ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕನ್ನಡ ರಾಜ್ಯೋತ್ಸವ: ಜೆಡಿಎಸ್‌ನಿಂದ ಮನೆ ಮನೆಯ ಮೇಲೆಯೂ ಕನ್ನಡ ಬಾವುಟ ಅಭಿಯಾನ

|
Google Oneindia Kannada News

ಬೆಂಗಳೂರು, ಅ. 19: ಕನ್ನಡ ರಾಜ್ಯೋತ್ಸವಕ್ಕೆ ರಾಜ್ಯ ಸಿದ್ಧವಾಗುತ್ತಿರುವ ಸಮಯದಲ್ಲಿ ಜೆಡಿಎಸ್‌ ಕೂಡ ಹೊಸ ಅಭಿಯಾನ ಆರಂಭಿಸಲು ನಿರ್ಧರಿಸಿದೆ. ನವೆಂಬರ್ 1ರಂದು ಕನ್ನಡ ರಾಜ್ಯೋತ್ಸವ ನಿಮಿತ್ತ ಮನೆ ಮನೆಯ ಮೇಲೆ ಕನ್ನಡ ಬಾವುಟ ಹಾರಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ಈ ಬಗ್ಗೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮಾಹಿತಿ ಹಂಚಿಕೊಂಡಿದ್ದಾರೆ.

ಮುಂದಿನ ವಿಧಾನಸಭೆ ಚುನಾವಣೆಗೆ ಪಕ್ಷವನ್ನು ಸಜ್ಜುಗೊಳಿಸುವುದು, ನವೆಂಬರ್ 1ರಿಂದ ಆರಂಭವಾಗಲಿರುವ ಪಂಚರತ್ನ ರಥಯಾತ್ರೆ, ಪಕ್ಷ ಸಂಘಟನೆ ಸೇರಿದಂತೆ ಇತ್ಯಾದಿ ಪ್ರಮುಖ ಅಂಶಗಳ ಅಜೆಂಡಾ ಇಟ್ಟುಕೊಂಡು ಜಾತ್ಯತೀತ ಜನತಾದಳ ಪಕ್ಷವು ಮೈಸೂರಿನಲ್ಲಿ ಬುಧವರಾ ಮತ್ತು ಗುರುವಾರ ಸಮಾಲೋಚನಾ ಸಭೆಯನ್ನು ನಡೆಸುತ್ತಿದೆ.

ಮೈಸೂರು; ಜೆಡಿಎಸ್‌ ಟಿಕೆಟ್ ಆಕಾಂಕ್ಷಿಗಳಿಗೆ 2 ದಿನದ ಕಾರ್ಯಾಗಾರಮೈಸೂರು; ಜೆಡಿಎಸ್‌ ಟಿಕೆಟ್ ಆಕಾಂಕ್ಷಿಗಳಿಗೆ 2 ದಿನದ ಕಾರ್ಯಾಗಾರ

ಈ ಬಗ್ಗೆ ಮಾಹಿತಿ ನೀಡಿರುವ ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ, ಎರಡು ದಿನಗಳ ಈ ಕಾರ್ಯಾಗಾರ ಪಕ್ಷದ ಸಂಘಟನೆ ದೃಷ್ಟಿಯಿಂದ ಅತ್ಯಂತ ಮಹತ್ವದ್ದು. ನಮ್ಮ ಪಕ್ಷದ ನಾಯಕರಿಗೆ ಮುಂದಿನ ಕಾರ್ಯತಂತ್ರದ ಬಗ್ಗೆ ಸ್ಪಷ್ಟ ದಿಕ್ಸೂಚಿ ನೀಡಲಾಗುವುದು ಎಂದಿದ್ದಾರೆ.

ಸಮಾವೇಶದಲ್ಲಿ ಎಚ್.ಡಿ.ದೇವೇಗೌಡರು ಭಾಗಿ

ಸಮಾವೇಶದಲ್ಲಿ ಎಚ್.ಡಿ.ದೇವೇಗೌಡರು ಭಾಗಿ

ಮಾಜಿ ಪ್ರಧಾನಮಂತ್ರಿ, ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡರು ಈ ಮಹತ್ವದ ಸಮಾಲೋಚನಾ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ.

ಹಾಗೆಯೇ ಪಕ್ಷದ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ, ಕೋರ್ ಕಮಿಟಿ ಅಧ್ಯಕ್ಷ ಬಂಡೆಪ್ಪ ಕಾಷೆಂಪೂರ್, ಸಂಸದೀಯ ಮಂಡಳಿ ಅಧ್ಯಕ್ಷ ಹೆಚ್.ಕೆ.ಕುಮಾರಸ್ವಾಮಿ ಸೇರಿದಂತೆ ಪಕ್ಷದ ಎಲ್ಲ ಶಾಸಕರು, ವಿಧಾನ ಪರಿಷತ್ ಸದಸ್ಯರು, ಮಾಜಿ ಶಾಸಕರು, ಮುಂಬರುವ ವಿಧಾನಸಭೆ ಚುನಾವಣೆಯ ಸಂಭವನೀಯ ಅಭ್ಯರ್ಥಿಗಳು, ಪಕ್ಷದ ಜಿಲ್ಲಾ ಘಟಕಗಳ ಅಧ್ಯಕ್ಷರು ಸೇರಿದಂತೆ ಆಯ್ದ ಪ್ರಮುಖ ನಾಯಕರು ಈ ಸಭೆಯಲ್ಲಿ ಭಾಗಿಯಾಗಲಿದ್ದಾರೆ ಎಂದು ಕುಮಾರಸ್ವಾಮಿ ಮಾಹಿತಿ ನೀಡಿದ್ದಾರೆ.

ಗ್ರಾಮ ವಾಸ್ತವ್ಯ, ಜನ ಸಂಪರ್ಕ ಸಭೆ, ಸಮಾವೇಶದ ಬಗ್ಗೆ ಚರ್ಚೆ

ಗ್ರಾಮ ವಾಸ್ತವ್ಯ, ಜನ ಸಂಪರ್ಕ ಸಭೆ, ಸಮಾವೇಶದ ಬಗ್ಗೆ ಚರ್ಚೆ

ನವೆಂಬರ್ 1ರಿಂದ ಪಂಚರತ್ನ ರಥಯಾತ್ರೆ ಅರಂಭವಾಗುತ್ತಿದ್ದು, ಯಾತ್ರೆಯ ಅಂತಿಮ ಹಂತದ ಸಿದ್ಧತೆಗಳ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಯಲಿದೆ. ಅಲ್ಲದೆ, ರಥಯಾತ್ರೆ ಹೇಗಿರುತ್ತದೆ..? ಅದರ ಸ್ವರೂಪವೇನು..? ಯಾವ ಮಾರ್ಗದಲ್ಲಿ ಸಾಗುತ್ತದೆ..? ಗ್ರಾಮ ವಾಸ್ತವ್ಯ, ಜನ ಸಂಪರ್ಕ ಸಭೆ, ಸಮಾವೇಶ ಇತ್ಯಾದಿ ಪ್ರಮುಖ ಅಂಶಗಳ ಬಗ್ಗೆ ಮಾಹಿತಿ ವಿನಿಮಯ ಮಾಡಿಕೊಳ್ಳಲಾಗುವುದು.

ಈ ಪೈಕಿ ಪಂಚರತ್ನ ಕಾರ್ಯಕ್ರಮಗಳಾದ ಶಿಕ್ಷಣ, ಆರೋಗ್ಯ, ಯುವ ಮತ್ತು ಮಹಿಳಾ ಸಬಲೀಕರಣ, ಕೃಷಿ, ನೀರಾವರಿ, ಉದ್ಯೋಗ, ವಸತಿ ಕಾರ್ಯಕ್ರಮಗಳ ಬಗ್ಗೆ ಜನರಿಗೆ ಮನದಟ್ಟು ಮಾಡಿಕೊಡುವ ಬಗ್ಗೆ ಸಭೆಯಲ್ಲಿ ಸೂಕ್ತ ಮಾರ್ಗದರ್ಶನ ನೀಡಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಹೇಳಿದ್ದಾರೆ.

ಮುಂಬರುವ ಚುನಾವಣೆಯ ಕಾರ್ಯತಂತ್ರದ ಬಗ್ಗೆ ಚರ್ಚೆ

ಮುಂಬರುವ ಚುನಾವಣೆಯ ಕಾರ್ಯತಂತ್ರದ ಬಗ್ಗೆ ಚರ್ಚೆ

ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಪಕ್ಷ ಅನುಸರಿಸಬಹುದಾದ ಕಾರ್ಯತಂತ್ರದ ಬಗ್ಗೆ ಸಭೆಯಲ್ಲಿ ಪ್ರಮುಖವಾಗಿ ಚರ್ಚೆಯಾಗಲಿದೆ ಎಂದಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ, ಪ್ರತಿ ಕ್ಷೇತ್ರವೂ ನಮಗೆ ಮುಖ್ಯವಾಗಿದೆ ಎಂದಿದ್ದಾರೆ.

ಬಿಡದಿಯಲ್ಲಿ ನಡೆದ ಸಭೆಯಲ್ಲಿ ಅಭ್ಯರ್ಥಿಗಳಿಗೆ ಕೆಲ ಟಾಸ್ಕ್‌ಗಳನ್ನು ನೀಡಲಾಗಿತ್ತು. ಕೆಲವರು ಆ ಟಾಸ್ಕುಗಳನ್ನು ಅತ್ಯುತ್ತಮವಾಗಿ ಪೂರ್ಣಗೊಳಿಸಿದ್ದಾರೆ. ಕೆಲವರು ಪ್ರಾಮಾಣಿಕವಾಗಿ ಪೂರ್ಣಗೊಳಿಸಲು ಯತ್ನಿಸಿದ್ದಾರೆ. ಈ ಬಗ್ಗೆ ಸಭೆಯಲ್ಲಿ ಕೂಲಂಕಷವಾಗಿ ಗಮನಿಸಿ ಸೂಕ್ತ ಮಾರ್ಗದರ್ಶನ ನೀಡಲಾಗುವುದು ಎಂದು ಹೇಳಿದ್ದಾರೆ.

ಮನೆ ಮನೆಯ ಮೇಲೆಯೂ ಕನ್ನಡ ಬಾವುಟ

ಮನೆ ಮನೆಯ ಮೇಲೆಯೂ ಕನ್ನಡ ಬಾವುಟ

ನವೆಂಬರ್ 1ರಂದು ಕನ್ನಡ ರಾಜ್ಯೋತ್ಸವ ನಿಮಿತ್ತ ಮನೆ ಮನೆಯ ಮೇಲೆ ಕನ್ನಡ ಬಾವುಟ ಹಾರಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮವನ್ನು ಪಕ್ಷವು ರಾಜ್ಯದ ಜನತೆಯ ಜತೆಗೂಡಿ ಮಾಡುವ ಉದೇಶ ಹೊಂದಿದೆ. ಈ ಕಾರ್ಯಕ್ರಮದ ಸ್ವರೂಪ, ಪಕ್ಷದ ಪಾಲ್ಗೊಳ್ಳುವಿಕೆ ಮುಂತಾದ ಅಂಶಗಳ ಬಗ್ಗೆ ಸಭೆಯಲ್ಲಿ ಮಾಹಿತಿ ವಿನಿಮಯ ಮಾಡಿಕೊಳ್ಳಲಾಗುವುದು ಎಂದು ಹೇಳಿದ್ದಾರೆ.

ಜೆಡಿಎಸ್ ಪಕ್ಷವು ಬೇರೆಯದೇ ದಿಕ್ಕಿನಲ್ಲಿ ರಾಷ್ಟ್ರೀಯ ಪಕ್ಷಗಳಿಗೆ ಹೊರತಾದ ಜನಪರ ದಾರಿಯಲ್ಲಿ ಪ್ರಯಾಣ ಮಾಡುತ್ತಿದೆ. ಕಾಂಗ್ರೆಸ್ ಮತ್ತು ಬಿಜೆಪಿ ಆಡಳಿತದಿಂದ ರೋಸಿ ಹೋಗಿರುವ ಜನರಿಗೆ ಜನಪರ ಸರಕಾರ ನೀಡಬೇಕು ಉದ್ದೇಶದಿಂದಲೇ ಪಕ್ಷವು ಕೆಲಸ ಮಾಡುತ್ತಿದೆ. ಆ ನಿಟ್ಟಿನಲ್ಲಿ ಮೈಸೂರಿನ ಸಭೆ ನಿರ್ಣಾಯಕ ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ.

English summary
Kannada flag hoisting campaign on november 1st by JDS like har ghar tirang. JDS started two days workshop in mysuru for jds leaders. know more.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X