ ವೇಳೆ ಚೇತನ್ ಪರ ವಕೀಲರು ಕೋರ್ಟ್‌ನಲ್ಲಿ ಜಾಮೀನು ಅರ್ಜಿ ಸಲ್ಲಿಕೆ ಮಾಡಿದರು. ಕೋರ್ಟ್‌ ನಟನನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶ ಹೊರಡಿಸಿದೆ.

chetan ahimsa

ಜಾಮೀನಿಗಾಗಿ ಅರ್ಜಿ; ನಟ ಚೇತನ್ ಪರ ವಕೀಲರು ಕೋರ್ಟ್‌ನಲ್ಲಿ ಜಾಮೀನು ಅರ್ಜಿ ಸಲ್ಲಿಕೆ ಮಾಡಿದರು. ಹಿಂದುತ್ವ ವಿರೋಧಿ ಪೋಸ್ಟ್‌ ಅನ್ನು ಚೇತನ್ ಅವರೇ ಬರೆದಿದ್ದಾರೆ ಎನ್ನುವುದಕ್ಕೆ ಸಾಕ್ಷಿ ಇಲ್ಲ. ಈ ಬಗ್ಗೆ ಪೊಲೀಸರು ಸುಳ್ಳು ಕೇಸ್ ದಾಖಲು ಮಾಡಿಕೊಂಡಿದ್ದಾರೆ. ಆದ್ದರಿಂದ ಚೇತನ್ ಬಿಡುಗಡೆ ಮಾಡಬೇಕು ಎಂದು ವಾದ ಮಂಡಿಸಿದರು. ಈ ಬಗ್ಗೆ ವಿವರವಾದ ತನಿಖೆ ಅಗತ್ಯ ಇರುವ ಕಾರಣಕ್ಕಾಗಿಯೇ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಕೋರ್ಟ್‌ ಹೇಳಿತು. ಚೇತನ್‌ರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ ಕಾರಣ ಪೊಲೀಸರು ಅವರನ್ನು ಪರಪ್ಪನ ಅಗ್ರಹಾರಕ್ಕೆ ಕರೆದುಕೊಂಡು ಹೋದರು.

ಫೇಸ್‌ ಬುಕ್ ಪೋಸ್ಟ್‌ನಲ್ಲಿ ಏನಿದೆ?; ನಟ ಚೇತನ್ ಕುಮಾರ್ ಹಿಂದೂ ಧರ್ಮ, ಬ್ರಾಹ್ಮಣ್ಯದ ವಿರುದ್ಧ ಪೋಸ್ಟ್‌ ಹಾಕುತ್ತಿರುವುದು ಇದೇ ಮೊದಲಲ್ಲ. ಆದರೆ ಈಗ ಹಾಕಿರುವ ಒಂದು ಪೋಸ್ಟ್‌ ಅವರನ್ನು ಜೈಲು ಸೇರುವಂತೆ ಮಾಡಿದೆ. ಈ ಪೋಸ್ಟ್‌ನ ಕಮೆಂಟ್‌ ಸೆಕ್ಷನ್‌ನಲ್ಲಿಯೂ ಪೋಸ್ಟ್‌ ಬಗ್ಗೆ ಭಾರೀ ಚರ್ಚೆಯಾಗಿದೆ.

ಪೋಸ್ಟ್‌ನಲ್ಲಿ, "ಹಿಂದುತ್ವವನ್ನು ಸುಳ್ಳಿನ ಆಧಾರದ ಮೇಲೆ ಕಟ್ಟಲಾಗಿದೆ" ಎಂದು ಬರೆಯಲಾಗಿದೆ.

ಸಾರ್ವಕರ್ ಹೇಳಿಕೆ; ರಾಮನು ರಾವಣನನ್ನು ಸೋಲಿಸಿ ಅಯೋಧ್ಯಗೆ ಹಿಂದಿರುಗಿದಾಗ ಭಾರತೀಯ 'ರಾಷ್ಟ್ರ' ಪ್ರಾರಂಭವಾಯಿತು. ಇದು ಒಂದು ಸುಳ್ಳು.

1992ರಲ್ಲ; ಬಾಬರಿ ಮಸೀದಿ ರಾಮನ ಜನ್ಮಭೂಮಿ ಇದು ಒಂದು ಸುಳ್ಳು

ಈಗ 2023ರಲ್ಲಿ; ಉರಿಗೌಡ ಮತ್ತು ನಂಜೇಗೌಡರು ಟಿಪ್ಪುವನ್ನು ಕೊಂದರು ಇದು ಕೂಡ ಒಂದು ಸುಳ್ಳು.

ಹಿಂದುತ್ವವನ್ನು ಸತ್ಯದಿಂದ ಸೋಲಿಸಬಹುದು. ಸತ್ಯವೇ ಸಮಾನತೆ

ಚೇತನ್ ಅಹಿಂಸಾ
ಚಲನಚಿತ್ರ ನಟ, ಸಾಮಾಜಿಕ ಹೋರಾಟಗಾರರು ಎಂದು ಪೋಸ್ಟ್ ಹಾಕಿದ್ದರು.

2022ರ ಫೆಬ್ರವರಿ ತಿಂಗಳಿನಲ್ಲಿಯೂ ನಟ ಚೇತನ್ ಕುಮಾರ್ ಬಂಧಿಸಲಾಗಿತ್ತು. ಹಿಜಾಬ್ ವಿಚಾರವನ್ನು ಪ್ರಸ್ತಾಪಿಸಿ ಕರ್ನಾಟಕ ಹೈಕೋರ್ಟ್‌ ಜಡ್ಜ್ ಒಬ್ಬರ ವಿರುದ್ಧ ಆಕ್ಷೇಪಾರ್ಹ ವ್ಯಾಖ್ಯಾನ ಮಾಡಿದ್ದರು. ಈ ಕುರಿತು ಫೇಸ್‌ಬುಕ್ ಮತ್ತು ಟ್ವೀಟ್‌ನಲ್ಲಿ ಪೋಸ್ಟ್‌ಗಳನ್ನು ಅವರು ಹಾಕಿದ್ದರು. ಈ ಹಿನ್ನಲೆಯಲ್ಲಿ ಅವರನ್ನು ಬಂಧಿಸಲಾಗಿತ್ತು, ಕೋರ್ಟ್‌ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶ ಹೊರಡಿಸಿತ್ತು. ಬಳಿಕ ಕೋರ್ಟ್‌ನಿಂದ ಜಾಮೀನು ಪಡೆದ ಬಳಿಕ ಅವರು ಬಿಡುಗಡೆಗೊಂಡಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+