ಇನ್ಮುಂದೆ ಸರ್ಕಾರಿ ನಾಮಫಲಕಗಳಲ್ಲಿ ಕನ್ನಡ ಕಡ್ಡಾಯ: ಮಹತ್ವದ ಆದೇಶ ಪ್ರಕಟ

ಬೆಂಗಳೂರು, ಆಗಸ್ಟ್ 23: ಕರ್ನಾಟಕ ರಾಜ್ಯದಲ್ಲಿ ಕನ್ನಡವೇ ಆಡಳಿತ ಭಾಷೆಯಾಗಿರುತ್ತದೆ. ರಾಜ್ಯದಲ್ಲಿ ಕನ್ನಡ ಭಾಷೆಯ ಸಮಗ್ರ ಅಭಿವೃದ್ಧಿಗಾಗಿ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿಗಾಗಿ ಸರ್ಕಾರದ ಎಲ್ಲಾ ಇಲಾಖೆಗಳಲ್ಲಿನ ನಾಮಫಲಕಗಳು ಕಡ್ಡಾಯವಾಗಿ ಕನ್ನಡದಲ್ಲಿಯೇ ಪ್ರದರ್ಶಿಸಲು ಆದೇಶ ರಾಜ್ಯ ಸರ್ಕಾರದಿಂದ ಆದೇಶ ಹೊರಡಿಸಲಾಗಿದೆ. ರಾಜ್ಯದ ಎಲ್ಲಾ ಸರ್ಕಾರಿ ಅಧಿಕಾರಿಗಳು ಈ ನಿಮಯವನ್ನು ಪಾಲಿಸುವಂತೆ ಆದೇಶದಲ್ಲಿ ಸೂಚಿಸಲಾಗಿದೆ.

ಸರ್ಕಾರದ ‌ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಈ ಬಗ್ಗೆ ಪ್ರಕಟಣೆ ಹೊರಡಿಸಿದ್ದು, ಕರ್ನಾಟಕ ರಾಜ್ಯದಲ್ಲಿ ಕನ್ನಡವೇ ಆಡಳಿತ ಭಾಷೆಯಾಗಿರುತ್ತದೆ. ರಾಜ್ಯದಲ್ಲಿ ಕನ್ನಡ ಭಾಷೆಯ ಸಮಗ್ರ ಅಭಿವೃದ್ಧಿಗಾಗಿ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮ, 2022 ಹಾಗೂ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ (ತಿದ್ದುಪಡಿ) ಅಧಿನಿಯಮ, 2024 ಜಾರಿಗೆ ಬಂದಿದೆ. ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮ, 2022 ರನ್ವಯ ಕನ್ನಡ ಭಾಷೆಯು ರಾಜ್ಯದ ಹಾಗೂ ಸ್ಥಳೀಯ ಪ್ರಾಧಿಕಾರದ ಅಧಿಕೃತ ಭಾಷೆಯಾಗಿದೆ.

Kannada Is Mandatory In Government All Departments Name Plates

ಆದ್ದರಿಂ, ಸರ್ಕಾರದ ಎಲ್ಲಾ ಇಲಾಖೆಗಳಲ್ಲಿ ಇಲಾಖೆಗಳ ಅಧೀನದಲ್ಲಿ ಬರುವ ಎಲ್ಲಾ ಕ್ಷೇತ್ರ ಇಲಾಖೆಗಳಲ್ಲಿ, ಆಯುಕ್ತಾಲಯ, ನಿರ್ದೇಶನಾಲಯ, ನಿಗಮ, ಮಂಡಳಿ, ಪ್ರಾಧಿಕಾರಗಳ ಆವರಣಗಳಲ್ಲಿನ ಹೆಸರು, ಪದನಾಮ, ಸೇವಾ ಅವಧಿಯ ನಾಮಫಲಕಗಳು, ಮಾರ್ಗಗಳ ಸೂಚನಾ ಫಲಕಗಳು, ಇನ್ನಿತರೆ ಯಾವುದೇ ನಾಮಫಲಕಗಳನ್ನು ಕಡ್ಡಾಯವಾಗಿ ಕನ್ನಡದಲ್ಲಿಯೇ ಪ್ರದರ್ಶಿಸಬೇಕು. ಎಲ್ಲಾ ನಾಮಫಲಕಗಳು ಕಡ್ಡಾಯವಾಗಿ ಕನ್ನಡದಲ್ಲಿಯೇ ಇರಬೇಕು.

ಮುಂದುವರೆದು, ತೀರಾ ಅನಿವಾರ್ಯವಿದ್ದಲ್ಲಿ ಮಾತ್ರ ಕಡ್ಡಾಯವಾಗಿ ಕನ್ನಡ ಭಾಷೆಯು ಶೇಕಡ 60ರಷ್ಟು ನಾಮಫಲಕದ ಮೇಲ್ಭಾಗದಲ್ಲಿ ಇರುವಂತೆ ಹಾಗೂ ಶೇಕಡ 40ರಷ್ಟು ಆಂಗ್ಲ ಭಾಷೆಯಲ್ಲಿ ಪ್ರದರ್ಶಿಸಲು ರಾಜ್ಯದ ಎಲ್ಲಾ ಇಲಾಖೆ ಅಧಿಕಾರಿಗಳು ಅಗತ್ಯ ಕ್ರಮ ವಹಿಸುವಂತೆ ಸರ್ಕಾರದ ‌ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+